ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಉಡುಪಿ: ಪ್ರಸ್ತುತ ಸಾಲಿನ ಸ್ವಯಂ ಉದ್ಯೋಗ, ಐರಾವತ, ಪ್ರೇರಣಾ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಹ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕಾವೆಂರ‍್ಸ್ ಹಾಗೂ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು www.ksskdc.kar.nic.in  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮ, “ಬಿ” ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, […]

ಅಕ್ರಮವಾಗಿ ಮರ ಕಡಿದು ಸಾಗಾಟ: ಅರಣ್ಯಾಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಜಾಲವೊಂದನ್ನು ಕಾರ್ಕಳ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಕಳ ತಾಲೂಕಿನ ಅಂಡಾರು ಗ್ರಾಮ ವ್ಯಾಪ್ತಿಯ ಕೊಂಡಾಡಿ ಎಂಬಲ್ಲಿ ಬಂಧಿಸಿದ್ದಾರೆ. ಎರಡು ಲಕ್ಷಕ್ಕೂ ಮಿಕ್ಕಿದ ಮೌಲ್ಯದ ಸುಮಾರು ಐವತ್ತು ಹೆಬ್ಬಲಸು ದಿಮ್ಮಿಗಳು, ಸಾಗಾಟಕ್ಕೆ ಬಳಸುವ ಪಿಕಪ್ ವಾಹನ, ಮರಕಟ್ಟಿಂಗ್ ಮಾಡುವ ಯಂತ್ರಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ರಮೇಶ್ ಗೌಡ ಅಂಡಾರು, ಸತೀಶ್ ಹೆಗ್ಡೆ ಕಡ್ತಲ, ಸತೀಶ್ ಗೌಡ ಅಂಡಾರು, ಪ್ರಶಾಂತ ಎಂ.ಕೆ, ಹರೀಶ್ ನಾಯ್ಕ್, ಭಾಸ್ಕರ್ […]

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಸೆಪ್ಟೆಂಬರ್.9: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬAದಪಟ್ಟ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ ರಾಷ್ಟೀಯ ಹೆದ್ದಾರಿಯ ಅಧಿಕಾರಿಗಳಿಗೆ ಜಿಲ್ಲಾಧಿಕರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ , ಜಿಲ್ಲೆಯ  ರಾಷ್ಟೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬAದಪಟ್ಟ ಬಾಕಿ ಇರುವ ಕಾಮಗಾರಿಗಳ  ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರದ ಫೈ ಓವರ್ ಕಾಮಗಾರಿ, ಮೂರ್‌ಕೈ ಬಳಿಯ ಅಂಡರ್‌ಪಾಸ್ ಕಾಮಗಾರಿ,  ಪಡುಬಿದ್ರೆಯ […]

ತೆಲುಗಿನ ಜನಪ್ರಿಯ ಕಿರುತೆರೆ ನಟಿ ಶ್ರಾವಣಿ ಆತ್ಮಹತ್ಯೆ: ಸ್ನೇಹಿತನಿಂದ ಕಿರುಕುಳ ಆರೋಪ

ಹೈದರಬಾದ್: ತೆಲುಗಿನ ಜನಪ್ರಿಯ ಕಿರುತೆರೆ ನಟಿ ಶ್ರಾವಣಿ ಅವರು ಮಧುರಾ ನಗರದಲ್ಲಿ ಇರುವ ತಮ್ಮ ನಿವಾಸದಲ್ಲಿ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರಾವಣಿ ಅವರು ‘ಮನಸು ಮಮತ’, ‘ಮೌನರಾಗಂ’ ಮೊದಲಾದ ತೆಲುಗಿನ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದರು. ಕೆಲದಿನಗಳ ಹಿಂದೆ ಟಿಕ್‌ಟಾಕ್ ಮೂಲಕ ಪರಿಚಯವಾದ ದೇವರಾಜ್ ರೆಡ್ಡಿ ಎನ್ನುವ ವ್ಯಕ್ತಿ ಈಕೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಪ್ರೀತಿ ನಾಟಕವಾಡಿ ಕೆಲ ಫೋಟೊ, ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ದುಡ್ಡು ಪೀಕಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಶ್ರಾವಣಿ ಪೊಲೀಸರಿಗೆ ದೂರು […]

ಗೋಡೆ ಕುಸಿದು ಆರು ವರ್ಷದ ಬಾಲಕಿ ಸಾವು

ಚಿತ್ರದುರ್ಗ: ಧಾರಾಕಾರವಾಗಿ ಸುರಿದ ಮಳೆಯಿಂದ ಗೋಡೆ ಕುಸಿದು ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಚಳ್ಳೆಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ಬಾಲಕಿಯನ್ನು ಚಲ್ಮೇಶ ಮತ್ತು ಲಕ್ಷ್ಮೀದೇವಿ ದಂಪತಿಯ ಪುತ್ರಿ ಸೃಜನಾ (6) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದಾಗ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ ಎಂದು ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ತಿಳಿಸಿದ್ದಾರೆ.