ಉಡುಪಿ: ಬ್ಯಾಂಕ್ ನಲ್ಲಿ ಹಣ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರ ಚಿನ್ನದ ಬಳೆಗಳನ್ನು ದೋಚಿದ ವಂಚಕ

ಉಡುಪಿ: ನಗರದ ಮಿತ್ರಪ್ರಿಯ ಆಸ್ಪತ್ರೆಯ ಬಳಿ ವಂಚಕನೊಬ್ಬ ಮಹಿಳೆಯಿಂದ ಚಿನ್ನದ ಬಳೆಗಳನ್ನು ದೋಚಿದ ಘಟನೆ ಸೋಮವಾರ ನಡೆದಿದೆ. ಮುದರಂಗಡಿಯ ಹಲಸಿನಕಟ್ಟೆಯ ನಿವಾಸಿ 63 ವರ್ಷದ ಸರೋಜಾ ಆಭರಣ ಕಳೆದುಕೊಂಡವರು. ಇವರು ಸೋಮವಾರ ಚಿಕಿತ್ಸೆಗಾಗಿ ಉಡುಪಿಯ ಕಲ್ಪನ ಚಿತ್ರಮಂದಿರದ ಬಳಿಯ ಕ್ಲಿನಿಕ್‌ವೊಂದಕ್ಕೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ನಾನು ಕರ್ಣಾಟಕ ಬ್ಯಾಂಕ್ ಉದ್ಯೋಗಿ, ರಾಜೇಶ್ ರಾಮಣ್ಣ ಭಂಡಾರಿಯ ಮಗನೆಂದು ಪರಿಚಯ ಮಾಡಿಕೊಂಡ ಆತ, ಕರ್ನಾಟಕ ಬ್ಯಾಂಕ್‌ನಲ್ಲಿ ಬ್ಯಾಂಕಿನಲ್ಲಿ ಬಡವರಿಗೆ 17 ಸಾವಿರ ಹಣ ಕೊಡುತ್ತಿದ್ದಾರೆ […]
ಬೆಂಗಳೂರು ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಆರೋಪಿ

ಬೆಂಗಳೂರು: ಎರಡು ತಿಂಗಳ ಹಿಂದೆ ಬೆಂಗಳೂರಿನ ಡಿಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿಹಚ್ಚಿ ಗಲಭೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸೋಮವಾರ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡರು ರಾಜಕೀಯ ದ್ವೇಷ ಸಾಧಿಸುತ್ತಿದ್ದರು. ಇದೇ ಗಲಭೆಗೆ ಮುಖ್ಯ ಕಾರಣ ಎಂದು ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ಮಾಜಿ […]
ಹಿರಿಯಡಕ: ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಬಂಧನ

ಹಿರಿಯಡಕ: ದಲಿತ ಬಾಲಕಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಅ.12ರಂದು ಬಂಧಿಸಿದ್ದಾರೆ. ಎರಡು ತಿಂಗಳ ಹಿಂದೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಬಂಧಿತ ಆರೋಪಿಯನ್ನು ಬೈರಂಪಳ್ಳಿಯ ಪ್ರದೀಪ್ ಶೆಟ್ಟಿ(39) ಎಂದು ಗುರುತಿಸಲಾಗಿದೆ. ಈತ ಆ. 24ರಂದು ಮಧ್ಯಾಹ್ನ ವೇಳೆ ಮನೆಯಲ್ಲಿದ್ದ 13 ವರ್ಷ ಪ್ರಾಯದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಈತ ಬಾಲಕಿಯ ಮನೆಯ ಸಮೀಪ ಕೆಲಸ ನಿರ್ವಹಿಸುತ್ತಿದ್ದು, ಇದೇ […]
ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ; ಪತ್ತೆ ಹಚ್ಚಿದ ಬಜರಂಗದಳ

ಮಂಗಳೂರು: ಹಾಲು ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಮಂಗಳವಾರ ಮುಂಜಾನೆ ಮಂಗಳೂರು ನಗರದಲ್ಲಿ ನಡೆದಿದೆ. ಬಿಸಿರೋಡ್ ಕಡೆಯಿಂದ ಮಂಗಳೂರು ನಗರದೊಳಗೆ ಆಗಮಿಸುತ್ತಿದ್ದ ಆರೋಕ್ಯ ಹಾಲು ಪೂರೈಕೆ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸವನ್ನು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಬಜರಂಗದಳ ಕಾರ್ಯಕರ್ತರು, ಓರ್ವ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಹಾಲಿನ ವಾಹನದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಪಂಪ್ […]
ಮುನಿರತ್ನಗೆ ಬಿಗ್ ರಿಲೀಫ್: ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ಬೆಂಗಳೂರು: 2018ರ ವಿಧಾನಸಭೆ ಚುನಾವಣೆಯಲ್ಲಿ ಮುನಿರತ್ನ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಇದರಿಂದ ಮುನಿರತ್ನ ಅವರಿಗೆ ಆರ್ ಆರ್ ನಗರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅಡ್ಡಿಯಾಗಿದ್ದ ಆತಂಕ ದೂರವಾಗಿದೆ. ರಾಜ್ಯ ವಿಧಾನಸಭೆಗೆ 2018ರಲ್ಲಿ ನಡೆದ ಚುನಾವಣೆ ಸಂದರ್ಭ ಆರ್.ಆರ್. ನಗರ ಕ್ಷೇತ್ರದ ಅಭ್ಯರ್ಥಿ ಮುನಿರತ್ನ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಅರ್ಜಿ ಇತ್ಯರ್ಥ ಆಗುವವರೆಗೆ ಕ್ಷೇತ್ರದ ಉಪ ಚುನಾವಣೆ ನಡೆಸಕೂಡದು ಎಂದು […]