ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ ಬಿಗ್ ಬಿ: ಅಭಿಮಾನಿಗಳಿಂದ ಮೆಚ್ಚುಗೆಗಳ ಮಹಾಪೂರ
ಮುಂಬೈ: ಬಾಲಿವುಡ್ ನ ಖ್ಯಾತ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಅಂಗಾಂಗ ದಾನ ಮಾಡುವುದಾಗಿ ಸೋಶಿಯಲ್ ಮೀಡಿಯಾ ಮೂಲಕ ಘೋಷಣೆ ಮಾಡಿದ್ದಾರೆ. ಅಂಗಾಂಗ ದಾನ ಮಾಡುವ ವಿಚಾರವನ್ನು ಹೇಳಲು ನನಗೆ ಹೆಮ್ಮೆ ಆಗುತ್ತದೆ. ಈ ಮೂಲಕ ಅಂಗಾಗ ದಾನದ ಪ್ರತಿಜ್ಞೆ ಮಾಡುತ್ತಿದ್ದೇನೆ ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ. ಹಸಿರು ರಿಬ್ಬನ್ ತೊಟ್ಟು ವಿಚಾರವನ್ನು ಜಗತ್ತಿಗೆ ಸಾರಿದ್ದಾರೆ. ಬಿಗ್ ಬಿಯ ಈ ನಿರ್ಧಾರಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಗಳ ಮಹಾಪೂರ ಹರಿದು ಬಂದಿದೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಬಚ್ಚನ್ […]
ಹತ್ರಾಸ್ ಗೆ ಹೊರಟಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಿಯಾಂಕ ವಾದ್ರಾರನ್ನು ವಶಕ್ಕೆ ಪಡೆದ ಪೊಲೀಸರು
ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಇಂದು ಹೊರಟಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸೇರಿದಂತೆ ನೂರಾರು ಕಾರ್ಯಕರ್ತರೊಂದಿಗೆ ಹತ್ರಾಸ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿಯವರ ವಾಹನಗಳನ್ನು ಪೊಲೀಸರು ಗ್ರೇಟರ್ ನಾಯ್ಡಾ ಬಳಿ ಪರಿಚೌಕದಲ್ಲಿ ತಡೆದಿದ್ದರು. ನಂತರ ರಾಹುಲ್, ಪ್ರಿಯಾಂಕಾ ಸೇರಿದಂತೆ ನೂರಾರು ಕಾರ್ಯಕರ್ತರು ಕಾಲ್ನಡಿಗೆಯಲ್ಲೇ ಹತ್ರಾಸ್‌ನತ್ತ ಹೊರಟರು. ಈ ವೇಳೆ ಪ್ರಿಯಾಂಕ, ರಾಹುಲ್ ಇಬ್ಬರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು […]
ಮೀನುಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಉಡುಪಿ: ಮೀನುಗಾರರ ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ರಚನೆ ಹಾಗೂ ಇನ್ನಿತರ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬಳಿಕ ಪ್ರತಿಭಟನಾಕಾರರು ಅಪಾರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಮೀನುಗಾರ ಮುಖಂಡರಾದ ಕೆ. ಶಂಕರ್, ಮಹಾಬಲ ಹೋಡೆಯರ ಹೋಬಳಿ, ಕವಿರಾಜ್ ಎಸ್. ಕಾಂಚನ್, ಜ್ಯೋತಿ ಮೊಗವೀರ, ಗಣೇಶ ಮೊಗವೀರ, ಉದಯಗಾಣಿಗ ಮೋಗೆರ, ಸಿಐಟಿಯು ಜಿಲ್ಲಾ […]
ಚಾಲಕನ ನಿಯಂತ್ರಣ ತಪ್ಪಿ ಕಲ್ಲು ಕ್ವಾರಿಗೆ ಬಿದ್ದ ಕಾರು: ಓರ್ವ ಸಾವು
ಗೋಕರ್ಣ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳದ ಕಲ್ಲು ಕ್ವಾರಿಗೆ ಬಿದ್ದ ಘಟನೆ ಗೋಕರ್ಣ ಚೌಡಗೇರಿ ಶಾಲೆಯ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬ ಅಸುನೀಗಿದ್ದಾನೆ. ಮೂಲತಃ ಅಗರಗೋಣ ನಿವಾಸಿಯಾಗಿರುವ ಅಂಕೋಲಾದಲ್ಲಿ ನೆಲೆಸಿರುವ ಗೌರವ ದೇವರಾಜ ಗೋಳಿಕಟ್ಟೆ (25) ಮೃತ ದುರ್ದೈವಿ. ತಮ್ಮ ಮೂವರು ಗೆಳೆಯರೊಂದಿಗೆ ಅಗರಗೋಣದಿಂದ ಅಂಕೋಲಾಕ್ಕೆ ತಿರುಗಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಇಂದಿನಿಂದ ಹೊಸ ನಿಯಮಗಳು ಜಾರಿ: ಇನ್ನೂ ಡಿಎಲ್, ಆರ್ ಸಿ ಬದಲು ಡಿಜಿಟಲ್ ಇ- ಕಾಪಿ ತೋರಿಸಿದರೆ ಸಾಕು
ನವದೆಹಲಿ: ಮೋಟಾರು ವಾಹನ ಕಾಯ್ದೆಯ ಹೊಸ ನಿಯಮಗಳು ಇಂದಿನಿಂದ ಜಾರಿಗೆ ಬರುತ್ತಿದ್ದು, ವಾಹನ ಸವಾರರು ಇನ್ಮುಂದೆ ಚಾಲನಾ ಪರವಾನಗಿ (ಡಿಎಲ್) ಮತ್ತು ರೆಜಿಸ್ಟ್ರೇಷನ್ ಸರ್ಟಿಫಿಕೆಟ್ (ಆರ್‌ಸಿ) ಕಾರ್ಡ್‌ಗಳ ಬದಲು ಇ–ಕಾಪಿಗಳನ್ನು ತೋರಿಸಬಹುದಾಗಿದೆ. ವಾಹನ ಸವಾರರು ಡಿಎಲ್ ಮತ್ತು ಆರ್‌ಸಿ ಕಾರ್ಡ್‌ಗಳನ್ನು ಜೊತೆಯಲ್ಲೇ ಇಟ್ಟುಕೊಳ್ಳುವ ಅಗತ್ಯವಿರುವುದಿಲ್ಲ. ಪರಿಶೀಲನೆ ಸಂದರ್ಭಗಳಲ್ಲಿ ಡಿಜಿಟಲ್ ಪ್ರತಿಗಳನ್ನು ತೋರಿಸಿದರೆ ಸಾಕು. ಕೇಂದ್ರ ಸರ್ಕಾರದ ಡಿಜಿ ಲಾಕರ್ ಅಥವಾ ಎಂ–ಪರಿವಹನ್ ರೀತಿಯ ಪೋರ್ಟಲ್‌ಗಳಿಗೆ ದಾಖಲೆಗಳನ್ನು ಅಪ್‌ಲೋಡ್ ಮಾಡಿಕೊಂಡು, ಅಗತ್ಯವಾದಲ್ಲಿ ಡಿಜಿಟಲ್ ಪ್ರತಿಯನ್ನೇ ತೋರಿಸಬಹುದಾಗಿದೆ. ಆಹಾರ ಪೊಟ್ಟಣಗಳಲ್ಲಿ […]