ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಡ್ಡಾಯ: ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಸೆಪ್ಟೆಂಬರ್, 22: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದರು. ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಜನಪರ ಕಲ್ಯಾಣ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ, ಇವುಗಳ ಬಗ್ಗೆ ಅವರುಗಳಿಗೆ ಅರಿವು ಮೂಡಿಸುವುದರೊಂದಿಗೆ ಅವರನ್ನು ಫಲಾನುಭವಿಗಳನ್ನಾಗಿಸಬೇಕು […]

ಸಹಕಾರಿ ಬ್ಯಾಂಕ್ ಗಳನ್ನು ಆರ್ ಬಿಐ ಸುಪರ್ದಿಗೆ ತರುವ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ ಅಂಗೀಕಾರ

ನವದೆಹಲಿ: ಸಹಕಾರಿ ಬ್ಯಾಂಕ್ ಗಳನ್ನು ಆರ್ ಬಿಐ ಸುಪರ್ದಿಗೆ ತಂದು ಬಲಪಡಿಸಲು ಉದ್ದೇಶಿಸಿರುವ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಕರಡು ಮಸೂದೆಗೆ ಸಂಸತ್ತು ಮಂಗಳವಾರ ಅನುಮೋದನೆ ನೀಡಿದೆ. ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ 2020 ಅನ್ನು ಸುಗ್ರೀವಾಜ್ಞೆಯ ಬದಲಿಗೆ ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಬಂಡವಾಳಕ್ಕೆ ಅವಕಾಶ, ಆಡಳಿತ ಸುಧಾರಣೆ ಮತ್ತು ಆರ್ ಬಿಐ ಮೂಲಕ ಸದೃಢ ಬ್ಯಾಂಕಿಂಗ್ ವ್ಯವಸ್ಥೆಯನ್ನು ಖಾತ್ರಿಪಡಿಸುವ ಮೂಲಕ ಸಹಕಾರಿ ಬ್ಯಾಂಕ್ ಗಳನ್ನು ಬಲಪಡಿಸಲು ಈ ಮಸೂದೆ ಸಹಕಾರಿಯಾಗಲಿದೆ. ತಿದ್ದುಪಡಿಗೆ ಸೆಪ್ಟೆಂಬರ್ […]

ನವೆಂಬರ್ 1ರಿಂದ ಪದವಿ ಕಾಲೇಜುಗಳ ತರಗತಿ ಆರಂಭ: ಯುಜಿಸಿಯಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ನವದೆಹಲಿ: ನವೆಂಬರ್ 1ರಿಂದ ಪದವಿ ಕಾಲೇಜುಗಳ ಮೊದಲ ಸೆಮಿಸ್ಟರ್‌ ತರಗತಿಗಳು ಆರಂಭವಾಗಲಿವೆ. ಯುಜಿಸಿಯ ಪರಿಷ್ಕೃತ ಮಾರ್ಗಸೂಚಿಗಳನ್ನು ಕೇಂದ್ರ ಶಿಕ್ಷಣ ಸಚಿವಾಲಯ ಮಂಗಳವಾರ ಅಂಗೀಕರಿಸಿದೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್’ ವಿಶ್ವವಿದ್ಯಾಲಯಗಳ 2020-21ರ ಸಾಲಿನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ವರ್ಷದ ಶೈಕ್ಷಣಿಕ ವೇಳಾಪಟ್ಟಿಯ ಯುಜಿಸಿ ಮಾರ್ಗಸೂಚಿಗಳನ್ನು ಅನುಮೋದಿಸಿದೆ’ ಎಂದು ತಿಳಿಸಿದ್ದಾರೆ. ಒಂದು ವೇಳೆ ಪ್ರವೇಶ ರದ್ದತಿಯಾದರೆ ಶುಲ್ಕದ ಪೂರ್ಣ ಮರುಪಾವತಿ ಮಾಡಲಾಗುವುದು. ಲಾಕ್‌ಡೌನ್ ಸಂಬಂಧಿತ ಕಾರಣಗಳಿಂದಾಗಿ […]

ಡ್ರಗ್ಸ್ ಪ್ರಕರಣ: ನಟಿ ರಿಯಾ ಚಕ್ರವರ್ತಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ಡ್ರಗ್ಸ್ ಆರೋಪದಡಿ ಎನ್ ಸಿಬಿಯಿಂದ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅಕ್ಟೋಬರ್‌ 6ರ ವರೆಗೆ ವಿಸ್ತರಣೆಗೊಂಡಿದೆ. ಮುಂಬೈನ ಎನ್‌ಡಿಪಿಎಸ್‌ ವಿಶೇಷ ಕೋರ್ಟ್‌ ರಿಯಾ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ಇಂದು ಆದೇಶ ನೀಡಿದೆ. ಡ್ರಗ್ಸ್ ಆರೋಪದಡಿ ರಿಯಾಳನ್ನು ಎನ್ ಸಿಬಿ ಸೆ. 9ರಂದು ಬಂಧಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ (ಸೆ.22 ರವರೆಗೆ ) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ನ್ಯಾಯಾಂಗ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಮತ್ತೆ […]

ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ: ಬಾಕಿ ವೇತನ ಪಾವತಿಸಲು ಸಿಎಂ ಅಸ್ತು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,447 ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು. ಅವರು ಮಂಗಳವಾರ ವಿಧಾನ‌ ಪರಿಷತ್‌ನಲ್ಲಿ ಅತಿಥಿ ಉಪನ್ಯಾಸಕರ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು. ಕೊರೊನಾ ಲಾಕ್‌ಡೌನ್ ಕಾರಣದಿಂದ ಕಾಲೇಜುಗಳು ಮುಚ್ಚಿವೆ. ಮಾರ್ಚ್ ತಿಂಗಳವರೆಗೆ ಎಲ್ಲ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಲಾಗಿದೆ. ಏಪ್ರಿಲ್‌ನಿಂದ ಆಗಸ್ಟ್ ವರೆಗಿನ ವೇತನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ […]