ಮಲ್ಪೆ: ಸಂಪೂರ್ಣ ಕೊಳೆತು ಹೋದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

ಮಲ್ಪೆ: ಕೆಮ್ಮಣ್ಣು ಯಡಬೆಟ್ಟು ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಇರುವ ವ್ಯಕ್ತಿಯೊರ್ವರ ಶವ ಇಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಶೇಖರ ಪೂಜಾರಿ (55) ಎಂದು ಗುರುತಿಸಲಾಗಿದೆ. ಇವರು ಮುಂಬೈನಲ್ಲಿ ಹೋಟೆಲ್ ಉದ್ಯೋಗದಲ್ಲಿದ್ದು, ಲಾಕ್ ಡೌನ್ ಸಮಯದಲ್ಲಿ ಕೆಲಸ ಕಳೆದುಕೊಂಡು ಊರಿಗೆ ಬಂದಿದ್ದರು. ಕೂಲಿ ಕೆಲಸ ಮಾಡಿಕೊಂಡು ಒಂಟಿಯಾಗಿ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವು ಇತ್ತು ಎನ್ನಲಾಗಿದೆ. ಉಡುಪಿಯಲ್ಲಿ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದ ಬಹಳಷ್ಟು ಮನೆಗಳು ನೆರೆಗೆ ತುತ್ತಾಗಿದ್ದವು. ಮನೆ ಹಾನಿಯ ಪರಿಶೀಲಿಸಲು ಹೋದಂತಹ ಸಂದರ್ಭದಲ್ಲಿ […]

ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಕಾರ್ಕಳ: ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭುವನೇಂದ್ರ ಕಾಲೇಜಿನ ಬಿಸಿಎ ವಿದ್ಯಾರ್ಥಿ ಸಾಣೂರು ನಿವಾಸಿ ವಿಘ್ನೇಶ್ ಆಚಾರ್ಯ (20) ಭಾನುವಾರ ಮೃತಪಟ್ಟಿದ್ದಾರೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಘ್ನೇಶ್, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇವರು ಸಾಣೂರು ಶ್ರೀಧರ ಆಚಾರ್ಯ ಅವರ ಪುತ್ರ.

ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸಿ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ತರಲು ನೈತಿಕತೆ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣವಾಗುತ್ತದೆ ಎಂಬ ಭರವಸೆ ಇದ್ದರೆ ಯಡಿಯೂರಪ್ಪನವರು  ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಲಿ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ. ಕೊರೋನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಬೀದಿಗೆ ಬರಲಾರರು ಎಂಬ ದುಷ್ಟ ಆಲೋಚನೆಯಿಂದಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು […]

ಗಾಳಿಯ ಮೂಲಕ ಕೊರೊನಾ ಹರಡುವಿಕೆ: ಸಿಸಿಎಂಬಿ ಸಂಸ್ಥೆಯಿಂದ ಅಧ್ಯಯನ

ಹೈದರಾಬಾದ್: ಕೊರೊನಾ ಸೋಂಕಿತ ವ್ಯಕ್ತಿಯಿಂದ ಕೊರೊನಾ ವೈರಸ್‌ ಗಾಳಿಯಲ್ಲಿ ಸೇರಿಕೊಳ್ಳುತ್ತದೆಯೇ?. ಗಾಳಿಯಲ್ಲಿ ವೈರಸ್ ಹರಡುವುದಾದರೆ ಎಷ್ಟು ಸಮಯದವರೆಗೆ ಅದು ಜೀವಂತವಾಗಿರುತ್ತದೆ ಎಂಬ ನಿಟ್ಟಿನಲ್ಲಿ ಹೈದರಾಬಾದ್‌ನ ಸಿಎಸ್‌ಐಆರ್‌–ಸೆಂಟರ್ ಫಾರ್‌ ಸೆಲ್ಯುಲಾರ್‌ ಅಂಡ್ ಮಾಲಿಕ್ಯುಲರ್ ಬಯಾಲಜಿ (ಸಿಸಿಎಂಬಿ) ಸಂಸ್ಥೆ ಅಧ್ಯಯನ ಆರಂಭಿಸಿದೆ. ಗಾಳಿ ಮೂಲಕವೂ ಕೊರೊನಾ ವೈರಸ್‌ ಹರಡುತ್ತದೆ ಎಂದು ವಿಶ್ವದ ವಿವಿಧ ದೇಶಗಳ 200ಕ್ಕೂ ಹೆಚ್ಚು ಜನ ವಿಜ್ಞಾನಿಗಳು ವಿಶ್ವ ಆರೋಗ್ಯ ಸಂಸ್ಥೆಗೆ ಎರಡು ತಿಂಗಳ ಹಿಂದೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ಅಧ್ಯಯನ ಹೆಚ್ಚಿನ ಮಹತ್ವ […]

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗೀಕರಿಸಿರುವ ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತ, ಕಾರ್ಮಿಕ, ದಲಿತ, ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ಇಂದು ಕರೆಕೊಟ್ಟಿರುವ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕರಾವಳಿ ಮತ್ತು ಹಳೇ ಮೈಸೂರು ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿ ಮತ್ತು ಬಾಗಲಕೋಟೆಯಲ್ಲಿ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿಯೇತರ ರಾಜಕೀಯ […]