ಮಣಿಪಾಲದಲ್ಲಿ ಡ್ರಗ್ಸ್ ಪೆಡ್ಲರ್ ಒಬ್ಬನ ಬಂಧನ: 15 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ
ಮಣಿಪಾಲ: ಮಣಿಪಾಲದ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರ ಭಾರತ ಮೂಲದ ಹಿಮಾಂಶು ಜೋಷಿ (20) ಬಂಧಿತ ಆರೋಪಿ. ಈತ ಮಣಿಪಾಲ ಎಂಐಟಿ ಕಾಲೇಜಿನ ಇನ್ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ 7ನೇ ಸೆಮಿಸ್ಟರ್ನ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈತ ಬೈಕ್ನಲ್ಲಿ ಮಣಿಪಾಲ ಸಮೀಪದ ಶೀಂಬ್ರಾ ಸೇತುವೆ ಬಳಿ ನಿಷೇಧಿತ ಮಾತ್ರೆಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಜಿಪಂ ನೂತನ ಸಿಇಒ ಆಗಿ ಡಾ. ನವೀನ್ ಭಟ್ ನೇಮಕ
ಉಡುಪಿ: ಉಡುಪಿ ಜಿಪಂ ನೂತನ ಸಿಇಒ ಆಗಿ ಹಾಸನ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಡಾ. ನವೀನ್ ಭಟ್ ಅವರು ನಿಯುಕ್ತಿಗೊಂಡಿದ್ದಾರೆ. ಸಿಇಒ ಆಗಿದ್ದ ಪ್ರೀತಿ ಗೆಹ್ಲೋಟ್ ಅವರು ವರ್ಗಾವಣೆಗೊಂಡಿದ್ದಾರೆ.
ಉಡುಪಿ ಜಿಪಂ ಸಿಇಒ ಪ್ರೀತಿ ಗೆಹ್ಲೋಟ್ ವರ್ಗಾವಣೆ: ನೂತನ ಸಿಇಒ ಆಗಿ ಡಾ. ನವೀನ್ ಭಟ್ ನಿಯುಕ್ತಿ
ಉಡುಪಿ: ಉಡುಪಿ ಜಿಪಂ ಸಿಇಒ ಆಗಿದ್ದ ಪ್ರೀತಿ ಗೆಹ್ಲೋಟ್ ಅವರು ವರ್ಗಾವಣೆಗೊಂಡಿದ್ದಾರೆ. ನೂತನ ಸಿಇಒ ಆಗಿ ಹಾಸನ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಡಾ. ನವೀನ್ ಭಟ್ ಅವರು ನೇಮಕಗೊಂಡಿದ್ದಾರೆ.
ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಕೋಟ: ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಹೆಮ್ಮೆಯ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ. ಹೀಗಾಗಿ ಹುಟ್ಟೂರಿನಲ್ಲಿ ವಡ್ಡರ್ಸೆಯವರ ನೆನಪುಗಳು ಶಾಶ್ವತವಾಗಿ ಉಳಿಯುವ ನಿಟ್ಟಿನಲ್ಲಿ ಕೋಟ- ಸಾಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆಗೆ ಅವರ ಹೆಸರಿಡಬೇಕು ಎನ್ನುವ ಬೇಡಿಕೆಯನ್ನು ಬ್ರಹ್ಮಾವರ ಪತ್ರಕರ್ತರ ಸಂಘದವರು ಮುಂದಿರಿಸಿದ್ದು ಇದು ಅತ್ಯಂತ ಸಮಂಜಸವಾಗಿದೆ. ಈ ಕುರಿತು ತಾ.ಪಂ. ವತಿಯಿಂದ ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು . ಬ್ರಹ್ಮಾವರ ತಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದರು. […]
ರಸ್ತೆ ಅಪಘಾತ: ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ ಮೃತ್ಯು
ಹುಬ್ಬಳ್ಳಿ: ಮೂರು ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29) ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಸುನೀಲ ಅವರು ಕೆಲಸ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್’ಗೆ ದಾಖಲಾಗಿದ್ದರು.