ಉಡುಪಿ: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ; ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹ
ಉಡುಪಿ: ಉತ್ತರ ಪ್ರದೇಶದ ಹತ್ರಾಸ್ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ನೇತೃತ್ವದಲ್ಲಿ ಗುರುವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕೃತಿಗೆ ದಹಿಸಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಿಂತಕ, ಹೋರಾಟಗಾರ ಹರ್ಷಕುಮಾರ್ ಕುಗ್ವೆ, ಸಂತ್ರಸ್ತೆಯ ಮೃತದೇಹವನ್ನು ಮರು ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ […]
ಸಂತೆಕಟ್ಟೆಯ ಮನೆಯೊಂದಕ್ಕೆ ಅಬಕಾರಿ ಪೊಲೀಸರ ದಾಳಿ: 150 ಗ್ರಾಂ ಗಾಂಜಾ, 12 ಲೀ. ಗೋವಾ ಮದ್ಯ ವಶ
ಉಡುಪಿ: ಇಲ್ಲಿನ ಪುತ್ತೂರು ಗ್ರಾಮದ ವಾಸುಕಿ ನಗರದ ಗಣೇಶ್ ನಾಯಕ್ ಎಂಬುವವರ ಮನೆಗೆ ಖಚಿತ ಮಾಹಿತಿ ಆಧಾರದ ಮೇಲೆ ಇಂದು ದಾಳಿ ನಡೆಸಿದ ಅಬಕಾರಿ ಪೊಲೀಸರು, ಮನೆಯಲ್ಲಿ ಅಕ್ರಮವಾಗಿ ಕೂಡಿಟ್ಟ 150 ಗ್ರಾಂ ಗಾಂಜಾ ಹಾಗೂ ಗೋವಾ ರಾಜ್ಯದ 12 ಲೀ. ಬ್ಲೂ ವಿಸ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಣೇಶ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ. ಮೈತ್ರಿಧರ್ಮ ಪಾಲಿಸಲು ಅವರಿಗೆ ಗೊತ್ತಿಲ್ಲ. ಹಾಗಾಗಿ ಅವರೊಂದಿಗೆ ಎಂದೂ ಮೈತ್ರಿ ಇಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ತೆರೆ ಎಳೆದರು. ಕಾಂಗ್ರೆಸ್ ಮೈತ್ರಿ ಧರ್ಮ ಪಾಲಿಸಲು ಯೋಗ್ಯವಾದ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ ಹಾಗೂಬ ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್ ಪಿ ಶಾಸಕರನ್ನೇ ಸೆಳೆದಿರುವುದು ಮೈತ್ರಿಗೆ ತಾನು […]
ಬ್ರಹ್ಮಾವರ: ಏಳನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಬ್ರಹ್ಮಾವರ: ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕಾಜ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಕಾಜ್ರಳ್ಳಿ ನಿವಾಸಿ ತನುಷ್ (12) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪದವಿ ಕಾಲೇಜು ಆರಂಭದ ಬಗ್ಗೆ ಶೀಘ್ರವೇ ಸೂಕ್ತ ನಿರ್ಧಾರ: ಡಿಸಿಎಂ ಅಶ್ವತ್ಥ್ ನಾರಾಯಣ್
ಬೆಂಗಳೂರು: ಪದವಿ ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಯುಜಿಸಿಯಿಂದ ಮಾರ್ಗಸೂಚಿ ಬಂದಿದ್ದು, ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳ ಆನ್ ಲೈನ್ ತರಗತಿಗಳು ನಡೆಯುತ್ತಿದ್ದು, ಇದು ಹೀಗೆಯೇ ಮುಂದುವರೆಯಲಿದೆ. ಸ್ಪಷ್ಟ ನಿರ್ಧಾರಕ್ಕೆ ಬರುವವರೆಗೆ ಕಾಲೇಜುಗಳ ತರಗತಿ ಆರಂಭ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.