ಉಡುಪಿಯಲ್ಲಿ 224ನೇ ಸಂಗೊಳ್ಳಿ ರಾಯಣ್ಣರ ಜಯಂತ್ಯೋತ್ಸವ ಆಚರಣೆ

ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇದರ ವತಿಯಿಂದ 224ನೇ ಸಂಗೊಳ್ಳಿ ರಾಯಣ್ಣರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉಡುಪಿಯಲ್ಲಿ ಆಯೋಜಿಸಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಲದ ಆಧ್ಯಕ್ಷ ಯಶ್ ಪಾಲ್ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಮಸೇನೆಯ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಸಂಗೊಳ್ಳಿ ರಾಯಣ್ಣ ಸಂಘದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಪತ್ರಿಕಾ ಛಾಯಾಗ್ರಾಹಕ ಜನಾರ್ಧನ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.
ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ

ನವದೆಹಲಿ: ಮಾಜಿ ಕೇಂದ್ರ ಸಚಿವ, ಆರ್ ಜೆಡಿ ಪಕ್ಷದ ಹಿರಿಯ ನಾಯಕರಾಗಿದ್ದ ರಘುವಂಶ್ ಪ್ರಸಾದ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ರಘುವಂಶ್ ಪ್ರಸಾದ್ ಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ. ರಘುವಂಶ್ ಪ್ರಸಾದ್ […]
ಸೆ. 17ರಿಂದ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೆ. 17ರಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮಳೆ ಹಾನಿ, ನೆರೆ ಪರಿಹಾರದ ಬಗ್ಗೆ ಪ್ರಧಾನಿ ಜತೆಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಿಎಂ ದೆಹಲಿ ಪ್ರವಾಸ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದಿಬಂದಿದೆ. ಇದೇ ವೇಳೆ ಪ್ರಧಾನಿ ಜೊತೆಗೆ ಮಳೆ ಹಾನಿ ಹಾಗೂ ನೆರೆ […]
ಕಾಪು ಕಾರು ಅಪಘಾತ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಉಡುಪಿ: ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸೆ.11ರಂದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ಕು ಮಂದಿ ಯುವಕರು ಗಾಯಗೊಂಡಿದ್ದರು. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ (30) ಎಂಬ ಯುವಕ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆತನ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಮೃತ […]
ಉಸಿರಾಟದ ಸಮಸ್ಯೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲು

ನವದೆಹಲಿ: ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದರಿಂದ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆ. 31ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣದಿಂದ ಶನಿವಾರ ರಾತ್ರಿ 11 ಗಂಟೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.