ಉಡುಪಿ ನರ್ಮ್ ಬಸ್ ನಿಲ್ದಾಣದಲ್ಲಿ ನಿರ್ವಹಣೆಯ ಕೊರತೆ: ಸಾಂಕ್ರಾಮಿಕ ರೋಗ ಹರಡುವ ಭೀತಿ.!

ಉಡುಪಿ: ನಗರದ ನರ್ಮ್ ಬಸ್ ನಿಲ್ದಾಣ ನಿರ್ವಹಣೆ ಇಲ್ಲದೆ ತ್ಯಾಜ್ಯದಿಂದ ತುಂಬಿಕೊಂಡಿದ್ದು, ಮಾರಕ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಭೀತಿ ಎದುರಾಗಿದೆ. ಬಸ್ ನಿಲ್ದಾಣದಲ್ಲಿ ಕುಡುಕರು ಮದ್ಯ ಸೇವನೆ ಮಾಡುತ್ತಿದ್ದು, ಅಲ್ಲಲ್ಲಿ ಮದ್ಯದ ಬಾಟಲಿಗಳು ಬಿದ್ದಿರುವುದು ಕಂಡು ಬಂದಿವೆ. ದಿನ ಕಳೆದಂತೆ ಬಸ್ ನಿಲ್ದಾಣವು ಕುಡುಕರ ತಾಣವಾಗಿ ಮಾರ್ಪಾಡುತ್ತಿದೆ. ಹಾಗಾಗಿ ಸಂಬಂಧಪಟ್ಟವರು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಿಸಿದ್ದಾರೆ. ಇಲ್ಲಿ ನೆಲೆ ಕಂಡಿರುವ ವಲಸೆ […]

ಖ್ಯಾತ ಸಾಹಿತಿ ಡಾ. ಎಸ್.ಎಲ್. ಭೈರಪ್ಪನವರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ಕೊಡಲ್ಪಡುವ 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಟತಟ್ಟು ಗ್ರಾ.ಪಂ. ಆಡಳಿತಾಧಿಕಾರಿ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅಕ್ಟೋಬರ್ 10ರಂದು ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗುರುವಾರ […]

ಹಿರಿಯ ನಟ ರಾಕ್ ಲೈನ್ ಸುಧಾಕರ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದರು. ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಿನಿಮಾ ಒಂದರ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸೆಟ್‌ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ […]

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣ ಹಾಗೂ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಹೇರುವ ಸಾಧ್ಯತೆ ಇದೆ ಎಂಬ ವದಂತಿ ಹಬ್ಬಿತ್ತು. ಇದಕ್ಕೆ ಇಂದು ಸ್ಪಷ್ಟನೆ ನೀಡಿದ ಅಶ್ವಥ್ ನಾರಾಯಣ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಹೇರಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಶನಿವಾರ ಹಾಗೂ ಭಾನುವಾರ ಕೂಡ ಲಾಕ್ ಡೌನ್ ಮಾಡಲ್ಲ ಎಂದು ಹೇಳಿದರು.

ಆರು ತಿಂಗಳೊಳಗೆ ಕೊರೊನಾ ನಿಯಂತ್ರಿಸಿ: ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಸೂಚನೆ

ಬೆಂಗಳೂರು: ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದರ ಜತೆಗೆ ಅಗತ್ಯ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮುಂದಿನ ಆರು ತಿಂಗಳೊಳಗೆ ಕೋವಿಡ್ ನಿಯಂತ್ರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ. ಕೋವಿಡ್ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಜತೆ ಕರ್ನಾಟಕ ಸಹಿತ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಡೆದ ವಿಡಿಯೋ ಸಂವಾದ ನಡೆಯಿತು. ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ವೈಜ್ಞಾನಿಕ ಪರೀಕ್ಷೆ ಮತ್ತು ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಕೋವಿಡ್‍ನಿಂದ ಮರಣ ಹೊಂದಿರುವವರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು […]