ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ-ಅರ್ಜಿ ಆಹ್ವಾನ

ಉಡುಪಿ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ ೧೬ ಕೊನೆಯ ದಿನ. ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ ೨೩ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ […]

ಬೆಳ್ತಂಗಡಿ: ಎಸ್.ಡಿ.ಎಂ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ವರ್ಚುವಲ್ ಮೂಲಕ ಗಾಂಧಿ ಜಯಂತಿ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಧೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿಧ್ಯಾರ್ಥಿಗಳಿಂದ ವರ್ಚುವಲ್ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಸ್ಕೌಟ್ಸ್ ಗೈಡ್ಸ್ ವಿಧ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ಕೈಗೊಂಡು ಗಾಂಧಿ ಆದರ್ಶವನ್ನು ತಮ್ಮಲ್ಲಿ ಆಳವಡಿಸಿ ಉತ್ತಮ ಪ್ರಜೆಗಳಾಗಿ ಪರಿವರ್ತಿತರಾಗುತ್ತೇವೆ ಎಂಬ ಮನೋಭಾವನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸವಿತಾ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. […]

ಅಂಬಾಗಿಲು ಆಟೊ ಚಾಲಕರು-ಮಾಲೀಕರ ಸಂಘದಿಂದ ವಿಶಿಷ್ಟ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ

ಉಡುಪಿ: ಯಶೋದಾ ಆಟೊ ಚಾಲಕರು ಮತ್ತು ಮಾಲೀಕರ ಸಂಘ ಉಡುಪಿ ಹಾಗೂ ಅಂಬಾಗಿಲು ಆಟೊ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಅಂಬಾಗಿಲು ಬಸ್ ನಿಲ್ದಾಣದ ಕುಡಿಯುವ ನೀರಿನ ಘಟಕ ಹಾಗೂ ಆಟೊ ನಿಲ್ದಾಣದ ಧ್ವಜಸ್ತಂಭದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಯಶೋದಾ ಆಟೊ ಯೂನಿಯನ್ ಅಧ್ಯಕ್ಷ, ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ, ಗಾಂಧೀಜಿಯ ಸ್ವಚ್ಛ ಭಾರತದ ಕನಸು ಈಡೇರಬೇಕಾದರೆ ಎಲ್ಲರ ಸಹಕಾರ ಅಗತ್ಯ. ಮನೆಯ ಪರಿಸರದ ಜತೆಗೆ ಮನುಷ್ಯನ ಗುಣ […]

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಛತಾ ಶ್ರಮದಾನ

ಉಡುಪಿ: ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಿಕ್ಷಣ ವಿಭಾಗ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಶಾಲಾ ವಠಾರದಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಊರಿನ 15 ಕ್ಕೂ ಹೆಚ್ಚಿನ ಸಂಘಸಂಸ್ಥೆಗಳ 80 ಕ್ಕೂ ಹೆಚ್ಚು ಸದಸ್ಯರು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 31ನೇ ತೋನ್ಸೆ ಗ್ರಾಮ ಪಂಚಾಯತ್ ಕೆಮ್ಮಣ್ಣು, ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂಘ, ಕೆಮ್ಮಣ್ಣು, ನಿರ್ಮಲ ತೋನ್ಸೆ, […]

ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಕಲ್ಮಾಡಿ ಸೇತುವೆಯ ಸ್ವಚ್ಛತೆ

ಉಡುಪಿ: ಗಾಂಧಿಜಯಂತಿ ಪ್ರಯುಕ್ತ ಸೇವಾಸಪ್ತಾಹದ ಅಭಿಯಾನದಡಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ಕಲ್ಮಾಡಿ ಸೇತುವೆಯನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಶಾಸಕ ಕೆ. ರಘುಪತಿ ಭಟ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಸುಂದರ್ ಜೆ. ಕಲ್ಮಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಶಾಂತ್ ಕುಮಾರ್, ಯೋಗೀಶ್ ದೇವಾಡಿಗ, ಸಂಧ್ಯಾ ರಮೇಶ್, ಗಿರೀಶ್ ಕಿದಿಯೂರು, ಸತೀಶ್ […]