ರಾಜಸ್ಥಾನ: ಅರ್ಚಕರೊಬ್ಬರನ್ನು ಜೀವಂತವಾಗಿ ಸುಟ್ಟುಹಾಕಿದ ದುಷ್ಕರ್ಮಿಗಳು

ಜೈಪುರ: ಅರ್ಚಕರೊಬ್ಬರನ್ನು ಐವರು ದುಷ್ಕರ್ಮಿಗಳು ಜೀವಂತವಾಗಿ ಸುಟ್ಟುಹಾಕಿದ ಅಮಾನವೀಯ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಈ ಐವರು ಜಿಲ್ಲೆಯ ದೇವಾಲಯದ ಭೂಮಿಯನ್ನು ಅತಿಕ್ರಮಿಸಲು ಮುಂದಾಗಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಚಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಕ್ನಾ ಗ್ರಾಮದಲ್ಲಿ ಬುಧವಾರ ಐವರು ಆರೋಪಿಗಳು ಅರ್ಚಕ ಬಾಬು ಲಾಲ್ ವೈಷ್ಣವ್ ಎಂಬುವವರ ಮೇಲೆ ಪೆಟ್ರೊಲ್ ಎರಚಿ ಬೆಂಕಿ ಹಚ್ಚಿದ್ದರು. ಗಂಭೀರ ಪರಿಸ್ಥಿತಿಯಲ್ಲಿದ್ದ ಅರ್ಚಕರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಗುರುವಾರ ರಾತ್ರಿ […]

ಮಾರ್ಗ ಮಧ್ಯೆಯೇ ಹೆಣ್ಣುಮಗುವಿಗೆ ಜನ್ಮ ನೀಡಿದ ಮಹಿಳೆ

ಅಣೆಹೊಲ: ಹೆರಿಗೆಗಾಗಿ ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ಬರುತ್ತಿರುವ ಸಂದರ್ಭದಲ್ಲಿ ಗರ್ಭಿಣಿಯೊಬ್ಬರು ಮಾರ್ಗ ಮಧ್ಯೆಯೇ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಮಹದೇಶ್ವರ ಸಮೀಪದ ಆಣೆಹೊಲ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಗ್ರಾಮದ ವೀರಣ್ಣ ಎಂಬುವವರ ಪತ್ನಿ ಕಮಲ ಅವರು ಗರ್ಭಿಣಿಯಾಗಿದ್ದರು. ಗುರುವಾರ ರಾತ್ರಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರ ಮನೆಗೆ ಸರಿಯಾದ ರಸ್ತೆ ಇಲ್ಲದೇ ಇರುವುದರಿಂದ ಬೆಟ್ಟದಲ್ಲಿರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ನಡೆದುಕೊಂಡೇ ಬರಲು ಮನೆಯಿಂದ ಇಬ್ಬರೂ ಹೊರಟಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಮನೆಯಿಂದ 250 ಮೀಟರ್‌ […]

ಹನಿ ನೀರಾವರಿ- ಪಾಲಿ ಹೌಸ್ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ಪರಿಶಿಷ್ಟ ವರ್ಗದ ಜನಾಂಗದವರಿಗೆ ಹನಿ ನೀರಾವರಿ ಮತ್ತು ಪಾಲಿ ಹೌಸ್ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದ ಕೃಷಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಐ.ಟಿ.ಡಿ.ಪಿ ಉಡುಪಿ ಕಚೇರಿ ದೂರವಾಣಿ ಸಂಖ್ಯೆ 0820 2574 814 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಮುಂಜಾಗೃತ ಕ್ರಮ ಪಾಲಿಸಿ-ಅಪರ ಜಿಲ್ಲಾಧಿಕಾರಿ

ಉಡುಪಿ: ಅಕ್ಟೋಬರ್ 13 ಹಾಗೂ 14ರಂದು ನಡೆಯಲಿರುವ ಡಿಪ್ಲೋಮಾ ಮತ್ತು ಪಿಜಿಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಸೋಂಕು ತಡೆಗೆ ಸರ್ಕಾರ ಹೊರಡಿಸಿರುವ ಎಲ್ಲಾ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಪ್ಲೋಮಾ ಮತ್ತು ಪಿಜಿಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಮಾರ್ಗ ಸೂಚಿಗಳನ್ನು ತಪ್ಪದೇ ಪಾಲಿಸಬೇಕೆಂದು ಅಧಿಕಾರಿಗಳಿಗೆ […]

ಉಡುಪಿ ಜಿಲ್ಲಾ ವಾರ್ತಾ ಕಚೇರಿಗೆ ಆಯುಕ್ತ ಡಾ. ಪಿ.ಎಸ್. ಹರ್ಷ ಭೇಟಿ

ಉಡುಪಿ: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್ ಹರ್ಷ ಅವರು ಇಂದು ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಕರ ಕಚೇರಿಗೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು. ವಾರ್ತಾ ಇಲಾಖೆಯು ಈ ಹಿಂದೆ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ಪಡಿಸುತ್ತಾ ಬಂದಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಕೊಂಡಿಯಾಗಿಯೂ ಕಾರ್ಯ ನಿರ್ವಹಿಸಬೇಕಾಗಿದೆ. ಅತ್ಯಂತ ಜವಾಬ್ದಾರಿಯುತವಾಗಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಕಚೇರಿ […]