ಕರಾವಳಿಯಾದ್ಯಂತ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ಒಟ್ಟು ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ‌. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ನಾಳೆ ಬೆಳಿಗ್ಗೆ 8.30ರ ವರೆಗೆ 205 ಮಿ.ಮೀ.ಗೂ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯುವ […]

ಕಟಪಾಡಿ: ಮಹಿಳೆಯೊಬ್ಬರು ಆಟೊದಲ್ಲಿ ಬಿಟ್ಟುಹೋಗಿದ್ದ 50 ಸಾವಿರ ಮರಳಿಸಿ ಮಾದರಿಯಾದ ಆಟೊ ಚಾಲಕ

ಉಡುಪಿ: ಮಹಿಳೆಯೊಬ್ಬರು ತನ್ನ ಆಟೊ ರಿಕ್ಷಾದಲ್ಲಿ ಮರೆತು ಬಿಟ್ಟು ಹೋಗಿದ್ದ 50 ಸಾವಿರ ರೂ.ಗಳನ್ನು ಮರಳಿ ನೀಡುವ ಮೂಲಕ ಆಟೊ ಚಾಲಕ ಮಾನವೀಯತೆ ಮೆರೆದ ಘಟನೆ ಕಟಪಾಡಿಯಲ್ಲಿ ನಡೆದಿದೆ. ಆಟೊ ಚಾಲಕ ಅಂಬಲಪಾಡಿ ಜಯ ಶೆಟ್ಟಿ ಅವರ ಆಟೊದಲ್ಲಿ ಬುಧವಾರ ಬೆಳಗ್ಗೆ ಕುರ್ಕಾಲಿನಿಂದ ಮಹಿಳೆಯೊಬ್ಬರು ಕಟಪಾಡಿಗೆ ಬಾಡಿಗೆ ಮಾಡಿಕೊಂಡು ಬಂದಿದ್ದರು. ಆದರೆ ಅವರು‌ ಇಳಿಯುವ ಗಡಿಬಿಡಿಯಲ್ಲಿ 50 ಸಾವಿರ ರೂ.ಗಳ ಚೀಲವನ್ನು ರಿಕ್ಷಾದಲ್ಲೇ ಮರೆತುಬಿಟ್ಟು ಹೋಗಿದ್ದರು. ಆ ಮಹಿಳೆಯನ್ನು ಕಟಪಾಡಿ ಬಸ್ ನಿಲ್ದಾಣಕ್ಕೆ ಬಿಟ್ಟು ಉಡುಪಿಯ ಅಂಬಲಪಾಡಿ […]

ವಿದ್ಯಾರ್ಥಿಗಳನ್ನು ಉಗ್ರ ಸಂಘಟನೆಗಳಿಗೆ ಸೇರಿಸುತ್ತಿದ್ದ ಶಿಕ್ಷಕರ ಬಂಧನ

ಶ್ರೀನಗರ: ಇಲ್ಲಿನ ವಿದ್ಯಾರ್ಥಿಗಳ ಬ್ರೈನ್ ವಾಶ್ ಮಾಡಿ ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸುತ್ತಿದ್ದ ಮೂವರು ಶಿಕ್ಷಕರನ್ನು ರಾಷ್ಟ್ರೀಯ ತನಿಖಾ ತಂಡದ (ಐಎನ್ ಎ) ಪೊಲೀಸರು ಬಂಧಿಸಿದ್ದಾರೆ. ಶ್ರೀನಗರದ ಮೂವರು ಶಿಕ್ಷಕರಾದ ಅಬ್ದುಲ್ ಅಹಾದ್ ಭಟ್, ಮಹಮ್ಮದ್ ಯೂಸುಫ್ ವಾನಿ ಮತ್ತು ರೌಫ್ ಭಟ್ ಎಂಬುವವರನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಇವರು ಮದರಸಾಗಳಲ್ಲಿ ಉಗ್ರ ಸಂಘಟನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದರು ಎನ್ನಲಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ 13 ವಿದ್ಯಾರ್ಥಿಗಳು ಕಣ್ಮರೆಯಾಗಿದ್ದು, ಅವರನ್ನು ಪತ್ತೆ ಹಚ್ಚುವಾಗ ಈ ವಿಷಯ ಹೊರಬಂದಿದೆ. […]

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಮಾಣಿಕ್‌ಪುರದಲ್ಲಿ ಮಂಗಳವಾರ ನಡೆದಿದೆ. ಅಕ್ಟೋಬರ್ 8ರಂದು ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಮಗಳನ್ನು ಅತ್ಯಾಚಾರ ಎಸಗಿದ ಆರೋಪಿಗಳು, ಆಕೆಯ ಕೈಕಾಲುಗಳನ್ನು ಕಟ್ಟಿದ್ದರು. ಪೊಲೀಸರು ಆಕೆಯನ್ನು ಮನೆಗೆ ಕರೆತಂದರು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಿಲ್ಲ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ. ಸಂತ್ರಸ್ತೆಯ ಕುಟುಂಬ ಸದಸ್ಯರು ನೀಡಿದ ದೂರಿನ ಅನ್ವಯ ಗ್ರಾಮದ […]

ಆನೆಯ ಮೇಲೆ ಯೋಗಾಸನ; ಉರುಳಿಬಿದ್ದ ಬಾಬಾ ರಾಮ್‌ದೇವ್‌

ನವದೆಹಲಿ: ಪತಂಜಲಿ ಸಂಸ್ಥೆ ಸಂಸ್ಥಾಪಕ ಯೋಗಗುರು ಬಾಬಾ ರಾಮ್‌ದೇವ್‌ ಅವರು ಆನೆಯ ಮೇಲೆ ಕುಳಿತು ಯೋಗಾಸನ ಮಾಡಲು ಹೋಗಿ ಉರುಳಿಬಿದ್ದ ಘಟನೆ ಮಥುರಾದಲ್ಲಿ ನಡೆದಿದೆ. ಆನೆಯ ಮೇಲೆ ಏರಿ ಕುಳಿತುಕೊಂಡಿದ್ದ ಬಾಬಾ ರಾಮ್‌ದೇವ್‌ ಅವರು ಯೋಗಾಸನ ಮಾಡುತ್ತಿದ್ದರು. ಈ ವೇಳೆ ಆನೆ ತನ್ನ ದೇಹವನ್ನು ಅಲುಗಾಡಿಸಿದ್ದರಿಂದ ಆಯ ತಪ್ಪಿದ ರಾಮ್‌ದೇವ್‌ ಅವರು ಆನೆಯ ಮೇಲಿನಿಂದ ಕೆಳಕ್ಕೆ ಬಿದ್ದಿದ್ದಾರೆ. ಅವರು ಕೆಳಗೆ ಬೀಳುವ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿದ್ದು, ಬಾಬಾ ರಾಮ್‌ದೇವ್‌ ಶೀಘ್ರ ಗುಣಮುಖರಾಗಲಿ […]