ಪ್ರಧಾನಿ ಮೋದಿ ಜನ್ಮದಿನ; ಕಾರ್ಕಳ ಬಿಜೆಪಿ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಕಾರ್ಕಳ: ಬಿಜೆಪಿ ಯುವ ಮೋರ್ಚಾ ಕಾರ್ಕಳದ ವತಿಯಿಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಎಪ್ಪತ್ತನೇ ಜನ್ಮದಿನದ ಅಂಗವಾಗಿ ಕಾರ್ಕಳದಲ್ಲಿ ಇಂದು ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬಿಜೆಪಿ ಹಿರಿಯ ಮುಖಂಡ ಎಂ.ಕೆ. ವಿಜಯ್ ಕುಮಾರ್ ಶಿಬಿರವನ್ನು ಉದ್ಘಾಟಿಸಿದರು.‌ ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮನಿರಾಜ್ ಶೆಟ್ಟಿ, ಕಾರ್ಯದರ್ಶಿ  ರೇಷ್ಮಾಉದಯ್ ಶೆಟ್ಟಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯನ್  ಮತ್ತು ನವೀನ್ ನಾಯಕ್, ಬಿಜೆಪಿ ಯುವ […]

ಇಂದು ಜನಪ್ರಿಯ ನಾಯಕ ನರೇಂದ್ರ ಮೋದಿ ಹುಟ್ಟುಹಬ್ಬ: ಪ್ರಧಾನಿ ಬಗ್ಗೆ ಒಂದಷ್ಟು ಮಾಹಿತಿ

ದೇಶದ ಅಪ್ರತಿಮ ಜನನಾಯಕ, ಭಾರತವನ್ನು ವಿಶ್ವಗುರುವನ್ನಾಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಸೆ.17) 70ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ರಾಜಕೀಯ ಹಾದಿಯಲ್ಲಿ ಬಿಜೆಪಿಯ ಸಂಘಟನೆ ಹೊಣೆಯನ್ನು ಯಶಸ್ವಿಯಾಗಿ ನಿಭಾಯಿಸಿ, ಪಕ್ಷವನ್ನು ಸಂಸತ್​ನ ಗದ್ದುಗೆಗೇರಿಸುವಲ್ಲಿ ಯಶಸ್ವಿಯಾಗಿರುವ ಮೋದಿ ಅವರು ಎರಡನೇ ಅವಧಿಗೂ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಸಫಲರಾಗಿದ್ದಾರೆ. ಇಡೀ ಜಗತ್ತಿಗೆ ಕಂಟಕವಾಗಿದ್ದ ಕೊರೊನಾ ಮಹಾಮಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ದೇಶವನ್ನು ಸುರಕ್ಷತೆಯ ಕಡೆಗೆ ಕೊಂಡೊಯ್ಯುವಲ್ಲಿ ಸಫಲರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಸದ್ದು ಅಡಗಿಸುವ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. […]

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ 25 ಗೋವುಗಳ ದತ್ತು ಸ್ವೀಕಾರ: ಯಶ್‌ಪಾಲ್ ಸುವರ್ಣ

ಉಡುಪಿ: ಭಾರತ ದೇಶ ಕಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬವನ್ನು ನೀಲಾವರ ಗೋಶಾಲೆಯ 25 ಗೋವುಗಳನ್ನು ತಮ್ಮ ವೈಯುಕ್ತಿಕ ನೆಲೆಯಲ್ಲಿ ದತ್ತು ಸ್ವೀಕರಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಗೋ ಸಂರಕ್ಷಣೆಗೆ ವಿಶೇಷ ಪ್ರೋತ್ಸಾಹ ನೀಡುವ ಉದ್ದೇಶದಿಂದ ಗೋ ಸಂರಕ್ಷಣೆ ಮತ್ತು ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿರುವ ಹೆಮ್ಮೆಯ ಪ್ರಧಾನಿ ನರೇಂದ್ರ […]