ಪೇಜಾವರ ವಿಶ್ವಪ್ರಸನ್ನ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ‌ಪಡೆದ ಶಾಸಕ ಹರೀಶ್ ಪೂಂಜ

ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಹಾಗೂ ರಾಜ್ಯ ಮಲೆನಾಡು ಅಭಿವೃದ್ಧಿ ಮಂಡಳಿ ನೂತನ ಸದಸ್ಯ ರಾಮ ಅಮೀನ್ ಪಚ್ಚನಾಡಿ ಅವರು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಬೆಳ್ತಂಗಡಿಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ಕಾಜಾರಗುತ್ತು ಸರಕಾರಿ ಶಾಲೆಯ ಶಿಕ್ಷಕ- ರಕ್ಷಕ ಸಭೆ

ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ- ರಕ್ಷಕ ಸಭೆ ನಡೆಯಿತು. ಆನ್ ಲೈನ್ ಕ್ಲಾಸ್ ಗಳ ಬಗ್ಗೆ ಹೆತ್ತವರೊಂದಿಗೆ ಚರ್ಚಿಸಲಾಯಿತು. ಈ ವೇಳೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ದೇವೇಂದ್ರ ನಾಯಕ್, ಎಸ್ ಡಿ ಎಂ ಸಿ ಅಧ್ಯಕ್ಷ ವಿಷ್ಣುಮೂರ್ತಿ ಶೆವ್ಡೆ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುದರ್ಶನ್ ಶೆಟ್ಟಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಆಯ್ಕೆ

ಉಡುಪಿ: ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿದ್ದ ತಾಜುಲ್ ಫಖಹಾಅ ಬೇಕಲ್ ಉಸ್ತಾದರ ವಿಯೋಗದಿಂದ ತೆರವಾದ ಸ್ಥಾನಕ್ಕೆ ನೂತನ ಖಾಝಿಯಾಗಿ ಕರ್ನಾಟಕ ಸುನ್ನೀ ಉಲಮಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕನ್ನಡ ನಾಡಿನ ಖ್ಯಾತ ವಿದ್ವಾಂಸ ಝೈನುಲ್ ಉಲಮಾ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ಅವರನ್ನು ನೇಮಿಸಲಾಗಿದೆ. ಸಂಯುಕ್ತ ಜಮಾಅತ್ ಸರ್ವಸದಸ್ಯರ ಸಮ್ಮುಖದಲ್ಲಿ ತೆಗೆದುಕೊಂಡ ಸರ್ವಾನುಮತ ಈ ತೀರ್ಮಾನವನ್ನು ಉಡುಪಿಯ ಮಣಿಪಾಲ ಇನ್ ಹೊಟೇಲಿನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಜಮಾಅತ್ ನಿರ್ದೇಶಕ ಯು.ಕೆ. ಮುಸ್ತ […]

ನಿರ್ಭಯಾ ಕೇಸ್ ನಲ್ಲಿ ಸೋತು ಸುಣ್ಣವಾಗಿದ್ದ ವಕೀಲನಿಂದ ಹತ್ರಾಸ್ ಆರೋಪಿಗಳ ಪರ ವಕಾಲತ್ತು

ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಪರ ಹೋರಾಟ ನಡೆಸಿ ಸೋತು ಸುಣ್ಣವಾಗಿರುವ ವಕೀಲ ಎ ಪಿ ಸಿಂಗ್, ಇದೀಗ ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಾಲ್ವರು ಆರೋಪಿಗಳ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸುತ್ತಿದ್ದಾರೆ. ಹತ್ರಾಸ್ ಆರೋಪಿಗಳ ಪರವಾಗಿ ವಕಾಲತ್ತು ವಹಿಸಲು ಎಪಿ ಸಿಂಗ್ ಅವರನ್ನು ಮೇಲ್ಜಾತಿಯ ಗುಂಪು ಅಖಿಲ್ ಭಾರತೀಯ ಕ್ಷತ್ರಿಯ ಮಹಾಸಭಾ ನೇಮಕ ಮಾಡಿದೆ. ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸಲ್ಲಿಕೆಯಾಗಿರುವ ಅರ್ಜಿ […]

ಶಾಲಾ-ಕಾಲೇಜು ಆರಂಭಿಸುವ ಕುರಿತ ಮಾರ್ಗಸೂಚಿ ಪ್ರಕಟ: ರಾಜ್ಯ ಸರ್ಕಾರಗಳಿಗೆ ನಿರ್ಧಾರ ಕೈಗೊಳ್ಳಲು ಅಧಿಕಾರ

ನವದೆಹಲಿ: ಕೇಂದ್ರ ಸರ್ಕಾರವು ಹೊರಡಿಸಿದ ಅನ್‌ಲಾಕ್ 5.0ನಲ್ಲಿ ಅಕ್ಟೋಬರ್ 15ರ ನಂತರ ಶಾಲೆಗಳನ್ನು ಮತ್ತೆ ತೆರೆಯಲು ಅನುಮತಿ ನೀಡಿದ್ದು, ಅದರಂತೆ ಕೇಂದ್ರ ಶಿಕ್ಷಣ ಸಚಿವಾಲಯ ಇಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗಸೂಚಿಗಳ ಪ್ರಕಾರ ಅಕ್ಟೋಬರ್ 15ರ ನಂತರ ಶಾಲೆಗಳು ಮತ್ತು ತರಬೇತಿ ಸಂಸ್ಥೆಗಳು ಶ್ರೇಣೀಕೃತ ರೀತಿಯಲ್ಲಿ ತೆರೆಯಬಹುದು. ಆದರೆ, ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರ್ಧಾರ ಕೈಗೊಳ್ಳಬಹುದಾಗಿದೆ. ಸ್ಥಳೀಯ ಸಂದರ್ಭ ಮತ್ತು ಅಗತ್ಯಗಳಿಗೆ ಅನುಗುಣವಾಗಿ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ಅಳವಡಿಸಿಕೊಳ್ಳಬಹುದು ಅಥವಾ […]