ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಕಾಂಗ್ರೆಸ್ ನಾಯಕರ ಆಕ್ರೋಶ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳ ದಾಳಿಯನ್ನು ಕಾಂಗ್ರೆಸ್‌ನ ನಾಯಕರು ಖಂಡಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಶಕ್ತಿಯನ್ನು ಕುಗ್ಗಿಸಲು ಮಾಡಿದ ಷಡ್ಯಂತ್ರ. ಬಿಜೆಪಿ ಸಿಬಿಐ ಕೈಗೊಂಬೆಯಾಗಿಸಿಕೊಂಡು ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್‌ ಅವರ ಮೇಲಿನ ಈ ದಾಳಿಯಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಭ್ರಷ್ಟಾಚಾರದ ಎಳೆಯನ್ನು ಸಿಬಿಐ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಹುಡುಕಬೇಕು. ಆದರೆ ಮೋದಿ ಸರ್ಕಾರ ಸಿಬಿಐಯನ್ನು ಕೈಗೊಂಬೆ […]

ಡಿಕೆ ಬ್ರದರ್ಸ್ ಮನೆ ಮೇಲೆ ಸಿಬಿಐ ದಾಳಿ: ಮನೆ, ಕಚೇರಿಗಳಲ್ಲಿ ಶೋಧಕಾರ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಂದು ಬೆಳಿಗ್ಗೆ 6ಗಂಟೆಗೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಇರುವ ಮನೆಗೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಐವರು ಸಿಬಿಐ ಅಧಿಕಾರಗಳ ತಂಡ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ. ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಅವರು ಅರೆಸ್ಟ್ ಆಗಿದ್ದರು. ಬಳಿಕ ಕೋರ್ಟ್ ನಿಂದ ಜಾಮೀನಿನ […]