‘ಜೂನಿಯರ್‌ ರಾಜ್‌ಕುಮಾರ್‌’ ಖ್ಯಾತಿಯ ನಟ ಕೊಡಗನೂರು ಜಯಕುಮಾರ್‌ ಇನ್ನಿಲ್ಲ

ದಾವಣಗೆರೆ: ‘ಜೂನಿಯರ್‌ ರಾಜ್‌ಕುಮಾರ್‌’ ಎಂದೇ ಪ್ರಸಿದ್ಧರಾಗಿದ್ದ ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕಲಾವಿದ ಕೊಡಗನೂರು ಜಯಕುಮಾರ್‌ (72) ಅವರು ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ತಿಂಗಳುಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಚೇತರಿಸಿಕೊಂಡಿದ್ದ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಅವರಿಗೆ ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.  

ಹಾಪ್ ಕಾಮ್ಸ್ ನಿರ್ದೇಶಕರಾಗಿ ಜಯಕುಮಾರ್ ಪರ್ಕಳ ನೇಮಕ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್ ಕಾಮ್ಸ್)ದ ನಿರ್ದೇಶಕರಾಗಿ ಜಯಕುಮಾರ್ ಪರ್ಕಳ ಅವರು ಆಯ್ಕೆಯಾಗಿದ್ದಾರೆ. ಅವರು ಉಡುಪಿ ಕ್ಷೇತ್ರದಿಂದ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅವರು ಕಳೆದ 38 ವರ್ಷಗಳಿಂದ ಸರಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಜನತಾದಳ( ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಯಕುಮಾರ್ ಆಯ್ಕೆಗೆ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೇಶ್ ವಿ. ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಜಯರಾಮ […]

ಅಳ್ವಾರ್ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಜೈಪುರ್: ರಾಜಸ್ಥಾನದಲ್ಲಿ  2019 ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ನಾಲ್ವರಿಗೆ ಮಂಗಳವಾರ ಅಳ್ವಾರ್ ಸ್ಥಳೀಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹನ್ಸ್‌ರಾಜ್ ಗುರ್ಜರ್, ಅಶೋಕ್ ಗುಜರ್, ಛೋಟೇಲಾಲ್ ಗುರ್ಜರ್ ಮತ್ತು ಇಂದ್ರಜ್ ಗುರ್ಜರ್ ಎಂಬ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ. ಇವರಲ್ಲಿ ಹನ್ಸ್‌ರಾಜ್ ಸಾಯುವವರೆಗೂ ಶಿಕ್ಷೆ ಅನುಭವಿಸಲಿದ್ದಾರೆ. ಏಕೆಂದರೆ ಅವರು ಪುನರಾವರ್ತಿತವಾಗಿ ಅಪರಾಧ ಕೃತ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಪರ ವಕೀಲರು ಸುದ್ದಿಗಾರರಿಗೆ ಹೇಳಿದರು. ಇದೇ ಪ್ರಕರಣದಲ್ಲಿ […]

ಆರ್ ಆರ್ ನಗರ ಬೈ ಎಲೆಕ್ಷನ್: ಮುನಿರತ್ನಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ನಿಂದ ಗೆದ್ದು ಬಳಿಕ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾಗಿ ಸರ್ಕಾರ ರಚನೆಗೆ ಸಹಕಾರ ನೀಡಿದ್ದ ಅನರ್ಹ ಶಾಸಕ ಮುನಿರತ್ನ ಇದೀಗ ಹೊಸ ತಲೆನೋವು ಶುರುವಾಗಿದೆ. ಆರ್‌.ಆರ್‌.ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಗೆ ಸ್ಪರ್ಧಿಸಲು ಮುನಿರತ್ನ ಸಿದ್ಧತೆ ನಡೆಸಿದ್ದಾರೆ. ಆದರೆ, ಬಿಜೆಪಿ ನಾಯಕರು ಟಿಕೆಟ್‌ ಕೊಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಮುನಿರತ್ನ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದು, ಅವರು ಅನಿವಾರ್ಯವಾಗಿ ಜೆಡಿಎಸ್‌ ಬಾಗಿಲು ತಟ್ಟುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ರಾಜ್ಯ […]

ಲಕ್ಕಿ ಡ್ರಾ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ

ರಾಯಚೂರು: ಕೌನ್ ಬನೇಗಾ ಕರೋಡಪತಿ ರಿಯಾಲಿಟಿ ಶೋ ಲಕ್ಕಿ ಡ್ರಾಗೆ ಆಯ್ಕೆ ಆಗಿರುವುದಾಗಿ ದೂರವಾಣಿ ಕರೆ ಮೂಲಕ ಯುವತಿಯನ್ನು ನಂಬಿಸಿ 2,69,050 ರೂ. ಹಣ ಬ್ಯಾಂಕ್ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿರುವ ಬಗ್ಗೆ ಇಲ್ಲಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೆಗೆಲಸ ಮಾಡಿಕೊಂಡಿದ್ದ ಆಶ್ರಯ ಕಾಲೋನಿ ನಿವಾಸಿ ನಸೀಮಾ ಮೆಹಬೂಬ್ ವಂಚನೆಗೊಳಗಾದ ಯುವತಿ. ಕೆಬಿಸಿ ಲಕ್ಕಿ ಡ್ರಾ ₹25 ಲಕ್ಷ ಬಹುಮಾನಕ್ಕೆ ಆಯ್ಕೆ ಆಗಿರುವ ಬಗ್ಗೆ ಮೊಬೈಲ್ ‌ಮೊದಲು ಸಂದೇಶ ಬಂದಿತ್ತು.‌ ಆನಂತರ ಕರೆಮಾಡಿದ ವಂಚಕ, ವಿಜಯಕುಮಾರ್ […]