50 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಗೆ ಮತ್ತೊಂದು ಗರಿ

ಉಡುಪಿ: ಕೋವಿಡ್ -19 ಸೋಂಕು ಕಾಣಿಸಿಕೊಂಡಿದ್ದ 50 ಗರ್ಭಿಣಿಯರಿಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. 2020ರ ಮೇ 27ರಿಂದ ಅಕ್ಟೋಬರ್ 3ರ ವರೆಗೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗವು 50 ಹೆರಿಗೆಗಳನ್ನು ಯಶಸ್ವಿಯಾಗಿ ನಡೆಸಿದೆ. ನವಜಾತ ಶಿಶುಗಳಿಗೆ ಕೋವಿಡ್ -19 ಸೋಂಕು ತಗುಲುವ ಅಪಾಯ ಇದ್ದುದರಿಂದ ಶಿಶುವನ್ನು ಸೋಂಕಿನಿಂದ ಮುಕ್ತಗೊಳಿಸಲು ಆಸ್ಪತ್ರೆ ಕಠಿಣ ಕ್ರಮಗಳನ್ನು ಕೈಗೊಂಡಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಬಗ್ಗೆ ಮಾತನಾಡಿದ […]

ಮಲ್ಪೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್-2’ ಸಿನಿಮಾದ ಚಿತ್ರೀಕರಣ

ಉಡುಪಿ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕನ್ನಡದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಚಾಪ್ಟರ್-2 ಚಿತ್ರದ ಎರಡನೇ ಹಂತದ ಚಿತ್ರೀಕರಣ ಆರಂಭಗೊಂಡಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಅವರ ತಂಡ ಸದ್ಯ ಮಲ್ಪೆಯ ಪಡುಕರೆಯಲ್ಲಿ ಬೀಡು ಬಿಟ್ಟಿದೆ. ಇಂದಿನಿಂದ ಉಡುಪಿಯ ಮಲ್ಪೆ ಹಾಗೂ ಪಡುಕರೆ ಪರಿಸರದಲ್ಲಿ ಚಿತ್ರದ ಚಿತ್ರೀಕರಣ ಶುರುವಾಗಿದೆ. ಚಿತ್ರದ ನಾಯಕ ರಾಕಿಂಗ್ ಸ್ಟಾರ್ ಯಶ್, ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇಂದು ನಾಯಕನಿಗೆ ಗ್ಯಾಂಗ್ ಸ್ಟರ್ ತಂಡವೊಂದು ಮುಖಾಮುಖಿಯಾಗುವ ದೃಶ್ಯವನ್ನು ಚಿತ್ರೀಕರಣ ಮಾಡಲಾಯಿತು. ಇದರಲ್ಲಿ ಆರು […]

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಕೋಟ ರಾಮಕೃಷ್ಣ ಆಚಾರ್ಯ ನೇಮಕ

ಉಡುಪಿ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಕೋಟ ರಾಮಕೃಷ್ಣ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ. ಮಹಾಸಭಾದ ಕರಾವಳಿ ಜಿಲ್ಲೆಗಳ ಉಸ್ತುವಾರಿ ಮಾರುತಿ ಬಡಿಗೇರ್‌ ರಾಯಚೂರು ಮತ್ತು ರಾಜ್ಯ ಯುವ ಘಟಕದ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ್‌ ಅವರ ಶಿಫಾರಸ್ಸಿನಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರು ಆಗಿರುವ ವಿಧಾನ ಪರಿಷತ್‌ ಸದಸ್ಯ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಬುಧವಾರ ನೇಮಕ ಮಾಡಿದ್ದಾರೆ. ಸ್ಪೋಟ್ಸ್‌ ಕನ್ನಡ ವೈಬ್‌ಸೈಟ್‌ ಸಂಸ್ಥಾಪಕರಾಗಿರುವ ಕ್ರೀಡಾಪಟು ರಾಮಕೃಷ್ಣ ಆಚಾರ್ಯ ಸಮಾಜಸೇವಕರಾಗಿ ಸಕ್ರೀಯರಾಗಿದ್ದಾರೆ.

ಕೇಂದ್ರ ಸಚಿವ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ನವದೆಹಲಿ: ಕೇಂದ್ರ ಸಚಿವ, ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಇಂದು ವಿಧಿವಶರಾಗಿದ್ದಾರೆ. 74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಇದೀಗ ಅವರು ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಮಾಹಿತಿ ನೀಡಿದ್ದಾರೆ. ಎಲ್‌ಜೆಪಿ ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ […]

ಕುಂದಾಪುರ: ಶೀಲ ಶಂಕಿಸಿ ಪತ್ನಿಯ ಕೊಲೆಗೆ ಯತ್ನಿಸಿದ ಆರೋಪಿ ಪತಿಗೆ 7 ವರ್ಷ ಶಿಕ್ಷೆ

ಕುಂದಾಪುರ: ಕಳೆದ ನಾಲ್ಕು ವರ್ಷಗಳ ಹಿಂದೆ ಗಂಗೊಳ್ಳಿಯ ತ್ರಾಸಿ ಎಂಬಲ್ಲಿ ಶೀಲ ಶಂಕಿಸಿ ಪತ್ನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಗೆ ಕುಂದಾಪುರದ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಮೂಲತಃ ಗಂಗೊಳ್ಳಿ ತ್ರಾಸಿಯ ಚಂದ್ರ ಪೂಜಾರಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನು ಪತ್ನಿಯೊಂದಿಗೆ ಪೂನಾದಲ್ಲಿ ವಾಸಿಸುತ್ತಿದ್ದನು. ಪತ್ನಿ ಚೊಚ್ಚಲ ಹೆರಿಗೆಗೆ ಊರಿಗೆ ಬಂದಿದ್ದಳು. ಆ ನಂತರ […]