ನಾವುಂದ: ಕಾರು- ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ನಾವುಂದ ಎಂಬಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ನಾವುಂದ ನಿವಾಸಿ ಎನ್.ಸಿ. ಇಸ್ಮಾಯಿಲ್ (55) ಎಂದು ಗುರುತಿಸಲಾಗಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ತಂದೆಯ ಶವ ವೀಕ್ಷಿಸಿದ ಪುತ್ರ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಭೀಕರವಾಗ್ತಿದೆ ಕಾರ್ಕಳ ಸ್ವರ್ಣೆಯ ಹರಿವು:ತೆಳ್ಳಾರು-ಮುಂಡ್ಲಿಯ ಭಯಂಕರ ನೋಟ ಹೀಗಿದೆ ನೋಡಿ
◊ ಶ್ರದ್ಧಾ ಪೂಜಾರಿ ಕಾರ್ಕಳ :ಕಳೆದ 2-3ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನರ ಜೀವನ ಅಸ್ತವ್ಯಸ್ತವಾಗಿದೆ.ಸ್ವರ್ಣೆಯ ಹರಿವು ಭಯಂಕರವಾಗಿದ್ದು ಭಯ ಹುಟ್ಟಿಸುವಂತಿದೆ. ತೆಳ್ಳಾರು ಮತ್ತು ಮುಂಡ್ಲಿಯನ್ನು ಸಂಪರ್ಕಿಸುವ ನದಿಯು ಉಕ್ಕಿ ಹರಿಯುವ ಮೂಲಕ ಸ್ವರ್ಣ ನದಿ ಜಲಾಶಯದ ರುದ್ರರೂಪ ಭಯ ಹುಟ್ಟಿಸುವಂತಿದೆ. ಹೊಲ ಗದ್ದೆಗಳು, ತೋಟ, ಮನೆಗಳಲ್ಲಿ ನೀರು ತುಂಬಿದ್ದು ಒಂದೆಡೆ ಪ್ರಕೃತಿಯ ಈ ರುದ್ರ ರಮಣೀಯ ನೋಟ ಸೊಗಸಾಗಿ ಕಂಡರೂ ಸದ್ಯ ಪ್ರವಾಹದ ಭೀತಿಯೇ ಎಲ್ಲರ ಕಣ್ಣೆದುರಿಗಿದೆ.
ಉಡುಪಿಯಲ್ಲಿ ಪ್ರವಾಹ ಹಿನ್ನೆಲೆ: ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಂಸದೆ ಶೋಭಾ ಸೂಚನೆ
ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಚರ್ಚಿಸಿ ಅಗತ್ಯದ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಉಡುಪಿಯಲ್ಲಿ ಪ್ರವಾಹದ ಭೀತಿ ಇರುವ ಕಾರಣದಿಂದ ಇನ್ನು ಹೆಚ್ಚಿನ ವಿಪತ್ತು ಪರಿಹಾರ ಕಾರ್ಯಪಡೆಯನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಟಿ. ಎಂ ವಿಜಯ ಭಾಸ್ಕರ್ ಅವರೊಂದಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಮನವಿಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಈಗಾಗಲೇ ಮಂಗಳೂರಿನಿಂದ ಒಂದು […]
ಉಡುಪಿ: ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಹೆಲಿಕಾಪ್ಟರ್ ಕಾರ್ಯಾಚರಣೆ: ಸಚಿವ ಬೊಮ್ಮಾಯಿ
ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತಿದ್ದು, ಇದರಿಂದ ಜಿಲ್ಲೆಯ ಹಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಪ್ರವಾಹದಿಂದ ಕೆಲವು ಗ್ರಾಮಗಳು ಜಲಾವೃತಗೊಂಡಿವೆ. ಹಾಗಾಗಿ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲು ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನಿಯೋಜಿಸಲು ಮನವಿ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಈ ಬಗ್ಗೆ ಕಂದಾಯ ಸಚಿವ ಜತೆಗೆ ಚರ್ಚಿಸಿ ಹೆಲಿಕಾಪ್ಟರ್ ನಿಯೋಜನೆ ಮಾಡಲಾಗುವುದು […]
ಉಡುಪಿಯಲ್ಲಿ ಭಾರೀ ಮಳೆ: ಅಂತಿಮ ವರ್ಷದ ಪದವಿ ಪರೀಕ್ಷೆ ಮುಂದೂಡಿಕೆ
ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಸೆ. 21) ನಡೆಯಬೇಕಿದ್ದ ಮಂಗಳೂರು ವಿವಿಯ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಸರ್ಕಾರ ಆದೇಶ ನೀಡಿದೆ. ನೆರೆ ಪರಿಸ್ಥಿತಿ ಇರುವುದರಿಂದ ವಿದ್ಯಾರ್ಥಿಗಳಿಗೆ ಬರಲು ಕಷ್ಟ ಆಗಬಹುದು ಎಂಬ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.