ಪತ್ರಕರ್ತ ಸಂಪತ್ ನಾಯಕ್ ವಿರುದ್ದ ಪ್ರಕರಣ ತನಿಖೆಗೆ ‌ತಡೆ: ಕರ್ನಾಟಕ ಉಚ್ಚನ್ಯಾಯಾಲಯದಿಂದ ಆದೇಶ

ಉಡುಪಿ : ದಿ.22.5.2020  ರಂದು ಕೊವಿಡ್ ಸಂಬಂದ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಿದ್ದರೂ ಸರಕಾರಿ ಪದವಿ ಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಕಾರ್ಕಳ ಇಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಮುರಳೀಧರ ಪ್ರಭು ವಿಧ್ಯಾರ್ಥಿಗಳನ್ನು ಕರೆಯಿಸಿ ಎಲ್ಲಾ ಸರಕಾರಿ ಆದೇಶಗಳನ್ನು ಉಲ್ಲಂಘಿಸಿ ತರಗತಿಯನ್ನು ನಡೆಸಿದ್ದರು. ತಾನು ಮಾಡಿದ ತಪ್ಪು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ತನ್ನ ತಪ್ಪನ್ನು ಮರೆಮಾಚಲು ಇದರ ಬಗ್ಗೆ ವಸ್ತು ನಿಷ್ಟ ವರದಿಯನ್ನು ಮಾಡಿದ ಪತ್ರಕರ್ತರಾದ ಸಂಪತ್ ಎಂಬವರ ಮೇಲೆ ದಿ 23-5-2020 ರಂದು ಕಾರ್ಕಳ […]

ಮಥುರಾ ಕೃಷ್ಣಜನ್ಮಭೂಮಿ ಬಳಿಯ ಮಸೀದಿ ತೆರವಿಗೆ ಆಗ್ರಹಿಸಿ ಕೋರ್ಟ್‌ಗೆ ದಾವೆ

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿಯ 13.37 ಎಕರೆ ಪ್ರದೇಶ ಹಿಂದೂಗಳಿಗೆ ಸೇರಿದ್ದು, ಇಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಈ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ. 1968ರ ರಾಜಿ ಪತ್ರವನ್ನು ಒಪ್ಪಲಾಗದು. ಕೃಷ್ಣ ಜನ್ಮಭೂಮಿಯಿಂದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಮಥುರಾದಲ್ಲಿನ ಕೃಷ್ಣ […]

ಡ್ರಗ್ಸ್ ನಂಟಿನ ಆರೋಪ: ಸತತ ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಅನುಶ್ರೀ

ಮಂಗಳೂರು: ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಇಂದು ಖ್ಯಾತ ಆ್ಯಂಕರ್ ಕಂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಸಿಸಿಬಿ ತಂಡ ಅನುಶ್ರೀಯನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ನಂತರ ಸಿಸಿಬಿ ಕಚೇರಿಯಿಂದ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಅನುಶ್ರೀ, ಬಂಧಿತ ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ರಾಜ್ ಪರಿಚಯವಿದ್ದ ಹಿನ್ನೆಲೆಯಲ್ಲಿ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಕೋರಿದ್ದರು. ಅದರಂತೆ ಇಂದು ವಿಚಾರಣೆಗೆ ಹಾಜರಾಗಿ […]

ಜಮ್ಮು-ಕಾಶ್ಮೀರದಲ್ಲಿ ಭೂಕಂಪನ: ಮನೆ, ಕಟ್ಟಡಗಳಲ್ಲಿ ಬಿರುಕು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಇಂದು ಮಧ್ಯಾಹ್ನ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದ ಅನೇಕ ಮನೆಗಳು, ಕಟ್ಟಡಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ಲೇಹ್ ನ ಸ್ಥಳೀಯರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ, ಆದರೆ ಯಾವುದೇ ಪ್ರಾಣಹಾನಿ […]

ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣ: ಐದು ಆರೋಪಿಗಳ ಅರೆಸ್ಟ್

ಹಿರಿಯಡಕ: ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಿರಿಯಡಕ ಪೇಟೆಯಲ್ಲಿ ಸೆ. 24ರಂದು ಮಧ್ಯಾಹ್ನ ಹಾಡುಹಗಲೇ ಕಿಶನ್ ಹೆಗ್ಡೆಯ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮನೋಜ್ ಕೋಡಿಕೆರೆ ಸೇರಿದಂತೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಾಹ್ನ ವೇಳೆಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ಬಳಿಕ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.