ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರ ಆಗ್ರಹ: ಬೇಡಿಕೆ ಈಡೇರದಿದ್ದರೆ ಸೆ. 21ರಿಂದ ಮುಷ್ಕರದ ಎಚ್ಚರಿಕೆ

ಉಡುಪಿ: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಮಾದರಿಯಲ್ಲಿ ವೇತನ ಪರಿಷ್ಕರಣೆ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಉಡುಪಿ ಜಿಲ್ಲಾ ಶಾಖೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಡಾ. ಎಚ್. ಪ್ರಕಾಶ್ ಕುಮಾರ್ ಶೆಟ್ಟಿ, ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಅಲ್ಲದೆ ಆಗಸ್ಟ್ 15ರೊಳಗೆ ಬೇಡಿಕೆಗಳನ್ನು ಈಡೇರದೆ […]

ನ್ಯಾಯಾಂಗ ನಿಂದನೆ: 1 ರೂ. ದಂಡ ಪಾವತಿಸಿದ ಪ್ರಶಾಂತ್ ಭೂಷಣ್

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್‌ ಅವರು ಸೋಮವಾರ ಪಾವತಿಸಿದರು. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್‌ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್‌, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಅದರಂತೆ ಇಂದು ಅವರು ದಂಡ ಪಾವತಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್‌ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ. […]

ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಮುಖಂಡನ ಸಹೋದರನಿಗೆ ನೋಟಿಸ್

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ತನಿಖೆ ನಡೆಸುತ್ತಿರುವ ಸಿಬಿಐ ಇದೀಗ ವಿಚಾರಣೆಗೆ ಹಾಜರಾಗುವಂತೆ ಕೋರಿ ಕಾಂಗ್ರೆಸ್ ಮುಖಂಡನ ಸಹೋದರನಿಗೆ ನೋಟಿಸ್ ಜಾರಿ ಮಾಡಿದೆ. ಧಾರವಾಡದ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಅವರ ಸಹೋದರ ವಿಜಯ್ ಅವರಿಗೆ ಸಿಬಿಐ ನೋಟಿಸ್ ನೀಡಿದ್ದು, ಅದರಂತೆ ನೋಟಿಸ್ ಪಡೆದಿರುವ ವಿಜಯ್, ನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗಾಗಿ ಸೋಮವಾರ ಬೆಳಿಗ್ಗೆ ಹಾಜರಾಗಿದ್ದಾರೆ. ಸಿಬಿಐ ಅಧಿಕಾರಿಗಳು ವಿಜಯ್ ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ […]

ಸ್ಟಾರ್ ನಟ ಕಮ್ ನಿರ್ದೇಶಕನೊಂದಿಗೆ ನಟಿ ಸಂಜನಾಗೆ ನಂಟು: ಸಿಸಿಬಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಡ್ರಗ್ಸ್ ದಂಧೆಯ ನಂಟಿನ ಆರೋಪದಡಿ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಿರ್ದೇಶಕ, ಬಹುಭಾಷಾ ನಟನೊಂದಿಗೆ ನಂಟು ಇತ್ತು ಎಂಬ ವಿಚಾರ ಈಗ ಸಿಸಿಬಿ ತನಿಖೆಯಿಂದ ಹೊರಬಿದ್ದಿದೆ. ಪೊಲೀಸರು ಸಿದ್ಧಪಡಿಸಿರುವ ಬಂಧಿತ ನಟಿಯರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಲಿಸ್ಟ್ ನಲ್ಲಿ ಈ ಸ್ಟಾರ್ ನಿರ್ದೇಶಕನ ಹೆಸರಿದೆ. ಈ ಸ್ಟಾರ್ ನಿರ್ದೇಶಕ ಸಂಜನಾಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕೆಗೆ ಹೆಚ್ಚು ಆಪ್ತನಾಗಿದ್ದ. ಅಲ್ಲದೆ, ಆಕೆಗೆ ಸ್ಯಾಂಡಲ್ ವುಡ್ ನಲ್ಲಿ ಗಾಢ್ ಫಾದರ್ ನಂತಿದ್ದ. […]