ಆರ್ ಆರ್ ನಗರ, ಶಿರಾ ಕ್ಷೇತ್ರಕ್ಕೆ ಬೈ ಎಲೆಕ್ಷನ್ ಘೋಷಣೆ: ನ. 10ರಂದು ಫಲಿತಾಂಶ ಪ್ರಕಟ

ಬೆಂಗಳೂರು: ರಾಜರಾಜೇಶ್ವರಿ ನಗರ (ಆರ್ ಆರ್) ಕ್ಷೇತ್ರ ಹಾಗೂ ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 3ರಂದು ಎರಡೂ ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ನ.10ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಆರ್ ಆರ್ ನಗರ ಕ್ಷೇತ್ರದ ಶಾಸಕರಾಗಿದ್ದ ಮುನಿರತ್ನನಾಯ್ಡು ಅನರ್ಹರಾಗಿದ್ದರು. ಶಿರಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಸತ್ಯನಾರಾಯಣ ಬಿ. ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ತೆರವಾಗಿದ್ದ ಎರಡು ಕ್ಷೇತ್ರಗಳಿಗೂ ಉಪಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್‌ 9ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಅ. 16ರಂದು […]

ಯಡಿಯೂರಪ್ಪನವರನ್ನು ಕೆಳಗಿಳಿಸಿ, ದಿ. ಸುರೇಶ್ ಅಂಗಡಿಯವರಿಗೆ ಸಿಎಂ ಪಟ್ಟಕಟ್ಟಲು ಎಲ್ಲ ಸಿದ್ಧತೆ ನಡೆದಿತ್ತು: ಲಿಂಗರಾಜ್ ಪಾಟೀಲ್

ಬೆಂಗಳೂರು: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಸಿಎಂ ಪಟ್ಟ ಕಟ್ಟಲು ಎಲ್ಲ ಸಿದ್ಧತೆ ನಡೆದಿತ್ತು ಎಂದು ಅಂಗಡಿಯವರ ಸೋದರ ಮಾವ ಲಿಂಗರಾಜ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳ ಹಿಂದೆ ದೆಹಲಿಯಲ್ಲಿ ಕರ್ನಾಟಕದ ಉಸ್ತುವಾರಿಯಾಗಿದ್ದ ಮುರಳೀಧರ್ ರಾವ್ ಅವರ ನೇತೃತ್ವದಲ್ಲಿ ರಹಸ್ಯ ಸಭೆ ನಡೆದಿತ್ತು. ಅದರಲ್ಲಿ ನಾನು ಕೂಡ ಭಾಗಿಯಾಗಿದ್ದೆ ಎಂದು ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪನವರಿಗೆ ಪರ್ಯಾಯವಾಗಿ ಅದೇ ಸಮುದಾಯದ ಬೆಳಗಾವಿ ಸಹಿತ ಉತ್ತರ […]

ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ಜಾಲ: ಅರಣ್ಯಾಧಿಕಾರಿಗಳ ದಿಢೀರ್ ದಾಳಿ

ಬೆಳ್ತಂಗಡಿ: ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆ ಪುತ್ತೂರಿನ ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ತಂಡವು ದಾಳಿ ನಡೆಸಿ 1.50 ಲಕ್ಷ ರೂ. ಮೌಲ್ಯದ ಮರ ದಿಮ್ಮಿಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ವಳಂಬ್ರ ಸಮೀಪ ಕುದುರೆಮುಖ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಅರಣ್ಯಾಧಿಕಾರಿಗಳು ದಾಳಿ ನಡೆಸುವ ಮುನ್ಸೂಚನೆ ಸಿಕ್ಕಿದ ಹಿನ್ನೆಲೆಯಲ್ಲಿ ಕಾಡುಗಳ್ಳರು ಮರದ ದಿಮ್ಮಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ಮರ ಕಡಿದು […]

ಸದ್ಯಕ್ಕೆ ರಾಜ್ಯದಲ್ಲಿ ಶಾಲಾ ಕಾಲೇಜುಗಳ ಆರಂಭವಿಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಶಾಲಾ ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ‌‌. ಹಾಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಲಾ ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಧಾವಂತ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಸದ್ಯಕ್ಕೆ ಒಪನ್ ಮಾಡುವುದಿಲ್ಲ. ಆ […]

ಸಿಎಂ ಪುತ್ರ ವಿರುದ್ಧ ಭ್ರಷ್ಟಾಚಾರದ ವರದಿ: ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಿದ ಸರ್ಕಾರ

ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಭ್ರಷ್ಟಾಚಾರ ಎಸಗಿದ್ದರು ಎನ್ನಲಾದ ವರದಿ ಮಾಡಿದ್ದಕ್ಕಾಗಿ ಕನ್ನಡ ಸುದ್ದಿ ವಾಹಿನಿ ‘ಪವರ್ ಟಿವಿ’ಯನ್ನು ಬಂದ್ ಮಾಡಲಾಗಿದೆ. ಪವರ್ ಟಿವಿ ಮೇಲೆ ರೇಡ್ ಆಗಿದ್ದು, ಸಿಸಿಬಿ ಪೊಲೀಸರು, ಸರ್ಚ್ ವಾರಂಟ್ ಜೊತೆ ಬಂದಿದ್ದರು. ಅವರಿಗೆ ಬೇಕಾದ ಎಲ್ಲಾ ಡಾಕ್ಯುಮೆಂಟ್ ಗಳನ್ನು ಪಡೆದಿದ್ದಾರೆ. ನಮ್ಮ ಫೇಸ್ ಬುಕ್ ಲೈವನ್ನು ಸ್ಟಾಪ್ ಮಾಡಿದ್ದಾರೆ. ಚಾನೆಲ್ ನ್ನು ಬಂದ್ ಮಾಡಿದ್ದಾರೆ. 250 ಜನರು ಉದ್ಯೋಗಿಗಳಿರುವ ಚಾನೆಲನ್ನು ಬಂದ್ ಮಾಡಿದ್ದಾರೆ. ಇಂದು ಎಲ್ಲರೂ ಬೀದಿಗೆ ಬಂದಿದ್ದೇವೆ […]