ಪ್ರಧಾನಿ ಮೋದಿ ಹುಟ್ಟುಹಬ್ಬ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಇಂದು ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಹಾಗೂ ಸಮಾಜ ಸೇವಕ, ಬಿಜೆಪಿ ಮುಖಂಡ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ […]

ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಮಂಡಲ ಯುವ ಮೋರ್ಚಾ ವತಿಯಿಂದ ಗುರುವಾರ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಜಿಲ್ಲೆಯಾದ್ಯಂತ ಯುವ ಮೋರ್ಚಾ ಕಾರ್ಯಕರ್ತರು ಸಕ್ರಿಯವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ 523 ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ, ರಾಜ್ಯ ಯುವ […]

ಪ್ರಧಾನಿ ಮೋದಿ ಹುಟ್ಟುಹಬ್ಬ: ಬಿಜೆಪಿ ಕಾರ್ಯಕರ್ತರಿಂದ ಹೆಜಮಾಡಿ ಬೀಚ್ ಸ್ವಚ್ಛತೆ

ಉಡುಪಿ: ಬಿಜೆಪಿ ಯುವ ಮೋರ್ಚಾ ಕಾಪು ವಲಯ ಮತ್ತು ಯುವ ಮೋರ್ಚಾ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಜಂಟಿ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಹಾ ಕಾರ್ಯಕ್ರಮದ ಅಂಗವಾಗಿ ಹೆಜಮಾಡಿ ಕಡಲ ಕಿನಾರೆಯಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ .ಮೆಂಡನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಮಂಗಳೂರು ಬಿಜೆಪಿ ವಿಭಾಗ ಪ್ರಭಾರಿ ಉದಯ್ ಕುಮಾರ್ […]

ಸಿಎಂ ಯಡಿಯೂರಪ್ಪನವರ ಬದಲಾವಣೆ ಖಚಿತ: ಶಹಾಪೂರ ಶಾಸಕ ಶರಣಬಸ್ಸಪ್ಪಗೌಡ

ಯಾದಗಿರಿ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪನವರ ಬದಲಾಗಿ ಅವರ ಪುತ್ರ ಅಧಿಕಾರ ಚಲಾಯಿಸುತ್ತಿದ್ದಾರೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಸಚಿವ, ಶಹಾಪೂರ ಕಾಂಗ್ರೆಸ್‌ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪೂರ ವ್ಯಂಗ್ಯವಾಡಿದರು. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಇಲಾಖೆಗಳಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ನಡೆಸುತ್ತಿದ್ದಾರೆ. ಸಿಎಂ ಪುತ್ರನ ಹಸ್ತಕ್ಷೇಪ ಇದೇ ರೀತಿ ಮುಂದುವರೆದರೆ ಸಿಎಂ ಸ್ಥಾನ ಬದಲಾವಣೆ ಖಚಿತ. ಎಲ್ಲ ಶಾಸಕರು ಬಿಎಸ್‌ವೈ ಕೈಬಿಡುತ್ತಾರೆ ಎಂದರು. ಬಿಜೆಪಿ ಹೈಕಮಾಂಡ್‌ ಎದುರು ಆಡಳಿತ ಪಕ್ಷದ ಕೆಲವು […]

ಗಂಗೊಳ್ಳಿ: ದೇವಸ್ಥಾನದೊಳಗೆ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ

ಗಂಗೊಳ್ಳಿ: ಇಲ್ಲಿನ ಶ್ರೀಮಹಾಕಾಳಿ ದೇವಳದ ಹಿಂಬದಿಯ ದೇವಸ್ಥಾನದಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ ವ್ಯಕ್ತಿಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈತನನ್ನು ರಕ್ಷಿಸಲು ಹೋದ ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬೆಂಕಿ ನಂದಿಸಲು ಹೋಗಿ ಗಾಯಗೊಂಡವರನ್ನು ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗುರುತಿಸಲಾಗಿದೆ. ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. […]