ಜನರ ಮೇಲೆ ಕಾಳಜಿ ಇದ್ದರೆ, ಕೂಡಲೇ ವೈದ್ಯರ ಬೇಡಿಕೆ ಈಡೇರಿಸಿ: ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ ವಿನಯರಾಜ್ ಆಗ್ರಹ

ಮಂಗಳೂರು: ಕೊರೊನಾ ಬಂದಾಗಿನಿಂದಲೂ ವೈದ್ಯರು ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಎನ್ನದೇ ದುಡಿಯುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಅವರ ಸಮಸ್ಯೆಗಳಿಗೆ ಸ್ಪಂದಿಸದೆ ಅಸಡ್ಡೆ ತೋರುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಸಿ. ವಿನಯರಾಜ್ ದೂರಿದ್ದಾರೆ. ವೈದ್ಯಾಧಿಕಾರಿಗಳ ಸಂಘವು ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಸೆಪ್ಟೆಂಬರ್ 21 ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ […]

ಬೆಳ್ಳಂಪಳ್ಳಿಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಜೀವ ಬೆದರಿಕೆಯೊಡ್ಡಿ ಹಲ್ಲೆಗೆ ಯತ್ನ: ದೂರು ದಾಖಲು

ಉಡುಪಿ: ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಂಪಳ್ಳಿ ಎಂಬಲ್ಲಿ ಕೊರೊನಾ ವಾರಿಯರ್‌ಗಳಿಗೆ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿ, ಜೀವ ಬೆದರಿಕೆಯೊಡ್ಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ಳಂಪಳ್ಳಿ ಆರೋಗ್ಯ ಉಪಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಾದ ವಸಂತಿ ಎಸ್. ಮತ್ತು ಕಲಾವತಿ ಹಾಗೂ ಸಿಬ್ಬಂದಿ ಜ್ಯೋತಿ ಕಿರಣ್, ಪ್ರತಿಮಾ, ಸಂತೋಷ್ ಮತ್ತು ಆಶಾ ಕಾರ್ಯಕರ್ತೆ ವಿಜಯ ಅವರು ಸೋಮವಾರ ಬೆಳ್ಳಂಪಳ್ಳಿಯ ಕಂಬ್ಲಮಜಲು ಗ್ರಾಮದಲ್ಲಿ ಕೊರೊನಾ ರೋಗಿಯ ಪ್ರಾಥಮಿಕ ಸಂಪರ್ಕ ಹೊಂದಿದ ಪತಿ ಸುರೇಂದ್ರ ಎಂಬವರ ಗಂಟಲದ್ರವದ ಮಾದರಿ ಸಂಗ್ರಹಿಸಲು […]

ಸುದರ್ಶನ ನ್ಯೂಸ್ ವಾಹಿನಿಯ ‘ಬಿಂದಾಸ್ ಬೋಲ್’ ಕಾರ್ಯಕ್ರಮದ ಎರಡು ಎಪಿಸೋಡ್ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಹಿಂದಿಯ ಸುದರ್ಶನ ನ್ಯೂಸ್ ವಾಹಿನಿಯ ವಿವಾದಿತ ‘ಬಿಂದಾಸ್ ಬೋಲ್’ ಕಾರ್ಯಕ್ರಮದ ಎರಡು ಎಪಿಸೋಡ್ ಪ್ರಸಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮುಸ್ಲಿಂ ಸಮುದಾಯವನ್ನು ‘ಕೆಟ್ಟದಾಗಿ’ ಬಿಂಬಿಸಲಾಗುತ್ತಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಇಂದು ಮತ್ತು ನಾಳೆ ಪ್ರಸಾರವಾಗಬೇಕಿದ್ದ ಎಪಿಸೋಡ್ ಗಳಿಗೆ ನಿರ್ಬಂಧ ವಿಧಿಸಿದೆ. ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠವು ಈ ಕಾರ್ಯಕ್ರಮದ ಬಗ್ಗೆ  ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿತ್ತು. ಸದ್ಯ ಕಾರ್ಯಕ್ರಮಕ್ಕೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿದೆ. […]

ಮದ್ಯಪ್ರಿಯರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ: ಯುಕೆಯಿಂದ ಬರಲಿದೆ ಸ್ಕ್ವಾಚ್ ವಿಸ್ಕಿ!

ನವದೆಹಲಿ: ಇಷ್ಟು ದಿನ ಅಬಕಾರಿ ಸುಂಕವನ್ನು ಹೆಚ್ಚಿಸಿ ಮದ್ಯಪ್ರಿಯರಿಗೆ ಶಾಕ್ ನೀಡುತ್ತಿದ್ದ ಕೇಂದ್ರ ಸರ್ಕಾರವು, ಇದೀಗ ಸಿಹಿ ಸುದ್ದಿಯೊಂದನ್ನು ನೀಡಲು ಮುಂದಾಗಿದೆ. ಯುಕೆಯಿಂದ ಸ್ಕ್ವಾಚ್ ವಿಸ್ಕಿಯನ್ನು ದೊಡ್ಡ ಪ್ರಮಾಣದಲ್ಲಿ ಭಾರತಕ್ಕೆ ಆಮದು ಮಾಡಿಕೊಳ್ಳಲು ಚಿಂತನೆ ನಡೆಸಿದೆ. ಮಂಗಳವಾರ ನಡೆದ ಸಿಐಐನ ಭಾರತ-ಯುಕೆ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಈ ಬಗ್ಗೆ ಮಾಹಿತಿ ನೀಡಿದರು. ‘ನಾನು ಸ್ಕ್ವಾಚ್ ವಿಸ್ಕಿಯನ್ನು ಕುಡಿಯುವುದಿಲ್ಲ. ಆದರೆ ಸ್ಕ್ವಾಚ್ ವಿಸ್ಕಿಯ ಹೆಸರಿನಲ್ಲಿ ಭಾರತದಲ್ಲಿ ಮಾರಾಟ ಆಗುತ್ತಿರುವ […]

ಕೇಂದ್ರ, ರಾಜ್ಯ ಸರಕಾರದ ಜನಪರ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು: ಕುಯಿಲಾಡಿ

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಕಾರ್ಯಕರ್ತರು ಪಣತೊಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಸಮುದಾಯಗಳನ್ನು ಒಂದೇ ಸೂರಿನಡಿ ಒಗ್ಗೂಡಿಸಿ ಸಂಘಟಿಸುವುದು ಸುಲಭದ ಮಾತಲ್ಲ. ಆದರೆ ನಿರಂತರ ಪ್ರಯತ್ನ ಮತ್ತು ಕಠಿಣ ಪರಿಶ್ರಮದಿಂದ ಇದು ಸುಲಭ […]