ಐಟಿ ಕಚೇರಿ ಸ್ಥಳಾಂತರ ಇಲ್ಲ, ಮಂಗಳೂರಿನಲ್ಲೇ ಮುಂದುವರಿಯಲಿದೆ: ಸಂಸದ ನಳಿನ್

ಮಂಗಳೂರು: ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿ ಸ್ಥಳಾಂತರ ಆಗುವುದಿಲ್ಲ. ಅದನ್ನು ಮಂಗಳೂರಿನಲ್ಲಿಯೇ ಮುಂದುವರಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿ ಸೂಚಿಸಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್ ಕಟೀಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನನ್ನ ವೈಯಕ್ತಿಕ ಮನವಿಗೆ ಸ್ಪಂದಿಸಿದ ವಿತ್ತ ಸಚಿವೆ ಹಾಗೂ ಸಹಕರಿಸಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಡಿ.ವಿ.ಸದಾನಂದ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು […]

ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ಸೀಮಿತಗೊಂಡಿದ್ದಾರೆ: ಬಿಜೆಪಿ ಶಾಸಕ ಉಮೇಶ್ ಕತ್ತಿ ಕಿಡಿ

ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪನವರು ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿಲ್ಲ. ಅವರು ಕೇವಲ ಶಿವಮೊಗ್ಗ ಜಿಲ್ಲೆಗಷ್ಟೇ ಸೀಮಿತವಾಗಿದ್ದಾರೆ ಎಂದು ಹುಕ್ಕೇರಿ ಬಿಜೆಪಿ ಶಾಸಕ ಉಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಕೊಡುತ್ತಿಲ್ಲ. ಇದರಿಂದ ನನಗೆ ಬಹಳ ನೋವಾಗಿದೆ ಎಂದು ಕಿಡಿಕಾರಿದರು. ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಮಾಡಿಕೊಡಬಹುದು ಎಂದು ಇಷ್ಟು ದಿನ ಕಾದಿದ್ದೆ. ಆದರೆ ಅದು ನಡೆಯುವ ಲಕ್ಷಣ ಕಾಣುತ್ತಿಲ್ಲ. ಹಾಗಾಗಿ ಅನಿವಾರ್ಯವಾಗಿ […]

ಪ್ರಸಾದ ರೂಪದಲ್ಲಿ ಬ್ರೌನ್‌ ಶುಗರ್ ಸಾಗಾಟ: ಒಬ್ಬನ ಬಂಧನ

ಬೆಂಗಳೂರು: ದೇವರ ಪ್ರಸಾದ ರೂಪದಲ್ಲಿ ಮಾದಕ ವಸ್ತು ಬ್ರೌನ್‌ ಶುಗರ್ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಸಿಟಿ ಮಾರ್ಕೆಟ್ ಪೊಲೀಸರು ಇಂದು ಬಂಧಿಸಿದ್ದಾರೆ. ಗಿರಿನಗರದ ನಿವಾಸಿ ವಿಕ್ರಮ್ ಖಿಲೇರಿ (25) ಬಂಧಿತ ಆರೋಪಿ. ಈತ ಪಟ್ನೂಲ್ ಪೇಟೆಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 90 ಗ್ರಾಂ ಬ್ರೌನ್ ಶುಗರ್, ಮೊಬೈಲ್, ಬೈಕ್‌ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಡ್ರಗ್ಸ್ ಪೊಟ್ಟಣದಲ್ಲಿ ತುಂಬುತ್ತಿದ್ದ ಆರೋಪಿ, ಅದರ ಮೇಲೆ […]

ಮೊಬೈಲ್ ಸಂದೇಶ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಬೆಳ್ಮಣ್ ಯುವಕ

ಉಡುಪಿ: ಸುಳ್ಳು ಮೊಬೈಲ್ ಸಂದೇಶವನ್ನು ನಂಬಿ ಯುವಕನೊಬ್ಬ ಲಕ್ಷಾಂತರ ರೂಪಾಯಿ ಕಳೆದಕೊಂಡ ಘಟನೆ ಬೆಳ್ಮಣ್ ನಲ್ಲಿ ನಡೆದಿದೆ. ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ವಂಚನೆ ಒಳಗಾಗಿ ಹಣ ಕಳೆದುಕೊಂಡವರು. ಈತನ ಮೊಬೈಲ್‌ಗೆ ಸೆ.4ರಂದು 12,18,095ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ಬಳಿಕ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ವರ್ಗಾವಣೆ ಮಾಡಲು 6,500ರೂ. ಪಾವತಿಸಬೇಕು ಎಂದು ನಂಬಿಸಿದ್ದನು. ಸುಜಿತ್ ಪ್ರಭು ಹಣವನ್ನು ಅವರ […]

ಎನ್ ಡಿಎ ಮೈತ್ರಿಕೂಟದಲ್ಲಿ ಬಿಕ್ಕಟ್ಟು: ಕೇಂದ್ರ ಸಚಿವೆ ಹರ್‌ಸಿಮ್ರತ್‌ ಕೌರ್ ಬಾದಲ್ ರಾಜೀನಾಮೆ

ನವದೆಹಲಿ: ಕೃಷಿ ಮಸೂದೆಯನ್ನು ವಿರೋಧಿಸಿ ಕೇಂದ್ರ ಆಹಾರ ಸಂಸ್ಕರಣ ಸಚಿವೆ ಹರ್‌ಸಿಮ್ರತ್‌ ಕೌರ್ ಬಾದಲ್ ಗುರುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರಬಂದಿದ್ದಾರೆ. ಕೌರ್ ಅವರು ಎನ್ ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಶಿರೋಮಣಿ ಅಕಾಲಿ ದಳದ ಸಂಸದೆ. ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಕೃಷಿ ಮಸೂದೆಗೆ ವಿರೋಧ […]