ಲಾರಿ- ಕಾರು ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು
ಬೈಂದೂರು: ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರು ಮಧ್ಯೆ ಇಂದು ನಡೆದ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಾರು ಚಾಲಕ ಮಂಜುನಾಥ ಆಚಾರ್ಯ ಕಾಲ್ತೋಡು (33) ಮೃತ ದುರ್ದೈವಿ. ಕಾರಿನಲ್ಲಿದ್ದ ಸಹ ಸವಾರ ರವಿಕಾಂತ್ ಆಚಾರ್ಯ (30) ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಲಾರಿಗೆ ಹುಬ್ಬಳ್ಳಿಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. […]
ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಸಿಬಿಐಗೆ ವಹಿಸಿದ ಉತ್ತರ ಪ್ರದೇಶ ಸರ್ಕಾರ
ಲಖನೌ: ಹತ್ರಾಸ್ 19 ವರ್ಷದ ಯುವತಿಯ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಆದೇಶಿಸಿದರು. ಅತ್ಯಾಚಾರ ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19 ವರ್ಷದ ಯುವತಿ ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಕಿಗೆ ಆಹುತಿಯಾದ ಬೈಕ್ ಗಳು: ಮೂವರ ದುರ್ಮರಣ
ವಿಜಯಪುರ: ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತುಕೊಂಡ ಪರಿಣಾಮ ಮೂವರು ಮೃತಪಟ್ಟು, ಓರ್ವ ತೀವ್ರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ–ಹೂವಿನ ಹಿಪ್ಪರಗಿ ರಸ್ತೆಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಅಫಜಲಪುರ ತಾಲ್ಲೂಕಿನ ಬಳರೂಗಿ ಗ್ರಾಮದ ಕುಮಾರ ಬಲಕುಂದಿ, ಜಯವಾಡಗಿ ನಿವಾಸಿ ಬಸವರಾಜ ಹಂದ್ರಾಳ(20) ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಜಯವಾಡಗಿಯ ಸಾಹೇಬಗೌಡ ಸಿದ್ದಾಪುರದ(20) ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: ಪತ್ನಿ ಅಶ್ವಿನಿ ವಿಚ್ಛೇದನಕ್ಕಾಗಿ ಅರ್ಜಿ
ಬೆಳಗಾವಿ: ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪತ್ನಿ ಅಶ್ವಿನಿ ವಿಚ್ಛೇದನ ಕೋರಿ ಜೂನ್ 26ರಂದು ಇಲ್ಲಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ತಿಳಿಸಿದ್ದಾರೆ. ಕಲ್ಯಾಣ್ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಆದ್ದರಿಂದ ವಿಚ್ಛೇದನ ಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಲ್ಯಾಣ್ ವಿರುದ್ಧ ಪತ್ನಿ ಮಾಳಮಾರುತಿ ಠಾಣೆಗೆ ಜೂನ್ 26ರಂದು ದೂರು ಕೂಡ ನೀಡಿದ್ದರು. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿಲ್ಲ. ಆದರೆ, ಕಲ್ಯಾಣ್ […]
ಕೊರೊನಾ ತಗುಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ತೀವ್ರ ಉಸಿರಾಟ ಸಮಸ್ಯೆ
ವಾಷಿಂಗ್ಟನ್: ಕೊರೊನಾ ಸೋಂಕು ತಗುಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಸಿಎನ್ಎನ್ ಸುದ್ದಿ ವಾಹಿನಿ ವರದಿ ಮಾಡಿದೆ. ಕೋವಿಡ್–19 ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಅವರು ತೀವ್ರ ಆಯಾಸದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ಕೆಲವು ದಿನಗಳ ವರೆಗೆ ಟ್ರಂಪ್ ಆಸ್ಪತ್ರೆಯಲ್ಲೇ ಇದ್ದುಕೊಂಡು ಚಿಕಿತ್ಸೆ ಪಡೆಯಲಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.