ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆ ಶೀಘ್ರದಲ್ಲೇ ಅನುಷ್ಠಾನ: ಶಾಸಕ ರಘುಪತಿ ಭಟ್

ಉಡುಪಿ: ಇಲ್ಲಿನ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಸಚಿವ ಸಂಪುಟ ಸಭೆಯ ಒಪ್ಪಿಗೆಯಷ್ಟೇ ದೊರೆಯಬೇಕಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮಂಡಿಸಿ ಒಪ್ಪಿಗೆ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿರುವಂತೆ ಹಾಗೂ ಈ ಹಿಂದೆ ಮುಖ್ಯಮಂತ್ರಿಯವರು ಆಯವ್ಯಯದ ಮೇಲೆ ಉತ್ತರಿಸುವಾಗ ನಮ್ಮ ಬೇಡಿಕೆಯಂತೆ ಉಡುಪಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಭರವಸೆಯನ್ನು ನೀಡಿರುತ್ತಾರೆ. ಅದರಂತೆ ಉಡುಪಿ […]

ಶಿಕ್ಷಕರ ಮಧ್ಯಂತರ ರಜೆ ರದ್ದು: ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ. 3ರಿಂದ 26ರ ವರೆಗೆ ನಿಗದಿಪಡಿಸಿದ್ದ ಮಧ್ಯಂತರ ರಜೆಯನ್ನು ರದ್ದುಪಡಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2020–21ನೇ ಸಾಲಿನ ಶೈಕ್ಷಣಿಕ ಅವಧಿ ಮತ್ತು ಮಧ್ಯಂತರ ರಜೆ ನಿಗದಿಪಡಿಸಿ ಫೆಬ್ರುವರಿ 14ರಂದು ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಯ ಕುರಿತು ಇಲಾಖೆಯಿಂದ ವಿವಿಧ ಹಂತಗಳಲ್ಲಿ ಜಾರಿಗೊಳಿಸುವ ಆದೇಶಗಳಂತೆ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಇಲಾಖೆ ಸೂಚಿಸಿದೆ.  

ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿಲ್ಲ: ನಿರೂಪಕಿ ಅನುಶ್ರೀ ಕಣ್ಣೀರು

ಮಂಗಳೂರು: ನನ್ನನ್ನು ಬೆಳೆಸಿದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ. ವಿಡಿಯೊ ಹೇಳಿಕೆ ಮೂಲಕ ತನಗಾದ ನೋವನ್ನು ಹಂಚಿಕೊಂಡಿದ್ದಾರೆ. ಸೆ. 24 ರಂದು ನನ್ನ ಪಾಲಿನ ಕರಾಳ ದಿನ. ಆ ದಿನವನ್ನು ನನ್ನ ಜೀವನದ ಯಾವ ಘಟ್ಟದಲ್ಲೂ ನೆನಪಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಭಾವುಕರಾಗಿ ನುಡಿದಿದ್ದಾರೆ. ಸಿಸಿಬಿ ವಿಚಾರಣೆಗೆ ಕರೆದಿರುವುದಕ್ಕೆ ಬೇಸರವಿಲ್ಲ. ಆದರೆ, ಅದರ ನಂತರ ಆರಂಭವಾಗಿರುವ ಅಂತೆ ಕಂತೆಗಳಿಂದ ನನ್ನ ಕುಟುಂಬಕ್ಕೆ ಸಾಕಷ್ಟು ನೋವಾಗಿದೆ ಎಂದು […]

ಆರ್ ಆರ್ ನಗರ ಉಪಚುನಾವಣೆ: ಮುನಿರತ್ನ ಪರ ಬಿಎಸ್‌ವೈ, ತುಳಸಿ ಪರ ನಳಿನ್ ಒಲವು

ಬೆಂಗಳೂರು: ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಧ್ಯೆ ಒಮ್ಮತದ ನಿರ್ಣಯ ಮೂಡದ ಕಾರಣ ಇಬ್ಬರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಲಾಗಿದೆ. ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಬಿಎಸ್ ವೈ ಹಾಗೂ ನಳಿನ್ ಮಧ್ಯೆ ಆರಂಭಿಕ ಹಂತದಲ್ಲೇ ಗೊಂದಲ ಉಂಟಾಗಿದೆ. ಮುನಿರತ್ನ ನಾಯ್ಡು ಪರ ಬಿಎಸ್ ವೈ ನಿಂತರೆ, ತುಳಸೀ ಮುನಿರಾಜು ಪರ ನಳಿನ್ ಕುಮಾರ್ […]

ನಿಮ್ಮ ಕನಸಿನ ಉದ್ಯೋಗದ ಬಾಗಿಲು ತೆರೆಯಿರಿ: ಉಡುಪಿ XPRESS ಉದ್ಯೋಗ ಪರ್ವ-2020 ನೋಂದಣಿ ಆರಂಭ

ನಿಮ್ಮ ಕನಸಿನ ಉದ್ಯೋಗ ಮಾಡಬೇಕೆನ್ನಿಸುವ ಆಸೆಯಾ, ಒಂದೊಳ್ಳೆ ಉದ್ಯೋಗ ಪಡೆದು ಬದುಕು ಕಟ್ಟಿಕೊಳ್ಳಬೇಕೆಂದು ಕಾಯುತ್ತಿದ್ದೀರಾ ಹಾಗಿದ್ದರೆ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ರೂಮನ್ ಟೆಕ್ನಾಲಾಜೀಸ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದೊಂದಿಗೆ ರೋಟರಿ ಉಡುಪಿ ಮಣಿಪಾಲದ ಸಹಕಾರದಲ್ಲಿ   ಉಡುಪಿ XPRESS  ಪ್ರಸ್ತುತಪಡಿಸುವ ಉದ್ಯೋಗ ಪರ್ವ 2020-online job fair ನೋಂದಣಿ ಆರಂಭಗೊಂಡಿದೆ ಈ ಕೆಳಗಿನ ಲಿಂಕ್ ಗೆ ಹೋಗಿ ಕೂಡಲೇ ರಿಜಿಸ್ಟರ್ ಆಗಿ https://forms.gle/D7aTu8j4bKh6vTBe9