ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರು

ಬೆಂಗಳೂರು: ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ರಾಜ್ಯದ ಸಾವಿರಾರು ರೈತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನ ಎದುರಿನ ರಸ್ತೆಯಲ್ಲಿ ಜಮಾಯಿಸಿದ್ದ ಸಾವಿರಾರು ರೈತರು ರಾಜ್ಯ ಸರ್ಕಾರದ ದಿಕ್ಕಾರ ಕೂಗಿದರು. ವಿಧಾನಸೌಧದತ್ತ ಹೋಗಿ‌ ಮುತ್ತಿಗೆ ಹಾಕಲು ಮುಂದಾದರು. ಆದರೆ ಮಾರ್ಗಮಧ್ಯೆಯೇ ಪೊಲೀಸರು ಅವರನ್ನು […]

ವರ್ಗಾವಣೆ ವಿಚಾರ: ಸಚಿವ ನಾರಾಯಣ ಗೌಡ, ಶಾಸಕ ಬೆಳ್ಳಿಪ್ರಕಾಶ್ ಮಧ್ಯೆ ಮಾತಿನ ಫೈಟಿಂಗ್

ಬೆಂಗಳೂರು: ತೋಟಗಾರಿಕೆ ಸಚಿವ ಕೆ.ಸಿ.‌ ನಾರಾಯಣ ಗೌಡ ಮತ್ತು ಕಡೂರು ಶಾಸಕ ಬೆಳ್ಳಿಪ್ರಕಾಶ್ ನಡುವೆ ಇಂದು ವಿಧಾನಸಭೆಯ ಕ್ಯಾಂಟೀನ್ ನಲ್ಲಿ ಘರ್ಷಣೆ ಉಂಟಾಗಿದ್ದು, ಇಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು ಎನ್ನಲಾಗಿದೆ. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಅದು ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿತ್ತು ಎಂದು ತಿಳಿದುಬಂದಿದೆ. ಕ್ಯಾಂಟೀನ್ ಇಬ್ಬರು ಮುಖಾಮುಖಿಯಾಗಿದ್ದು, ಈ ವೇಳೆ ಶಾಸಕ ಬೆಳ್ಳಿ ಪ್ರಕಾಶ್ ವರ್ಗಾವಣೆ ವಿಚಾರಣೆ ಪ್ರಶ್ನಿಸಿದರು. ಆಗ ಸಚಿವ ನಾರಾಯಣ ಗೌಡ ಆಯ್ತು‌ ಮುಂದಿನ ವಾರ […]

ಕೃಷಿ ಮಸೂದೆಗಳು ರೈತ ವಿರೋಧಿಯಲ್ಲ: ಪ್ರಧಾನಿ ಮೋದಿ

ನವದೆಹಲಿ: ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿರುವ ಕೃಷಿ ಮಸೂದೆಗಳು ರೈತ ವಿರೋಧಿಯಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನೂತನ ಕೃಷಿ ಮಸೂದೆಗಳು ಇಂದಿನ ಕಾಲಕ್ಕೆ ಪ್ರಸ್ತುತವಾಗಿದ್ದು, ಇದರಿಂದ ರೈತರಿಗೆ ಉತ್ತಮ ಅನುಕೂಲವಿದೆ. ಆದರೆ ಈ ಮಸೂದೆಗಳ ಬಗ್ಗೆ ವಿರೋಧಪಕ್ಷಗಳು ಅಪಪ್ರಚಾರ ನಡೆಸುತ್ತಿವೆ ಎಂದು ಅವರು ಇಂದು ತಿಳಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ, ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ ಮುಂದುವರಿಯುತ್ತದೆ ಎಂಬುದಾಗಿ ರೈತರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದರು.  

ಪ್ರಜಾಸತ್ತಾತ್ಮಕ ಭಾರತದ ದನಿ ಹತ್ತಿಕ್ಕುವ ಕೆಲಸ ಮುಂದುವರಿದಿದೆ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸುವ ವೇಳೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಕಾಂಗ್ರೆಸ್ ನ ಮೂರು ಸದಸ್ಯರು ಸಹಿತ ಒಟ್ಟು ಎಂಟು ಸದಸ್ಯರನ್ನು ಅಮಾನತು ಮಾಡಲಾಗಿತ್ತು. ರಾಜ್ಯಸಭೆಯ ಎಂಟು ಸದಸ್ಯರನ್ನು ಅಮಾನತು ಮಾಡಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಜಾಸತ್ತಾತ್ಮಕ ಭಾರತದ ದನಿ ಹತ್ತಿಕ್ಕುವ ಕೆಲಸ ಮುಂದುವರಿದಿದೆ. ಸಂಸದರಿಗೆ ಮೊದಲು ಮಾತನಾಡುವ ಅವಕಾಶ ನಿರಾಕರಿಸಲಾಯಿತು. ನಂತರ ಅವರನ್ನು ಅಮಾನತು ಮಾಡಲಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ. […]

ಕೃಷಿ ವಿರೋಧಿ ಮಸೂದೆಗಳನ್ನು ಅಂಗೀಕರಿಸಿ, ರೈತರಿಗೆ ಮರಣ ಶಾಸನ ಬರೆಯಲು ಸರ್ಕಾರ ಹೊರಟಿದೆ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ರೈತರಿಗೆ ಮರಣ ಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲವಂತದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾವನ್ನು ನಿಯಂತ್ರಿಸಲಾಗದೆ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ ಸರ್ಕಾರವು, ಇದೇ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಕೊರೊನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ […]