ವಿಶ್ವಕರ್ಮ ಸಮುದಾಯಕ್ಕೆ ಅಧಿಕಾರ ಶಕ್ತಿ ಕೊಡಿ: ನೇರಂಬಳ್ಳಿ ರಮೇಶ್ ಆಚಾರ್ಯ ಆಗ್ರಹ

ಉಡುಪಿ: ವಿಶ್ವಕರ್ಮ ಸಮುದಾಯಕ್ಕೆ ಬಿಜೆಪಿ ಸರ್ಕಾರದಿಂದ ನಿರೀಕ್ಷಿತ ಅನುಕೂಲ ಸಿಕ್ಕಿಲ್ಲ. ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವ ವಿಶ್ವಕರ್ಮ ಸಮುದಾಯಕ್ಕೆ ವಿಶೇಷ ಆರ್ಥಿಕ ಘೋಷಿಸಿಲ್ಲ, ಸಾಲಮನ್ನಾ ಮಾಡುವ ವಿಚಾರದಲ್ಲೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾ ಮುಖಂಡ ನೇರಂಬಳ್ಳಿ ರಮೇಶ್ ಆಚಾರ್ಯ ಬೇಸರ ವ್ಯಕ್ತಪಡಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಿಂದುಳಿದ ವರ್ಗಗಳ ಪೈಕಿ ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷ ಕೆ.ಪಿ ನಂಜುಂಡಿ ಅವರಿಗೆ ವಿಶೇಷ ಸ್ಥಾನಮಾನ ಕೊಟ್ಟು ಎಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾಯಕರನ್ನಾಗಿ ಮಾಡುತ್ತೇನೆ. ವಿಶ್ವಕರ್ಮ […]

ಬಿಜೆಪಿ ಸುಳ್ಳು ಹೇಳುವ ಕಾರ್ಖಾನೆ: ಪ್ರತಿಭಾ ಕುಳಾಯಿ ಆರೋಪ

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯಗಳ ವಿರೋಧಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮತ್ತು ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಶನಿವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಮಾತನಾಡಿ, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಗರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಬಿಜೆಪಿ ಪಕ್ಷವೇ ಸುಳ್ಳು ಮಾತನಾಡುವ ಕಾರ್ಖಾನೆಯಾಗಿ ಮಾರ್ಪಟ್ಟಿದೆ. ಕೊಟ್ಟ ಭರವಸೆಯನ್ನು ಈಡೇರಿಸದೆ ಜನರಿಗೆ ಅನ್ಯಾಯ ಮಾಡಿದ್ದಾರೆ […]

ಸೆ. 30ರ ವರೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭವಿಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊರೊನಾ ಕಡಿಮೆಯಾಗದ ಕಾರಣ ಸೆಪ್ಟೆಂಬರ್ 30 ರ ವರೆಗೂ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಸೆ. 21ರಿಂದ ಕೆಲ ನಿಬಂಧನೆಗಳೊಂದಿಗೆ ಶಾಲಾ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಆದರೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿದ್ದು, ನಿಯಂತ್ರಣಕ್ಕೆ ಬರುವವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಮಾಹಿತಿ ನೀಡಿದ್ದಾರೆ. ಸೆ. 30ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು […]

ಆದಿಉಡುಪಿ: ಭಾರೀ ಗಾಳಿಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ; ಬೈಕ್ ಸವಾರ ಪವಾಡ ಸದೃಶವಾಗಿ ಪಾರು

ಉಡುಪಿ: ಎಡೆಬಿಡದೆ ಸುರಿಯುತ್ತಿರುವ ಭಾರೀ ಗಾಳಿಮಳೆಗೆ ಆದಿಉಡುಪಿ ಪ್ರೌಢಶಾಲೆ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದ್ದು, ಬೈಕ್ ಸವಾರನೊಬ್ಬ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಇಂದು ಸಂಜೆ 6.45ರ ಸುಮಾರಿಗೆ ಗಾಳಿಮಳೆಯ ಹೊಡೆತಕ್ಕೆ ಮರ ಬುಡ ಸಮೇತ ರಸ್ತೆಗೆ ಉರುಳಿ ಬೀಳುವಾಗ ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ ಎನ್ನಲಾಗಿದೆ. ಇದರಿಂದ ಬೈಕ್ ಹಾನಿಯಾಗಿದ್ದು, ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಮರ ರಸ್ತೆ ಉರುಳಿ ಬಿದ್ದ ಪರಿಣಾಮ ಸಂಚಾರದಲ್ಲಿ […]

ಇಂದಿನಿಂದ ಮರಳುನಾಡಿನಲ್ಲಿ ಐಪಿಎಲ್ ಜಾತ್ರೆ ಶುರು: ಉದ್ಘಾಟನಾ ಪಂದ್ಯದಲ್ಲಿ ಮುಂಬೈ- ಚೆನ್ನೈ ತಂಡಗಳ ಸೆಣಸಾಟ

ಅಬುಧಾಬಿ: ಕೊರೊನಾ ಆತಂಕ, ಅಡೆತಡೆಗಳ ನಡುವೆಯೇ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ಉಣಬಡಿಸಲು ಇಂಡಿಯನ್ ಪ್ರೀಮಿಯರ್‌ ಲೀಗ್‌ ಟಿ20 (ಐಪಿಎಲ್ ) ಕ್ರಿಕೆಟ್ ಟೂರ್ನಿ ಇಂದಿನಿಂದ ಶುರುವಾಗಲಿದೆ. ಅಬುಧಾಬಿಯ ಅಲ್‌ ಝಯೀದ್ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಇದರೊಂದಿಗೆ 53 ದಿನಗಳ ಐಪಿಎಲ್‌ ಕ್ರಿಕೆಟ್ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರೇಕ್ಷಕರಿಲ್ಲದ ಜಾತ್ರೆ: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳಿಗೆ ಜನರನ್ನು ನಿರ್ಬಂಧಿಸಲಾಗಿದ್ದು, […]