ಸೆ. 28ರಂದು ಕರ್ನಾಟಕ ಬಂದ್: ಉಡುಪಿ ಜಿಲ್ಲೆಯಲ್ಲಿ 14 ಸಂಘಟನೆಗಳಿಂದ ಬೆಂಬಲ ಘೋಷಣೆ
ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರದ ಕೃಷಿ ಮಸೂದೆ, ಭೂ ಸುಧಾರಣಾ ತಿದ್ದುಪಡಿ ಕಾಯಿದೆ, ವಿದ್ಯುತ್ ಕಾಯಿದೆ ಹಾಗೂ ಕಾರ್ಮಿಕ ಕಾಯಿದೆ ತಿದ್ದುಪಡಿ ವಿರೋಧಿಸಿ ಸೆಪ್ಟೆಂಬರ್ 28ರ ಸೋಮವಾರದಂದು ರೈತ ಸಂಘಗಳು ಇತರ ಸಂಘಟನೆಗಳ ಸಹಕಾರಗಳೊಂದಿಗೆ ಕರೆ ಕೊಟ್ಟಿರುವ ‘ಕರ್ನಾಟಕ ಬಂದ್’ ಗೆ ಉಡುಪಿ ಜಿಲ್ಲೆಯ 14 ಸಂಘಟನೆಗಳು ಬೆಂಬಲ ನೀಡಿವೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ, ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ, ಕೆಆರ್ ಎಸ್ ಪಕ್ಷ , […]
ಮಂಗಳೂರಿನಲ್ಲಿ ಹೂಡಿದ್ದ ಸ್ಕೆಚ್ ಗೆ ಹಿರಿಯಡಕದಲ್ಲಿ ಮಟಾಷ್ ಆದ ರೌಡಿ ಕಿಶನ್ ಹೆಗ್ಡೆ.!
ಉಡುಪಿ: ಹಿರಿಯಡಕ ಪೇಟೆಯಲ್ಲಿ ಸೆ.24ರಂದು ಹಾಡು ಹಗಲಲ್ಲೇ ನಡೆದ ರೌಡಿಶೀಟರ್ ಪಡುಬಿದ್ರಿಯ ಇನ್ನಾ ನಿವಾಸಿ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕಾರ್ಕಳ ತಾಲೂಕಿನ ಮಾಳ ಸಮೀಪದ ಎಸ್.ಕೆ.ಬಾರ್ಡರ್ ಬಳಿ ಶನಿವಾರ ಬೆಳಗಿನ ಜಾವ ಬೇರೆ ಕಡೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು. ಮಂಗಳೂರಿನ ತೋಕೂರು ನಿವಾಸಿ ಮನೋಜ್ ಕುಲಾಲ್ (37), ಮಂಗಳೂರು […]
ಕುಂದಾಪುರ ಅರಾಟೆ ಸೇತುವೆಯಲ್ಲಿ ಬಿರುಕು; ಜನರಲ್ಲಿ ಮನೆಮಾಡಿದ ಆತಂಕ
ಉಡುಪಿ: ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುವ ಅರಾಟೆ ಸೇತುವೆಯಲ್ಲಿ ದೊಡ್ಡದಾದ ಬಿರುಕು ಕಾಣಿಸಿಕೊಂಡಿದ್ದು, ಜನರಲ್ಲಿ ಭೀತಿ ಹುಟ್ಟಿಸಿದೆ. ಚತುಷ್ಪತ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಅರಾಟೆ ಸೇತುವೆಯ ಪಕ್ಕದಲ್ಲೆ ಹೊಸ ಸೇತುವೆ ನಿರ್ಮಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಈ ಸೇತುವೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದು, ಈಗ ಏಕಾಏಕಿಯಾಗಿ ಬಿರುಕು ಕಾಣಿಸಿಕೊಂಡಿದೆ. ಇದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿದೆ. ಸದ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಹಳೆ ಸೇತುವೆಯ ಮೂಲಕ ಬಿಡಲಾಗುತ್ತಿದೆ. ಈ ಹಿಂದೆಯೂ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. […]
ಕರ್ನಾಟಕ ಬಂದ್ ಹಿನ್ನೆಲೆ: ಸೆ.28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಸೆ. 28ರಂದು ರೈತ ಸಂಘಟನೆ ಸಹಿತ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆ. 28ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ
ಉಡುಪಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ.ಟಿ. ರವಿ ಹಾಗೂ ರಾಷ್ಟ್ರೀಯ ವಕ್ತಾರರಾಗಿ ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ನೇಮಕಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕರ್ನಾಟಕದಿಂದ ಈ ಮೂವರು ನಾಯಕರಿಗೆ ಪಕ್ಷದ ಮಹತ್ವದ ಜವಾಬ್ದಾರಿಯನ್ನು ನೀಡಿ ಆದೇಶ ಹೊರಡಿಸಿದ್ದಾರೆ.