ಬಿಜೆಪಿ ಬಾಗಿಲು ತಟ್ಟಿದ ವಿನಯ್ ಕುಲಕರ್ಣಿ: ಬಿಜೆಪಿಯಲ್ಲಿ ತೀವ್ರ ವಿರೋಧ

ನವದೆಹಲಿ: ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಿಜೆಪಿ ಬಾಗಿಲು ಬಡಿಯಲು ಮುಂದಾಗಿದ್ದು, ಸಿಬಿಐ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯು ತೀವ್ರಗೊಳಿಸಿದೆ. ಈ ಕಾರಣದಿಂದಲೇ ಧಾರವಾಡದ ವಿನಯ್‌ ಕುಲಕರ್ಣಿ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸೇರಬಯಸಲು ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಎರಡು ತಿಂಗಳಿಂದ ಪ್ರಯತ್ನ ನಡೆಸಿದ್ದಾರೆ […]