ಉಡುಪಿ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ನಿಂದ ಕೈಬಿಡಲಾಗಿದೆ: ಸಚಿವ ಕೋಟ
ಕಾರ್ಕಳ: ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದ ಬಹಳಷ್ಟು ಮಂದಿಗೆ ಭೂಮಿಯ ಹಕ್ಕುಪತ್ರಗಳನ್ನು ಹಾಗೂ ಹಕ್ಕುಗಳನ್ನು ನೀಡಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ 9 ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಇದೆ ಎಂದು ಗುರುತಿಸಲಾಗಿದ್ದು, ಇದೀಗ ನಡೆಸಿರುವ ಪುನರ್ ಪರಿಶೀಲನೆಯಿಂದ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಆ ವ್ಯಾಪ್ತಿಯಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹಿಂದು ಧಾರ್ಮಿಕ ದತ್ತಿ ಇಲಾಖೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಮಂಗಳವಾರ ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ […]
ಖ್ಯಾತ ತಮಿಳು ನಟ ಆತ್ಮಹತ್ಯೆಗೆ ಶರಣು
ಚೆನ್ನೈ: ಶಿವಕಾರ್ತಿಕೇಯನ್ ಅಭಿನಯದ ಮರೀನಾ ಚಿತ್ರದಲ್ಲಿ ಅಭಿನಯಿಸಿ ಖ್ಯಾತನಾಮರಾಗಿದ್ದ ತಮಿಳು ನಟ ಥೆನ್ನರಸು ಮಂಗಳವಾರ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಂಡಿರಾಜ್ ನಿರ್ದೇಶನದ “ಮರೀನಾ” ಚಿತ್ರದಲ್ಲಿ ಥೆನ್ನರಸು ಶಿವಕಾರ್ತಿಕೇಯನ್ ಅವರ ಸ್ನೇಹಿತನ ಪಾತ್ರದಲ್ಲಿ ನಟಿಸಿದ್ದರು. ಹಲವಾರು ತಮಿಳು ಚಿತ್ರಗಳಲ್ಲಿ ನಾಯಕನ ಗೆಳೆಯನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ, ಆದರೆ ಮರೀನಾ ಚಿತ್ರದ ವೃತ್ತಿಬದುಕಿನಲ್ಲಿ ದೊಡ್ಡ ಬ್ರೇಕ್ ಸಿಕ್ಕಿರಲಿಲ್ಲ. ಮೂರು ವರ್ಷಗಳ ಹಿಂದೆ ಗೆಳತಿಯೊಂದಿಗೆ ವಿವಾಹವಾಗಿದ್ದ ಥೆನ್ನರಸು ದಂಪತಿಗೆ ಎರಡು ವರ್ಷದ ಮಗು ಇದೆ. ಈಚೆಗೆ ಮದ್ಯದ ಚಟಕ್ಕೆ ಬಿದ್ದಿದ್ದ […]
ಮಣಿಪಾಲ ವಿಶ್ವವಿದ್ಯಾಲಯ, ಕ್ಲಬ್ ಗಳಿಗೆ ಡಾರ್ಕ್ನೆಟ್ ಮೂಲಕ ಡ್ರಗ್ಸ್ ಮಾರುತ್ತಿದ್ದ ಗ್ಯಾಂಗ್ ಅರೆಸ್ಟ್
ಬೆಂಗಳೂರು: ಉಡುಪಿ ಹಾಗೂ ಚೆನ್ನೈನ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ಡಾರ್ಕ್ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಅದನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕೆ. ಪ್ರಮೋದ್, ಫಾಹಿಮ್, ಕರ್ನಾಟಕದ ಎ. ಹಶೀರ್ ಹಾಗೂ ಎಸ್.ಎಸ್. ಶೆಟ್ಟಿ ಬಂಧಿತ ಆರೋಪಿಗಳು. ಈ ತಂಡವು ಎರಡು ವರ್ಷಗಳಿಂದ ಡ್ರಗ್ಸ್ ಮಾರಾಟ ಮಾಡುತ್ತಿದೆ. ಉಡುಪಿಯ ಮಣಿಪಾಲ್ ವಿಶ್ವವಿದ್ಯಾಲಯ, ಎಂಐಟಿ ಕಾಲೇಜು, ಮಣಿಪಾಲ್ ಕ್ಲಬ್ಗಳು, ಚೆನ್ನೈನ ಎಸ್ಆರ್ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರಗ್ಸ್ […]
ಸ್ಕೂಟರ್- ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಂದೆ ಮಗಳು ಸ್ಥಳದಲ್ಲೇ ಸಾವು
ಯಲ್ಲಾಪುರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಇಂದು ಸಂಭವಿಸಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ. 56 ವರ್ಷದ ವಿನೋದ್ ಕಿಂದಳಕರ್ ಹಾಗೂ ಅವರ 12 ವರ್ಷದ ಮಗಳು ಸುನೇಹಾ ಕಿಂದಳಕರ್ ಮೃತ ದುರ್ದೈವಿಗಳು .
ಉಡುಪಿ: ಮೂರು ಲಕ್ಷ ರೂ. ಪಡೆದು ವಂಚಿಸಿದ ಮಾಜಿ ಶಾಸಕ ಯು.ಆರ್. ಸಭಾಪತಿ: ಕಾಂಗ್ರೆಸ್ ಕಾರ್ಯಕರ್ತನಿಂದ ಆರೋಪ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಯು.ಆರ್. ಸಭಾಪತಿ ಅವರು ಕಳೆದ ವರ್ಷ ಫೆಬ್ರವರಿಯಲ್ಲಿ ನನ್ನಿಂದ ಮೂರು ಲಕ್ಷ ರೂ. ಪಡೆದಿದ್ದರು. ಆದರೆ ಇದೀಗ ಅದನ್ನು ಮರುಪಾವತಿ ಮಾಡದೆ ವಂಚಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಮೊಳೆ ಕೊಪ್ಪಲು ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಚಿಕ್ಕಮಂಚಯ್ಯ ಆರೋಪಿಸಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭಾಪತಿ ತನ್ನ ಮನೆಗೆ ಆಗಮಿಸಿ, ‘ನನ್ನ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಾಗಿದೆ. ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ. ಮೂರು ಲಕ್ಷಕೊಟ್ಟು ನನ್ನ […]