ಮಥುರಾ: ಶಾಹಿ ಈದ್ಗಾ ಮಸೀದಿ ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಮಥುರಾ: ಇಲ್ಲಿನ ಕೃಷ್ಣಜನ್ಮಭೂಮಿ ದೇಗುಲದ ಜಾಗದಲ್ಲೇ ಇರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಮಥುರಾದ ಸಿವಿಲ್ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಸಹಾಯಕ ಜಿಲ್ಲಾ ನ್ಯಾಯಾಧೀಶರಾದ ಛಾಯಾ ಶರ್ಮಾ ಈ ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಪೂಜಾ ಸ್ಥಳಗಳು (ವಿಶೇಷ ನಿಬಂಧನೆಗಳು) ಕಾಯ್ದೆ 1991 ರ ಅಡಿಯಲ್ಲಿ ಪ್ರಕರಣವನ್ನು ಒಪ್ಪಿಕೊಳ್ಳುವ ಬಾರ್ ಅನ್ನು ಉಲ್ಲೇಖಿಸಿ ನ್ಯಾಯಾಲಯವು ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದೆ. ಹಿಂದೂ ದೇವರಾದ ಕೃಷ್ಣನ ಪರ ಶ್ರೀಕೃಷ್ಣ ವಿರಾಜಮಾನ್ ಸಲ್ಲಿಸಿದ್ದ ಅರ್ಜಿಯಲ್ಲಿ ದೇವಾಲಯದ […]

ಉಡುಪಿ: ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಪ್ರಯೋಗ ಶಾಲಾ ತಂತ್ರಜ್ಞರ (42) ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ (70) ಹುದ್ದೆಯಲ್ಲಿ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ನೇಮಕಾತಿಗೆ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ. ಅಕ್ಟೋಬರ್ 1 ರಿಂದ 5 ರ ವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3.30ರ ವರೆಗೆ ಅಜ್ಜರಕಾಡಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ […]

ಮಾಸ್ಕ್ ನಲ್ಲಿ ಚಿನ್ನ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿದ ಖದೀಮನ ಬಂಧನ

ಕೇರಳ: ಮಾಸ್ಕ್ ಗಳನ್ನು ಜನಸಾಮಾನ್ಯರು ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಬಳಸುತ್ತಿದ್ದರೆ, ಇಲ್ಲೊಬ್ಬ ಅಸಾಮಿ ಮಾಸ್ಕ್ ಒಳಗಡೆ 40 ಗ್ರಾಂ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಕರ್ನಾಟಕ ಮೂಲದ ಅಮರ್ ಸಿಕ್ಕಿಬಿದ್ದ ಖದೀಮ. ಈತ ದುಬೈನಿಂದ ಮಂಗಳವಾರ ಸಂಜೆ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾನೆ. ತಾನು ಧರಿಸಿದ್ದ ಎನ್-95 ಮಾಸ್ಕ್ ನಲ್ಲಿ 40 ಗ್ರಾಂ ಚಿನ್ನ ಬಚ್ಚಿಟ್ಟು ಸಾಗಾಣಿಕೆ ಮಾಡಲು ಯತ್ನಿಸಿರುವಾಗ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅಧಿಕಾರಿಗಳು ಈತನನ್ನು ಸಂಪೂರ್ಣ ತಪಾಸಣೆ […]

ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ: ಅಕ್ಟೋಬರ್ 15ರಿಂದ ಶಾಲಾ ಕಾಲೇಜು, ಚಿತ್ರಮಂದಿರ ತೆರೆಯಲು ಅವಕಾಶ

ನವದೆಹಲಿ: ಕೇಂದ್ರ ಸರ್ಕಾರವು ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟಿಸಿದ್ದು, ಅಕ್ಟೋಬರ್ 15ರಿಂದ ಶಾಲಾ ಕಾಲೇಜು, ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿದೆ. ಈಜುಕೊಳ, ಮನೋರಂಜನಾ ಪಾರ್ಕ್ ತೆರೆಯಲು ಒಪ್ಪಿಗೆ ನೀಡಿದೆ. ಹೊಸ ಮಾರ್ಗಸೂಚಿಯಲ್ಲಿ ಚಿತ್ರಮಂದಿರ ತೆರೆಯಲು ಅವಕಾಶ ಕಲ್ಪಿಸಿದ್ದು, ಶೇ. 50 ವೀಕ್ಷಕರಿಗೆ ಅವಕಾಶ ನೀಡಲು ಅನುಮತಿ ನೀಡಲಾಗಿದೆ. ಶಾಲಾ ಕಾಲೇಜುಗಳನ್ನು ತೆರೆಯಲು ಅವಕಾಶ ಕಲ್ಪಿಸಿದ್ದು, ರಾಜ್ಯ ಸರ್ಕಾರಗಳು ಸಂಬಂಧಿಸಿದ ಶಿಕ್ಷಣ ಮಂಡಳಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದೆ.

ಅ. 15ರ ವರೆಗೆ ಶಾಲಾ-ಕಾಲೇಜು ಮತ್ತೆ ಬಂದ್

ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ಟೋಬರ್ 15ರ ವರೆಗೆ ಶಾಲಾ-ಕಾಲೇಜು ಮತ್ತೆ ಬಂದ್ ಆಗಲಿದೆ. ವಿದ್ಯಾರ್ಥಿಗಳಿಗೆ ಸಂದೇಹ ನಿವಾರಿಸಿಕೊಳ್ಳಲು ನೀಡಲಾಗಿದ್ದ ಅನುಮತಿಗೆ ತಡೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕಂಟೈನ್​ಮೆಂಟ್ ಝೋನ್ ಹೊರತುಪಡಿಸಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗದ […]