ಎಡನೀರು ಮಠದ ಭಾವಿಉತ್ತರಾಧಿಕಾರಿ ಜಯರಾಮ ಮಂಜತ್ತಾಯರಿಂದ ಉಡುಪಿ ಅಷ್ಟಮಠಾಧೀಶರ ಭೇಟಿ, ಸಮಾಲೋಚನೆ

ಉಡುಪಿ: ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಎಡನೀರು ತೋಟಕಾಚಾರ್ಯ ಮಠಕ್ಕೆ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಜಯರಾಮ ಮಂಜತ್ತಾಯ (ಸಚ್ಚಿದಾನಂದ ಭಾರತೀ ಸ್ವಾಮೀಜಿ) ಅವರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥಕ್ಷೇತ್ರ ಸಂಚಾರ ಪ್ರಯುಕ್ತ ಶುಕ್ರವಾರ ಉಡುಪಿಗೆ ಭೇಟಿ ನೀಡಿದರು. ಉಡುಪಿ ಕೃಷ್ಣಮುಖ್ಯಪ್ರಾಣ ದೇವರ ದರ್ಶನ ಪಡೆದ ಬಳಿಕ ಶ್ರೀಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದರು.‌ ಬಳಿಕ ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ, ಹಿರಿಯ ವಿಶ್ವಪ್ರಿಯ ಸ್ವಾಮೀಜಿ ಭೇಟಿ […]

ಕುಂದಾಪುರ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 7 ಮಂದಿಯ ಬಂಧನ

ಕುಂದಾಪುರ: ತಾಲೂಕಿನ ಸಿದ್ದಾಪುರ ಮಾಕೇಟ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 7 ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಂತೋಷ ಶೆಟ್ಟಿ (26), ವಿವೇಕ ಶೆಟ್ಟಿ (29), ಸುಬ್ರಹ್ಮಣ್ಯ ಕೊಠಾರಿ (36), ಕಿರಣ್ ಪೂಜಾರಿ( 19), ಅಕ್ಷಯ ಪೂಜಾರಿ(23), ಜಯ ಶೆಟ್ಟಿ(36), ಅಪ್ಸರ್ (25) ಎಂದು ಗುರುತಿಸಲಾಗಿದೆ. ಗುರುವಾರ ನಡೆದ ಸನ್ ರೈಸರ್ ಮತ್ತು ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯದ ವೇಳೆ ಆರೋಪಿಗಳು ಬೆಟ್ಟಿಂಗ್ ಹಾಕುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ […]

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರ ಬಂಧನ

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 3 ಲಕ್ಷ ರೂ. ನಗದು ಮತ್ತು 4 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಕೆ.ಜಿ.ಹಳ್ಳಿ ನಗರ ಇದಾಯತ್ ನಗರ 6ನೇ ಕ್ರಾಸ್ ಇಮ್ರಾನ್ ಪಾಷ (25), ಜಾಲಿ ಮೋಲಾ ರಾಣಸಿಂಗ್ ಬಿಡಿಜಿ ಲೈನ್ ಮುಹಮ್ಮದ್ ಇರ್ಫಾನ್ (27), ನ್ಯೂ ಗುಡದಹಳ್ಳಿ ನೆಹರೂ ರಸ್ತೆ 4ನೇ ಕ್ರಾಸ್ ಮುಜಾಮಿಲ್ ಅಹ್ಮದ್ (21), ಸರ್ವಜ್ಞನಗರ ಹೆಣ್ಣೂರು ಕ್ರಾಸ್, ಶಾರದಾ ಶಾಲೆ ಹತ್ತಿರ ಚಿಕ್ಕಲೇಔಟ್ ರೋಮನ್ ವಿಮಲ್ […]

ಗದ್ದೆಯಲ್ಲಿ ಕಂತೆ ಕಂತೆ ನೋಟು ಪತ್ತೆ: ಅಚ್ಚರಿಗೊಂಡ ಗ್ರಾಮಸ್ಥರು

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಬುಕ್ಲೂರಹಳ್ಳಿಯ ಜಮೀನು ಒಂದರಲ್ಲಿ ಎರಡು ಸಾವಿರ, ನೂರು ಹಾಗೂ ಐವತ್ತು ರೂಪಾಯಿ ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಇದು ಗ್ರಾಮಸ್ಥರಲ್ಲಿ ಅಚ್ಚರಿಯನ್ನುಂಟು ಮಾಡಿದೆ. ಕಂತೆ ಕಂತೆ ಹಣ ನೋಡಿದ ಜನರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ತೆಗೆದುಕೊಂಡರೆ ಮುಂದೆ ಏನಾದರೂ ಸಮಸ್ಯೆ ಆಗಬಹುದೆಂಬ ಕಾರಣಕ್ಕಾಗಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಣದ ಪರಿಶೀಲನೆ ನಡೆಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಕಳವು ಹಣ.? ಇಲ್ಲಿನ ಬುಕ್ಲೂರಹಳ್ಳಿ […]

ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ ಜಾಮೀನು‌ ಮಂಜೂರು: ಆದರೂ ಬಿಡುಗಡೆ ಭಾಗ್ಯವಿಲ್ಲ

ರಾ‌ಂಚಿ: ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಪಕ್ಷದ ನಾಯಕ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಲಾಲು ಅವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿದರೂ ಜೈಲುವಾಸ ಮುಂದುವರಿಯಲಿದೆ. ಲಾಲು ಹಲವು ಪ್ರಕರಣಗಳಲ್ಲಿ ದೋಷಿಯಾಗಿದ್ದು, ದುಮ್ಕಾ ಖಜಾನೆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಇರುವುದರಿಂದ ಅವರು ಜೈಲಿನಲ್ಲಿಯೇ ಇರಬೇಕಾಗಿದೆ. 1992–93ರಲ್ಲಿ ಚಾಯಿಬಾಸಾ ಖಜಾನೆಯಿಂದ ₹33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ […]