ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್) ಮುಂದೂಡಿಕೆ
ನವದೆಹಲಿ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್)ಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮುಂದೂಡಿದೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಪರೀಕ್ಷೆಯ ದಿನಾಂಕಗಳಂದೇ ನೆಟ್ ಪರೀಕ್ಷೆ ನಿಗದಿಯಾಗಿದ್ದರಿಂದ ಈ ಕ್ರಮ ಕೈಗೊಂಡಿದೆ. ಈ ಹಿಂದೆ ಸೆ.16ರಿಂದ 25ರವರೆಗೆ ನೆಟ್ ನಿಗದಿಯಾಗಿತ್ತು. ಆದರೆ ಇದೀಗ ಈ ಪರೀಕ್ಷೆಯನ್ನು ಸೆ.24ರಿಂದ ಆರಂಭಿಸಲು ಎನ್ಟಿಎ ನಿರ್ಧರಿಸಿದೆ. ಶೀಘ್ರದಲ್ಲೇ ವಿಷಯವಾರು ದಿನಾಂಕ, ಅವಧಿಯನ್ನು ಎನ್ಟಿಎ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ ಎಂದು ತಿಳಿಸಿದೆ.
ಕಾಂಗ್ರೆಸ್ನಿಂದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೋಸ: ಛಲವಾದಿ ನಾರಾಯಣ ಸ್ವಾಮಿ
ಉಡುಪಿ: ದಲಿತ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ಗೆ ಮಾತ್ರ ಬಳಸಿಕೊಂಡಿರುವ ಕಾಂಗ್ರೆಸ್ ಇಂದು ತನ್ನದೇ ಮೋಸ ಜಾಲದಿಂದ ನಾಶಗೊಳ್ಳುತ್ತಿದೆ. ಬಹುಕಾಲದಿಂದ ಶೋಷಣೆ, ದೌರ್ಜನ್ಯಕ್ಕೊಳಗಾಗಿರುವ ಪರಿಶಿಷ್ಟ ಜಾತಿ ಸಮುದಾಯಕ್ಕೆ ಕಾಂಗ್ರೆಸ್ನಿಂದ ಅನ್ಯಾಯವಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿಯಿಂದ ಮಾತ್ರ ಎಲ್ಲ ವರ್ಗಗಳ ಅಭಿವೃದ್ಧಿ ಸಾಧ್ಯ. […]
ಉಡುಪಿ: ಜಿಲ್ಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಗ್ರಂಥಾಲಯ ಸೇವೆ ಶುರು
ಉಡುಪಿ: ಸರಕಾರದ ಆದೇಶದ ಮೇರೆಗೆ ಸೆಪ್ಟಂಬರ್ 12 ರಿಂದ ನಗರ ಕೇಂದ್ರ ಗ್ರಂಥಾಲಯ, ಕೆ. ಎಂ. ಮಾರ್ಗ ಉಡುಪಿಯ ಮುಖ್ಯ ಶಾಖೆ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಶಾಖಾ ಗ್ರಂಥಾಲಯಗಳಲ್ಲಿ ಗ್ರಂಥಾಲಯ ಸೇವೆಯನ್ನು ಸಾರ್ವಜನಿಕ ಓದುಗರಿಗೆ ಸುರಕ್ಷತಾ ಕ್ರಮಗಳೊಂದಿಗೆ ಪುನಃ ಪ್ರಾರಂಭಿಸಲಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸಲಿಂಗ ವಿವಾಹವನ್ನು ಕಾನೂನು, ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರದಿಂದ ದೆಹಲಿ ಹೈಕೋರ್ಟ್ ಸ್ಪಷ್ಟನೆ
ನವದೆಹಲಿ: ಸಲಿಂಗ ವಿವಾಹ ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದೆ. ಅದಕ್ಕೆ ಕಾನೂನಿನಲ್ಲಿ ಅವಕಾಶವೂ ಇಲ್ಲ. ಸಮಾಜವೂ ಅದನ್ನು ಒಪ್ಪುವುದಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್ಗೆ ತಿಳಿಸಿದೆ. ಸಲಿಂಗ ವಿವಾಹಕ್ಕೆ ಹಿಂದೂ ವಿವಾಹ ಕಾಯ್ದೆ (ಎಚ್ಎಂಎ) ಹಾಗೂ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಮಾನ್ಯತೆ ನೀಡಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಹಾಗೂ ನ್ಯಾಯಮೂರ್ತಿ ಪ್ರತೀಕ್ ಜಲಾನ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಇಂದು ಅದರ ಬಗ್ಗೆ ವಿಚಾರಣೆ ನಡೆಸಿತು. ಸಂಸ್ಕಾರಯುತವಲ್ಲದ […]
ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಸಹಿತ ಐವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿ ಆರೋಪದಡಿ ಬಂಧಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಸಹಿತ ಐವರು ಆರೋಪಿಗಳಿಗೆ ನಗರದ 1ನೇ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ನಡಿ ಸಂಜನಾಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಡ್ರಗ್ಸ್ ಪ್ರಕರಣ ಸಂಬಂಧ ಆರೋಪಿಗಳನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಅದರ ಅವಧಿ ಅಂತ್ಯಗೊಂಡಿದ್ದರಿಂದ ಇಂದು ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಆರೋಪಿಗಳಾದ ರಾಗಿಣಿ, ಪ್ರಶಾಂತ್ […]