ಕಾಂಗ್ರೆಸ್ ಮುಖಂಡ, ತಾಪಂ ಮಾಜಿ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಬಿಜೆಪಿಗೆ ಸೇರ್ಪಡೆ

ಉಡುಪಿ: ಕಾಂಗ್ರೆಸ್ ಮುಖಂಡ, ತಾಪಂ ಮಾಜಿ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಇವರೊಂದಿಗೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ ಹಿಂದುಳಿದ ವರ್ಗದ ಅಧ್ಯಕ್ಷರಾಗಿದ್ದ ರಾಘವೇಂದ್ರ ಜೆ.ಪಿ., ಹಾರಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ, ನೀಲಾವರ ಗ್ರಾಪಂ ಮಾಜಿ ಉಪಾಧ್ಯಕ್ಷ ರಮೇಶ್ ಪೂಜಾರಿ, ಗ್ರಾಪಂ ಸದಸ್ಯೆ ಹೇಮಾ ವಿ. ಬಾಸ್ರಿ ಮೊದಲಾದವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ […]

ಉಡುಪಿಯಲ್ಲಿ ಬಂದ್ ಗೆ ನಿರಾಸ ಪ್ರತಿಕ್ರಿಯೆ: ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ

ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿ ಮಸೂದೆ, ಕಾರ್ಮಿಕ ಕಾಯ್ದೆಯನ್ನು ವಿರೋಧಿ ನಡೆಸಲಾಗುತ್ತಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯಲ್ಲೂ ಬಂದ್ ವಿವಿಧ ಸಂಘಟನೆಗಳು ಕರೆಕೊಟ್ಟಿವೆ. ಆದರೆ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಹಾಗಾಗಿ ಬಂದ್ ಗೆ ಕರೆ ನೀಡಿರುವ ಪ್ರತಿಭಟಾನಾಕಾರರು ಬಸ್ ಚಾಲಕರು ಹಾಗೂ ನಿರ್ವಾಹಕರಲ್ಲಿ ಬಸ್ ಬಿಡದಂತೆ ಮನವಿ ಮಾಡಿದರು. ಇದಕ್ಕೆ ಒಪ್ಪದಿದ್ದಾಗ ಬಸ್ ಚಾಲಕರು ಹಾಗೂ ಪ್ರತಿಭಟನಾಕಾರರ ಮಧ್ಯೆ […]

ಕಾರ್ಕಳ: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ

ಕಾರ್ಕಳ: ಉದ್ಯಮಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಹಿರ್ಗಾನ ಚಿಕ್ಕಲ್ ಬೆಟ್ಟುವಿನಲ್ಲಿ ನಡೆದಿದೆ. ಹಿರ್ಗಾನ ಚಿಕ್ಕಲ್ ಬೆಟ್ಟು ನಿವಾಸಿ ಸುನೀಲ್ ಶೆಟ್ಟಿ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಪುಣೆಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಪುಣೆಯಿಂದ ಊರಿಗೆ ಮರಳಿದ್ದರು. ಎಂಟು ತಿಂಗಳಿಂದ ಮನೆಯಲ್ಲಿ ಇದ್ದ ಅವರು ನಿನ್ನೆ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ ಬಳಿಕ ಕೃಷಿ ತೋಟದಲ್ಲಿ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್ನಲಾಗಿದೆ. ವಿವಾಹಿತರಾಗಿರುವ ಅವರಿಗೆ ಪತ್ನಿ, […]

ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣ: ಬಂಧಿತ ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಐವರು ಆರೋಪಿಗಳಿಗೆ ಉಡುಪಿ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಆರೋಪಿಗಳಾದ ಮನೋಜ್ ಕೋಡಿಕೆರೆ, ಚಿತ್ತರಂಜನ್ ಪೂಜಾರಿ, ಚೇತು ಪಡೀಲ್, ರಮೇಶ್ ಪೂಜಾರಿ, ದೀಕ್ಷಿತ್ ಶೆಟ್ಟಿ ಎಂಬವರನ್ನು ವಿಡಿಯೋ ಕಾನ್ಫೆ ರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗಳನ್ನು ಅ.1ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು ಎಂದು ತಿಳಿದುಬಂದಿದೆ. ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ಆರೋಪಿಗಳನ್ನು […]

ಮಣಿಪಾಲ ಸುಲಿಗೆ ಪ್ರಕರಣ: ಕಾಪು ಮೂಲದ ಆರೋಪಿಯ ಬಂಧನ

ಉಡುಪಿ: ಮಣಿಪಾಲ ಮತ್ತು ಉಡುಪಿ ಠಾಣಾ ವ್ಯಾಪ್ತಿಯಲ್ಲಿ ಸೆ.19 ಮುಂಜಾನೆ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಯನ್ನು ಬಂಧಿಸಲು ಕಾರ್ಯ ತಂತ್ರ ರೂಪಿಸಿದ್ದಾರೆ. ಈ ಬಗ್ಗೆ ಉಡುಪಿ ಎಸ್ಪಿ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ಮಲ್ಲಾರು ಕೊಂಬಗುಡ್ಡೆಯ ಮೊಹಮ್ಮದ್ ಆಶಿಕ್(19) ಬಂಧಿತ ಆರೋಪಿ. ಏನಿದು ಪ್ರಕರಣ.? ಸೆ.19ರಂದು ತಡರಾತ್ರಿ ಮಣಿಪಾಲ ಮತ್ತು ಉಡುಪಿ ಸುತ್ತಮುತ್ತಲಿನ ಭಾಗದಲ್ಲಿ ಬೈಕ್ ನಲ್ಲಿ ಹೋಗುವವರನ್ನು ಅಡ್ಡಗಟ್ಟಿ, […]