ಬ್ರಹ್ಮಾವರ: ಸೇವಾಸಿಂಧು ಕಚೇರಿಗೆ ನುಗ್ಗಿದ ಖಾಸಗಿ ಬಸ್; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಉಡುಪಿ: ಬ್ರಹ್ಮಾವರದ ಸೇವಾಸಿಂಧು ಕಚೇರಿಗೆ ಖಾಸಗಿ ಬಸ್ಸು ನುಗ್ಗಿದ್ದು, ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ತಾಂತ್ರಿಕ ದೋಷದಿಂದ ಬಸ್ ಬ್ರಹ್ಮಾವರ ನಿಲ್ದಾಣದಲ್ಲಿ ನಿಂತಿತ್ತು. ಬಸ್ ಸ್ಟಾರ್ಟ್ ಆಗದಿದ್ದಾಗ ಸಿಬ್ಬಂದಿ ಹಿಂದಿನಿಂದ ತಳ್ಳಿಕೊಂಡು ಹೋಗಿದ್ದರು. ಈ ವೇಳೆ ಇಳಿಜಾರಾದ ರಸ್ತೆಯಲ್ಲಿ ಬಸ್ ವೇಗವಾಗಿ ಚಲಿಸಿದ್ದು, ಮುಂಭಾಗದಲ್ಲಿದ್ದ ತಾಲೂಕು ಪಂಚಾಯತ್ ಕಟ್ಟಡದತ್ತ ಸಾಗಿದೆ. ಬಸ್ ನಲ್ಲಿ ಚಾಲಕನಿದ್ದರೂ ತಾಂತ್ರಿಕ ದೋಷದಿಂದ ಬ್ರೇಕ್ ಹಾಕಿದರೂ ಬಸ್ ನಿಯಂತ್ರಣಕ್ಕೆ ಬರಲಿಲ್ಲ. ಹೀಗಾಗಿ ಸೇವಾ ಸಿಂಧು ಕಚೇರಿಗೆಯೊಳಗೆ ನುಗ್ಗಿದೆ. ಬಸ್ ಡಿಕ್ಕಿ ಹೊಡೆದ […]

ಅಕ್ಟೋಬರ್ 30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ

ಬೆಂಗಳೂರು: ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಅ.30ರ ವರೆಗೆ ಮೂರು ವಾರ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಅ.12ರಿಂದ 30ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.  

ಅಜ್ಜರಕಾಡು: ಫ್ಲ್ಯಾಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವೃದ್ಧ

ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆ ಸಮೀಪದಲ್ಲಿ ಇರುವ ವಸತಿ ಸಮುಚ್ಚಯವೊಂದರ 11ನೇ ಮಹಡಿಯ ಮೇಲಿಂದ ಜಿಗಿದು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೊಡಂಕೂರು ನಿವಾಸಿ ಪಿ. ನಾರಾಯಣ ಪೂಜಾರಿ (80 ) ಎಂದು ತಿಳಿದುಬಂದಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆಯನ್ನು ನೀಡಿ ಇಲಾಖೆಗೆ ಸಹಕರಿಸಿದ್ದಾರೆ.

ಉಡುಪಿ ಶಾಸಕ ಕೆ. ರಘುಪತಿ ಭಟ್ ಗೆ ಕೊರೊನಾ ಪಾಸಿಟಿವ್

ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಕಾರಣ ಸ್ವಲ್ಪದಿನಗಳ ಕಾಲ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ಗೆ ಒಳಗಾಗಿ ಜಾಗೃತೆವಹಿಸಿ ಎಂದು ಅವರು ವಿನಂತಿಸಿಕೊಂಡಿದ್ದಾರೆ.  

ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ವಿಧಿವಶ

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ (71) ಅವರು ಭಾನುವಾರ ಅಸೌಖ್ಯದಿಂದ ನಿಧನ ಹೊಂದಿದರು. ಮೂಲತಃ ಬಂಟ್ವಾಳದವರಾದ ಅನಂತಕೃಷ್ಣ ಅವರು ಎಂ.ಎಸ್ಸಿ ಪದವೀಧರರು. ಮೊದಲು ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು, ಮೊಡಂಕಾಪು ದೀಪಿಕಾ ಹೈಸ್ಕೂಲು ಮತ್ತು ಮಣಿಪಾಲದ ಎಂಐಟಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ನಂತರ ಹಿಂದೂಸ್ಥಾನ್ ಎರೊನಾಟಿಕ್ಸ್ ಲಿಮಿಟೆಡ್ ಸೇರಿದರು. ಬಳಿಕ 1971ರಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗಕ್ಕೆ ಸೇರ್ಪಡೆಗೊಂಡರು. ಬ್ಯಾಂಕ್ ನಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಅವರು, 2000ರಲ್ಲಿ ಅಧ್ಯಕ್ಷ […]