ಕೆಂಪಾದವೋ ಎಲ್ಲಾ ಕೆಂಪಾದವೋ: ಪ್ರಜ್ವಲ್ ಅಮೀನ್ ಪಿತ್ರೋಡಿ ಸೆರೆ ಹಿಡಿದ ಚಿತ್ರಗಳು

ಕಡಲ ಕಿನಾರೆಯನ್ನು ಮುತ್ತಿಕ್ಕಲು ಬರುತ್ತಿರುವ ಹಾಲ್ನೊರೆಯ ಅಲೆಗಳು ಕೆಂಪಾದವೋ ಎಲ್ಲಾ ಕೆಂಪಾದವೋ ಬಾನಾಂಗಳದಲ್ಲಿ ಸೂರ್ಯನ ಚಿತ್ತಾರ ನಿನ್ನ ಕೆನ್ನೆಯಂತೆ ಬಾನು ಕೆಂಪೇರಿದೆ ಸಂಜೆಗಣ್ಣಿನ ಹಿನ್ನೋಟ ಈ ಚೆಂದದ ಚಿತ್ರಗಳನ್ನು ಸೆರೆ ಹಿಡಿದವರು ಪ್ರಜ್ವಲ್ ಅಮೀನ್ ಪಿತ್ರೋಡಿ

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ 1300ಕ್ಕೂ ಹೆಚ್ಚು ಉಚಿತ ಕನ್ನಡಕ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭ ಭಾನುವಾರ ಉಡುಪಿ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಣ್ಣಿನ ತಪಾಸಣೆಗೆ ಒಳಪಟ್ಟಿದ್ದ ಶಿಬಿರಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಕನ್ನಡಕ ವಿತರಣೆ ಮಾಡಿದರು. 1300ಕ್ಕೂ ಹೆಚ್ಚು ಕನ್ನಡಕ ವಿತರಣೆ: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲೆಯಾದ್ಯಂತ 1300ಕ್ಕೂ ಹೆಚ್ಚು ಉಚಿತ […]

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್: ಎಂ.ಚಂದ್ರಪ್ಪ

ಮೈಸೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರಿಗೆ ತಮ್ಮ ಕೆಲಸದ ನಿಮಿತ್ತ ರಾಜ್ಯದ ವಿವಿಧೆಡೆ ಸಂಚರಿಸಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ನಿಗಮದಿಂದ ಪಾಸ್ ವಿತರಣೆ ಮಾಡಲಾಗುವುದು ಎಂದರು. ಮೈಸೂರು ಜಿಲ್ಲೆಯಲ್ಲಿನ 60,600 ಕಟ್ಟಡ ಕಾರ್ಮಿಕರಿಗೆ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ನಂತರದ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಚಂದ್ರಪ್ಪ ತಿಳಿಸಿದರು.  

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ 1,236 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆದ ಕಣ್ಣಿನ ತಪಾಸಣೆ ಮತ್ತು 300 ಹೆಚ್ಚು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಕಣ್ಣಿನ ತಪಾಸಣೆ ಮಾಡಿಸಿಕೊಂಡ 1,236 ಫಲಾನುಭವಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಉಚಿತ ಕನ್ನಡಕಗಳನ್ನು ಭಾನುವಾರ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ವಿತರಿಸಿದರು. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮೋರ್ಚಾ ಮತ್ತು ಪ್ರಸಾದ ನೇತ್ರಾಲಯದ ಸಹಭಾಗಿತ್ವದಲ್ಲಿ  ನಡೆದ ಕಾರ್ಯಕ್ರಮಕ್ಕೆ ಸೆಲ್ಯುಲಾರ್ ಫೌಂಡೇಶನ್‌ನ ಸಂಚಾಲಕ  ಧರ್ಮಪ್ರಸಾದ ರೈ ಉತ್ತಮ ಗುಣಮಟ್ಟದ ಕನ್ನಡಕವನ್ನು ಉಚಿತವಾಗಿ ನೀಡಿದರು. ಪ್ರಸಾದ ನೇತ್ರಾಲಯದ […]

ರಾಜ್ಯಗಳಿಗೆ 12 ಸಾವಿರ ಕೋಟಿ ರೂ. ಬಡ್ಡಿ ರಹಿತ ಸಾಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೋವಿಡ್ 19 ನಿಂದಾಗಿ ಕುಸಿದಿರುವ ದೇಶದ ಆರ್ಥಿಕತೆಯನ್ನು ವೃದ್ಧಿಸಲು ಕೇಂದ್ರ ಸರ್ಕಾರ ಕೆಲವೊಂದು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಂತೆ ಮುಂದಿನ 50 ವರ್ಷಗಳಿಗೆ ರಾಜ್ಯಗಳಿಗೆ 12 ಸಾವಿರ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈಶಾನ್ಯ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ₹ 2,500 ಕೋಟಿ ಪಡೆಯಲಿದೆ. ಇತರೆ ರಾಜ್ಯಗಳಿಗೆ 7,500 ಕೋಟಿ ರೂ. ಹಾಗೂ 2,000 ಕೋಟಿ ರೂ. ಗಳು ಕೇಂದ್ರದ ಮಾನದಂಡಗಳನ್ನು ಪೂರೈಸುವ ರಾಜ್ಯಗಳಿಗೆ ನೀಡಲಾಗುತ್ತದೆ ಎಂದು ವಿತ್ತ […]