ಬ್ರಹ್ಮಾವರ: ಕಾರು ಡಿಕ್ಕಿ ಹೊಡೆದು ಬಾಲಕ ಮೃತ್ಯು
ಬ್ರಹ್ಮಾವರ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಬ್ರಹ್ಮಾವರ ಆಕಾಶವಾಣಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಶಿವರಾಮ (4) ಎಂದು ಗುರುತಿಸಲಾಗಿದೆ. ಈತ ಆಕಾಶವಾಣಿ ಜಂಕ್ಷನ್ ಬಳಿಯ ಪಿಂಗಾರ ಹೊಟೇಲ್ ಎದುರು ರಸ್ತೆ ದಾಟಲು ನಿಂತಿದ್ದ ಎನ್ನಲಾಗಿದೆ. ಈ ವೇಳೆ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮಹಮ್ಮದ್ ಇಸ್ಮಾಯಿಲ್ ಎಂಬುವರು ತನ್ನ ಡಸ್ಟರ್ ಕಾರನ್ನು ಅತೀ ವೇಗವಾಗಿ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬಾಲಕ […]
ಉಡುಪಿ: ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ
ಉಡುಪಿ: ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಶುಶ್ರೂಷಕರು, ಎಲ್ಎಚ್ವಿ, ಡೆಂಟಲ್ ಹೈಜೆನಿಸ್ಟ್, ಎಮ್.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಇನ್ಸ್ಟ್ರಾಕ್ಟರ್ ಫಾರ್ದ ಯಂಗ್ ಹಿಯರಿಂಗ್ ಇಂಪಾಯರ್ಡ್ ಚಿಲ್ಡ್ರನ್ ಹಾಗೂ ಆರ್.ಎಮ್.ಎನ್.ಸಿ.ಎಚ್+ಎ ಕೌನ್ಸಿಲರ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 16 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಇಲ್ಲಿ ನಡೆಯುವ ನೇರ […]
ಉಡುಪಿ: ತಾಲೂಕು ಆಸ್ಪತ್ರೆಗಳಲ್ಲಿ ತೆರವಾಗಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಉಡುಪಿ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಾದ ತಾಲೂಕು ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳಕ್ಕೆ ಕೋವಿಡ್ ಹತೋಟಿ ಹಿನ್ನೆಲೆಯಲ್ಲಿ ತೆರವಾಗಿರುವ ಶುಶ್ರೂಷಕರ 29 ಹುದ್ದೆ, ಪ್ರಯೋಗಶಾಲಾ ತಂತ್ರಜ್ಞರ 45 ಹುದ್ದೆ ಹಾಗೂ ಗ್ರೂಪ್ ಡಿ 29 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಅಕ್ಟೋಬರ್ 15ರ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಅಜ್ಜರಕಾಡು, ಉಡುಪಿ ಇಲ್ಲಿಗೆ ಸಲ್ಲಿಸಬೇಕು. ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕ್ಕೆ […]
ಹೇರೂರು ನಿವಾಸಿ ಕಾಣೆ: ಆರು ವರ್ಷದ ಬಳಿಕ ದೂರು ದಾಖಲು
ಉಡುಪಿ: ವ್ಯಕ್ತಿಯೊಬ್ಬರು ಕಾಣೆಯಾಗಿ ಆರು ವರ್ಷದ ಬಳಿಕ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಘಟನೆ ಹೇರೂರಿನಲ್ಲಿ ನಡೆದಿದೆ. ಹೇರೂರು ಹಾಡಿ ಮನೆ ನಿವಾಸಿ ದೇವರಾಜ ಶೆಟ್ಟಿ (45) ಅವರು 2014ರ ಫೆಬ್ರವರಿ 21ರಿಂದ ಕಾಣೆಯಾಗಿದ್ದರೆಂದು ದೂರು ನೀಡಲಾಗಿದೆ. ಚಹರೆ: ಈ ವ್ಯಕ್ತಿ 191 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋದಿ ಮೈಬಣ್ಣ ಹೊಂದಿದ್ದು, ಕನ್ನಡ, ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಿಗೆ ಮಾಹಿತಿ ನೀಡುವಂತೆ […]
ಉಡುಪಿ ಬೀಡಿನಗುಡ್ಡೆಯ ನಿವಾಸಿ ನಾಪತ್ತೆ
ಉಡುಪಿ: ಉಡುಪಿ ಬೀಡಿನಗುಡ್ಡೆ ನಿವಾಸಿ ವಾಲಪ್ಪ ಚವ್ಹಾಣ್ (34) ಅವರು 2018ರ ಫೆಬ್ರವರಿ 11ರಿಂದ ಕಾಣೆಯಾಗಿದ್ದಾರೆ. ಚಹರೆ: 5 ಅಡಿ 4 ಇಂಚು ಎತ್ತರ, ದೃಢಕಾಯ ಶರೀರ, ಗೋದಿ ಮೈಬಣ್ಣ ಹೊಂದಿದ್ದು, ಲಂಬಾಣಿ, ಕನ್ನಡ, ಕೊಂಕಣಿ, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.