ಉಡುಪಿ: ಇನ್ಮುಂದೆ ರಸ್ತೆ ಪಕ್ಕ ಮೀನು ಮಾರಾಟ ಮಾಡುವಂತಿಲ್ಲ
ಉಡುಪಿ: ಉಡುಪಿ ನಗರದಲ್ಲಿ ರಸ್ತೆ ಪಕ್ಕದಲ್ಲಿ ಮೀನು ಮಾರಾಟ ಮಾಡುವುದನ್ನು ನಿಷೇಧಿಸಿ ನಗರಸಭೆ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಇನ್ಮುಂದೆ ನಿಗದಿತ ಸ್ಥಳ ಹೊರತುಪಡಿಸಿ ರಸ್ತೆ ಪಕ್ಕ ಯಾರು ಮೀನು ಮಾರಾಟ ಮಾಡುವಂತಿಲ್ಲ. ನಗರದ ಪ್ರಮುಖ ರಸ್ತೆಗಳಲ್ಲಿ ಮೀನುಗಾರ ಮಹಿಳೆಯರು ಕುಳಿತು ಮೀನು ಮಾರಾಟ ಮಾಡುವುದು ಬಹಳ ಹಿಂದಿನ ಪದ್ಧತಿಯಾಗಿದೆ. ಆದರೆ ಇದರಿಂದ ತೊಂದರೆಯಾಗುತ್ತಿದೆ ಸಾರ್ವಜನಿಕರಿಂದ ನಗರಸಭೆಗೆ ದೂರು ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಈ ಕ್ರಮಕೈಗೊಂಡಿದೆ. ಕೆಲವು ಯುವಕರು ವಾಹನಗಳಲ್ಲಿ ಮೀನು ತುಂಬಿಕೊಂಡು ಬಂದು ನಗರದಲ್ಲಿ ಸಂಚರಿಸುತ್ತಾ […]
ಡಿಕೆಶಿ ಮನೆಯ ಮೇಲಿನ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ: ಬಿಜೆಪಿಯ ಷಡ್ಯಂತ್ರಗಳಿಗೆ ನಾವು ಜಗ್ಗಲ್ಲ- ಕೃಷ್ಣಮೂರ್ತಿ ಆಚಾರ್ಯ
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆಯ ಮೇಲಿನ ಸಿಬಿಐ ದಾಳಿ ಖಂಡಿಸಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಉಡುಪಿ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಅಜ್ಜರಕಾಡುವಿನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು, ಬಿಜೆಪಿಗೆ ಕಾಂಗ್ರೆಸ್ ಅನ್ನು ನೇರವಾಗಿ ಎದುರಿಸುವ ತಾಕತ್ತು ಇಲ್ಲ. ಅದಕ್ಕಾಗಿ ಸಿಬಿಐನಂತಹ ಸಂಸ್ಥೆಗಳನ್ನು ಎದುರು ಬಿಟ್ಟು ಕಾಂಗ್ರೆಸ್ ಮುಖಂಡರನ್ನು […]
ಮಹಡಿಯಿಂದ ಕಾಲು ಜಾರಿ ಬಿದ್ದು ಮೂರು ವರ್ಷದ ಮಗು ಮೃತ್ಯು
ಮಂಡ್ಯ: ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಮಂಡ್ಯ ನಗರದ ರಾಜಕುಮಾರ್ ಬಡಾವಣೆಯಲ್ಲಿ ಇಂದು ಸಂಭವಿಸಿದೆ. ತಾಯಿ ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ಹೋದ ವೇಳೆ ಮಗು ಮಹಡಿಯ ಮೇಲಿಂದ ಬಿದ್ದು ಸಾವನ್ನಾಪ್ಪಿದೆ ಎನ್ನಲಾಗಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸುತ್ತಿದ್ದರು. […]
ನಟ ಸುಶಾಂತ್ ಸಾವಿನ ಬಗ್ಗೆ ಮಾಹಿತಿ ಇದೆ, ಭದ್ರತೆ ನೀಡಿದರೆ ತಿಳಿಸುತ್ತೇನೆಂದ ಮಧ್ಯಪ್ರದೇಶದ ಮಹಿಳೆ
ಇಂದೋರ್: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇದೆ. ನನಗೆ ಸೂಕ್ತ ಭದ್ರತೆ ನೀಡಿದರೆ ಮಾಹಿತಿ ನೀಡುವುದಾಗಿ ಮಧ್ಯ ಪ್ರದೇಶದ ಮಹಿಳೆಯೊಬ್ಬರು ಹೇಳಿದ್ದಾರೆ. ಈ ಮಹಿಳೆ ಮುಂಬೈ ನಿವಾಸಿಯಾಗಿದ್ದು, ಪ್ರಸ್ತುತ ಇಂದೋರ್ನಲ್ಲಿ ತನ್ನ ಸಂಬಂಧಿಕರೊಂದಿಗೆ ವಾಸಿಸುತ್ತಿದ್ದಾರೆ. ಇತ್ತೀಚೆಗೆ ಮಹಿಳೆ ತಮ್ಮನ್ನು ಭೇಟಿ ಮಾಡಿದ್ದರು ಎಂದು ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಹರಿನಾರಾಯಣಾಚಾರಿ ಮಿಶ್ರಾ ಅವರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ತನಗೆ ಬಹಳ ದಿನದಿಂದ ಗೊತ್ತು ಎಂದಿರುವ ಮಹಿಳೆ, ನಟನ […]
ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ: ಡಿಕೆಶಿಗೆ ಪ್ರಾಣ ಕೊಡಲು ಸಿದ್ಧ- ಕೊಳ್ಕೆಬೈಲ್
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆಯ ಮೇಲಿನ ಸಿಬಿಐ ದಾಳಿ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಅಜ್ಜರಕಾಡುವಿನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬ್ರಹ್ಮಗಿರಿ ಕಾಂಗ್ರೆಸ್ ಭವನದಿಂದ ಅಜ್ಜರಕಾಡುವರೆಗೆ ನೂರಾರು ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ನಡೆಯಿತು. ರಸ್ತೆ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸಭೆಯ ಬಳಿಕ ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಡಿಕೆಶಿಗೆ ಪ್ರಾಣ ಕೊಡಲು ಸಿದ್ಧ: […]