ಯಶಸ್ವಿ ಜನಪ್ರತಿನಿಧಿಯಾಗಿ ಎರಡು ದಶಕಗಳನ್ನು ಪೂರೈಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚುನಾಯಿತ ಜನಪ್ರತಿನಿಧಿಯಾಗಿ 20 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಒಮ್ಮೆಯೂ ಸೋಲು ಕಾಣದೇ ಯಶಸ್ವಿ ಚುನಾಯಿತ ಪ್ರತಿನಿಧಿಯಾಗಿ ಮುಖ್ಯಮಂತ್ರಿಯಾಗಿ, ಪ್ರಧಾನ ಮಂತ್ರಿಯಂತಹ ಉನ್ನತ ಹುದ್ದೆಗಳಲ್ಲಿ ಅವರು ಮುನ್ನಡೆಯುತ್ತಿದ್ದಾರೆ. ಗುಜರಾತ್‌ ಮುಖ್ಯಮಂತ್ರಿಯಾಗಿರಲಿ ಅಥವಾ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯಾಗಿರಲಿ, ಮೋದಿ ಅವರು ಸದಾ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ ಎಂದು ಬಿಜೆಪಿ ಶ್ಲಾಘಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ‘ಅಕ್ಟೋಬರ್ 7, 2001ರಲ್ಲಿ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿ ಮೊದಲ […]

ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ: ಮಾಸ್ಕ್ ದಂಡ ಸಾವಿರದಿಂದ 250ಕ್ಕೆ ಇಳಿಕೆ

ಬೆಂಗಳೂರು: ಕೊರೊನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಕೈಗೊಂಡಿತ್ತು. ಅದರಂತೆ ಮಾಸ್ಕ್ ಧರಿಸಿದೆ ಓಡಾಡುತ್ತಿದ್ದವರಿಗೆ ನಗರ ಪ್ರದೇಶದಲ್ಲಿ 1 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಸರ್ಕಾರ ಕ್ರಮಕೈಗೊಂಡಿತ್ತು. ಆದರೆ ಸರ್ಕಾರದ ಈ ಕ್ರಮ ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಈ ಕ್ರಮಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಸರ್ಕಾರ ತನ್ನ ದಂಡದ ಪ್ರಮಾಣವನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಸಾವಿರದಿಂದ […]

ನಟಿ ರಿಯಾ ಚಕ್ರವರ್ತಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

ಮುಂಬೈ: ಬಾಲಿವುಡ್ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟಿನ ಆರೋಪದಡಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ನಟಿ ರಿಯಾ ಚರ್ಕವರ್ತಿಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಬಾಂಬೈ ಹೈಕೋರ್ಟ್ ರಿಯಾಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದರಿಂದ ಒಂದು ತಿಂಗಳ ನಂತರ ರಿಯಾ ಚರ್ಕವರ್ತಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಒಂದು ತಿಂಗಳಿನಿಂದ ರಿಯಾ ಚರ್ಕವರ್ತಿ ಜೈಲಿನಲ್ಲಿದ್ದು, ಜಾಮೀನು ಕೋರಿ ಬಾಂಬೆ ಹೈ ಕೋರ್ಟ್ ಮೆಟ್ಟಿಲೇರಿದ್ದರು. ರಿಯಾ ಚರ್ಕವರ್ತಿಗೆ ಒಂದು ಲಕ್ಷ ರುಪಾಯಿ ಶೂರಿಟಿ ಭದ್ರತೆ ಆಧಾರದ […]

ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ; ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ

ಕುಂದಾಪುರ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ಘಟಕದ ವತಿಯಿಂದ ಕುಂದಾಪುರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿಯ ಪ್ರಜ್ವಲ್, ಯುವತಿಯ ಮೇಲೆ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರನ್ನು ಪೂಜಿಸುವ ಪರಂಪರೆಯನ್ನು ಹೊಂದಿರುವ ಜಗತ್ತಿನ ಶ್ರೇಷ್ಠ ದೇಶವಾದ ಭಾರತದಲ್ಲಿ ಇಂತಹ ಕ್ರೂರ […]

ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ ಜೈಲು ಶಿಕ್ಷೆ ಗ್ಯಾರಂಟಿ.!

ಬೆಂಗಳೂರು: ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಲು ಮುಂದಾಗಿದ್ದು, ಕೊರೊನಾ ಟೆಸ್ಟ್ ಗೆ ಹೊಸ ನಿಯಮ ಜಾರಿಗೊಳಿಸಿದೆ. ಅದರಂತೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಒಪ್ಪದಿದ್ದವರಿಗೆ 50 ಸಾವಿರ ದಂಡ ಹಾಗೂ 6 ತಿಂಗಳಿನಿಂದ ಮೂರು ವರ್ಷದವರಿಗೆ ಜೈಲು ಶಿಕ್ಷೆ ವಿಧಿಸಲು ನಿರ್ಧರಿಸಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಇಲ್ಲದಿದ್ದರೆ ಅಂಥವರಿಗೆ ದಂಡ ಹಾಗೂ ಜೈಲು ಶಿಕ್ಷೆ ಫಿಕ್ಸ್ ಆಗಲಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ […]