ನೀಲಾವರ ಗೋಶಾಲೆಗೆ 60 ಸಾವಿರ ರೂ. ದೇಣಿಗೆ ನೀಡಿದ ನಿವೃತ್ತ ಬ್ಯಾಂಕ್ ಅಧಿಕಾರಿ ಮುದ್ರಾಡಿ ರಾಘವೇಂದ್ರ ಕಲ್ಕೂರ

ನೀಲಾವರ: ತಮ್ಮ 60ನೇ ಹುಟ್ಟಿದ ದಿನವನ್ನು ಸ್ಮರಣೀಯವಾಗಿಸುವ ಮತ್ತು ಸಾರ್ಥಕವಾಗಿ ಆಚರಿಸುವ ಸದುದ್ದೇಶದಿಂದ ಕರ್ಣಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ, ಉಡುಪಿ ಚಿಟ್ಪಾಡಿ ಬ್ರಾಹ್ಮಣ ಸಮಿತಿಯ ಸಕ್ರಿಯ ಸದಸ್ಯ ಮುದ್ರಾಡಿ ರಾಘವೇಂದ್ರ ಕಲ್ಕೂರರು ನೀಲಾವರ ಗೋಶಾಲೆಗೆ 60 ಸಾವಿರ ರೂ. ದೇಣಿಗೆ ನೀಡಿ ಮಾದರಿಯಾಗಿದ್ದಾರೆ. ಮನೆಯಲ್ಲಿ ಗೋವುಗಳನ್ನು ಸಾಕಿಕೊಂಡು ತಮ್ಮನ್ನು ಅತ್ಯಂತ ಕಷ್ಟದಿಂದ ಸಾಕಿ ಸಲಹಿದ ಮಾತೃಶ್ರೀ ನಾಗವೇಣಿ ಕಲ್ಕೂರರನ್ನು ಸ್ಮರಿಸಿಕೊಂಡು ಈ ಸಣ್ಣ ಸೇವೆಯನ್ನು ಗೋಶಾಲೆಗೆ ನೀಡಿರುವುದಾಗಿ ಕಲ್ಕೂರರು ಸೌಜನ್ಯದಿಂದ ನುಡಿದರು.
ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರಿಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

ಉಡುಪಿ: ಕಡಲತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತ ಅವರ ಜನ್ಮದಿನದಂದು ಕೋಟತಟ್ಟು ಗ್ರಾ.ಪಂ. ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ನೀಡುತ್ತಿರುವ ಪ್ರತಿಷ್ಠಿತ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರಶಸ್ತಿ ಪುರಸ್ಕೃತರ ಊರಿನಲ್ಲಿಯೇ ಪ್ರದಾನ ಮಾಡಲಾಯಿತು. 2020ನೇ ಸಾಲಿನ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮೈಸೂರಿನ ಪ್ರಮತಿ ಸ್ಕೂಲಿನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು. ಕೋಟ ಶಿವರಾಮ […]
ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯ ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮವಾಗಿದೆ. ಆದರೆ ಇದೀಗ ಇದಕ್ಕೆ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ […]
ಕೇರಳ: ಮಾಜಿ ಕ್ರಿಕೆಟಿಗ ಆತ್ಮಹತ್ಯೆಗೆ ಶರಣು

ಅಲಪ್ಪುಳ: ಕೇರಳದ ಮಾಜಿ ಕ್ರಿಕೆಟಿಗ ಎಂ.ಸುರೇಶ್ ಕುಮಾರ್ (47) ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರೇಶ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಇರುವುದನ್ನು ಮೊದಲು ನೋಡಿದ್ದು ಅವರ ಮಗ. ರಾತ್ರಿ 7.15ರ ಸುಮಾರಿಗೆ ಅವರು ನಮಗೆ ಈ ವಿಷಯವನ್ನು ತಿಳಿಸಿದರು. ಇದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಕುರಿತು ತನಿಖೆ ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಎಡಗೈ ಸ್ಪಿನ್ನರ್ ಆಗಿದ್ದ ಸುರೇಶ್ ಅವರು ಭಾರತ ತಂಡದ ಪರ ಆಡಿದ್ದ ಕೇರಳದ ಮೊದಲ ಕ್ರಿಕೆಟಿಗ ಎಂಬ ಹಿರಿಮೆ […]
ಕಾಂಗ್ರೆಸ್ ನಿಂದ ರೈತರ ದಾರಿ ತಪ್ಪಿಸುವ ಪ್ರಯತ್ನ: ಕುಯಿಲಾಡಿ

ಉಡುಪಿ: ಕೇಂದ್ರ ಸರಕಾರದ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಕೃಷಿ ಮಸೂದೆಯ ಬಗ್ಗೆ ರೈತರಿಗೆ ತಪ್ಪು ಮಾಹಿತಿ ನೀಡುವುದರ ಜತೆಗೆ ಸಿ.ಎ.ಎ. ಮಾದರಿಯಲ್ಲಿ ಪ್ರತಿಭಟನೆ ನಡೆಸಿ ರೈತರ ದಾರಿ ತಪ್ಪಿಸುವ ಪ್ರಯತ್ನದಲ್ಲಿ ನಿರತರಾಗಿರುವುದು ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಮಸ್ಯೆಯನ್ನು […]