ವಿಷನ್ ಡೊಕ್ಯುಮೆಂಟ್ ಮಾಡುತ್ತಿರುವ ಏಕೈಕ ಜಿಲ್ಲೆ ಉಡುಪಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ ಸೆಪ್ಟೆಂಬರ್, 27: ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿದಂತಹ ಜಿಲ್ಲೆ ಮೊದಲಿನಿಂದಲೂ ಸಹ ಎಲ್ಲಾ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಅತ್ಯುತ್ತಮ ವಾತಾವರಣ ಹೊಂದಿ ಪ್ರವಾಸಿಗರನ್ನು ಹೆಚ್ಚು ಮನಸೆಳೆಯುವ ಜಿಲ್ಲೆಯಾಗಿದೆ. ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಇಂದು ಜಿಲ್ಲಾಡಳಿತ , ಪ್ರವಾಸೋದ್ಯಮ ಇಲಾಖೆ ಉಡುಪಿ, ಮಲ್ಪೆ ಅಭಿವೃದ್ಧಿ ಸಮಿತಿ, ನೆಹರು ಯುವ ಕೇಂದ್ರ ,ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ, ಜಿಲ್ಲೆ ಹಾಗೂ ಸೌಟ್ಕ್&ಗೈಡ್ಸ್ ಇವರ ಸಹಯೋಗದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಾಗೂ ಗ್ರಾಮೀಣಾಭಿವೃದ್ಧಿ […]

ವೇಶ್ಯಾವಾಟಿಕೆ ಅಪರಾಧವಲ್ಲ: ಮುಂಬೈ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮುಂಬೈ: ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ. ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಎಂದು ಮುಂಬೈ ಹೈಕೋರ್ಟ್ ತಿಳಿಸಿದೆ. ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ಮೂವರು ಮಹಿಳಾ ಲೈಂಗಿಕ ಕಾರ್ಯಕರ್ತೆಯರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್ ನ ನ್ಯಾಯಮೂರ್ತಿ ಪೃಥ್ವಿರಾಜ್ ಚೌಹಾಣ್‌ ಅವರ ನೇತೃತ್ವದ ನ್ಯಾಯಪೀಠ, ಈ ಅಭಿಪ್ರಾಯವನ್ನು ಮಂಡಿಸಿದ್ದು, 1956ರ ಅನೈತಿಕ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ವೇಶ್ಯಾವಾಟಿಕೆಯನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗಿಲ್ಲ ಎಂದು ಪ್ರತಿಪಾದಿಸಿದೆ. ಮೂವರು ಮಹಿಳೆಯರು ವಯಸ್ಕರಾಗಿದ್ದಾರೆ. ಅವರು ಇಚ್ಚಿಸಿದಂತೆ […]

ಸಂಸ್ಕೃತಿಯ ಉಳಿವಿಗಾಗಿ ಕರ್ತವ್ಯ ಅವಶ್ಯ: ವಿಶ್ವಪ್ರಸನ್ನತೀರ್ಥ ಶ್ರೀ

ಉಡುಪಿ: ಶತ ಶತಮಾನಗಳಿಂದ ನಮ್ಮ‌ ಹಿರಿಯರು ಅತ್ಯಂತ ವಿಶಿಷ್ಟವಾದ ಭಾರತೀಯ ಸಂಸ್ಕೃತಿಯನ್ನು ಉಳಿಸಲು ಶ್ರಮಿಸಿದ್ದಾರೆ. ಅದರ ಫಲವನ್ನು ನಾವೆಲ್ಲ ಉಣ್ಣುತ್ತಿದ್ದೇವೆ. ಹಾಗಂತ ನಾವು ವಿಶ್ರಮಿಸುವಂತಿಲ್ಲ. ನಮ್ಮ‌ಭವಿಷ್ಯದ ಪೀಳಿಗೆಯ ಒಳಿತಿಗಾಗಿ ಎಲ್ಲ ಸವಾಲುಗಳನ್ನು ಎದುರಿಸಿ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಎತ್ತಿಹಿಡಿಯುವ ಕರ್ತವ್ಯ ನಿರ್ವಹಿಸಲೇಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆನೀಡಿದ್ದಾರೆ. ಉಡುಪಿ ಜಿಲ್ಲಾ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ರಥಬೀದಿಯ ಶ್ರೀ ಭಂಡಾರಕೇರಿ ಮಠದ ಹಿಮಾಲಯ ಸಭಾಭವನದಲ್ಲಿ ಭಾನುವಾರ ಕಾರ್ಯಕರ್ತರ ಅಭ್ಯಾಸವರ್ಗವನ್ನು ಉದ್ಘಾಟಿಸಿ ಶ್ರೀಗಳು ಸಂದೇಶ […]

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಜಸ್ವಂತ್ ಸಿಂಗ್ (82) ಇಂದು ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಜಸ್ವಂತ್‌ ಸಿಂಗ್‌ ಅವರು ಜೂನ್ 25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಹುಅಂಗಾಂಗ ವೈಫಲ್ಯದಿಂದ ಬಳಸುತ್ತಿದ್ದ ಅವರಿಗೆ, ತಲೆಯಲ್ಲಿನ ಗಾಯವು ತೀವ್ರ ಸ್ವರೂಪ ಪಡೆದಿತ್ತು. ಇಂದು ಬೆಳಿಗ್ಗೆ ಅವರಿಗೆ ಹೃದಯ ಸ್ತಂಭನವಾಗಿ ಕೊನೆಯುಸಿರೆಳೆದರು ಎಂದು ದೆಹಲಿಯ ಸೇನಾ ಆಸ್ಪತ್ರೆ ತಿಳಿಸಿದೆ. ರಾಜಸ್ಥಾನ ಮೂಲದ ಜಸ್ವಂತ್ ಸಿಂಗ್ ಅವರು ಭಾರತದ ವಿದೇಶಾಂಗ ಇಲಾಖೆ, […]

ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಶಿರೋಮಣಿ ಅಕಾಲಿದಳ

ನವದೆಹಲಿ: ಶಿರೋಮಣಿ ಅಕಾಲಿದಳ (ಎಸ್‌ಎಡಿ) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಜತೆಗಿನ ಸುದೀರ್ಘ ಕಾಲದ ಸಂಬಂಧವನ್ನು ಕಡಿದುಕೊಂಡಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ಶಿರೋಮಣಿ ಅಕಾಲಿ ದಳ ವಿರೋಧ ವ್ಯಕ್ತಪಡಿಸಿದ್ದು, ಅದೇ ವಿಚಾರವಾಗಿ ಪಕ್ಷದ ನಾಯಕಿ ಹರ್ಸಿಮ್ರತ್‌ ಕೌರ್‌ ಕೇಂದ್ರ ಸಚಿವ ಸ್ಥಾನಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ್ದರು. ಎನ್‌ಡಿಎ ಜತೆಗಿನ ಮೈತ್ರಿ ಕಡಿದುಕೊಂಡ ಬಗ್ಗೆ ಪಕ್ಷದ ಅಧ್ಯಕ್ಷ ಸುಖ್ಬಿರ್‌ ಸಿಂಗ್‌ ಬಾದಲ್‌ ಶನಿವಾರ ಘೋಷಿಸಿದರು. ಈ ಬಗ್ಗೆ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರಕ್ಕೆ […]