ಉಡುಪಿ: ಎರಡು ಅಂಗಡಿಗಳಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ

ಉಡುಪಿ: ಇಲ್ಲಿನ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಎರಡು ಅಂಗಡಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟುಹೋಗಿವೆ. ಬೆಂಕಿ ಅನಾಹುತದಿಂದ ಎರಡು ಅಂಗಡಿಗಳು ಕೂಡ ಭಾಗಶಃ ಸುಟ್ಟು ಹೋಗಿದ್ದು, ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಕರೆಂಟ್ ಶಾರ್ಟ್ ಸರ್ಕಿಟ್ ನಿಂದ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ ಟಿ.ಜಿ. ಹೆಗಡೆ, ನಗರ ಸಭೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢ

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಬೊಮ್ಮಾಯಿ ಅವರೇ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನೊಬ್ಬನಿಗೆ ಕೊರೊನಾ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನಾನು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸೋಂಕು ಇರುವುದು ಖಚಿತಗೊಂಡಿದೆ. ಯಾವುದೇ ರೋಗ ಲಕ್ಷಣ ಇಲ್ಲದೆ ಇರುವುದರಿಂದ ಮನೆಯಲ್ಲಿಯೇ ಪ್ರತ್ಯೇಕವಾಗಿ ಕ್ವಾರಂಟೈನ್ ಆಗಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗೆ ನನ್ನ […]