ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಿ: ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕಾ ಬೆಳೆ ಸೇರಿದಂತೆ ಮನೆ ಹಾನಿಯ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಷ್ಟ ಅಂದಾಜಿಸುವುದರೊಂದಿಗೆ ಸರಕಾರದ ಮಾರ್ಗ ಸೂಚಿಯಂತೆ ಬಾಕಿ ಉಳಿದ ನಷ್ಟ ಪರಿಹಾರವನ್ನು ಶೀಘ್ರದಲ್ಲಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈವರೆಗೂ ಮಳೆಯಿಂದ ರಸ್ತೆ , ಸೇತುವೆ, ಕೃಷಿ, […]
ಅಮಾಸೆಬೈಲು ಯುವತಿ ಅತ್ಯಾಚಾರ ಪ್ರಕರಣ: ಆರೋಪಿಗೆ ಏಳು ವರ್ಷ ಶಿಕ್ಷೆ
ಕುಂದಾಪುರ: ಕಳೆದ 4 ವರ್ಷಗಳ ಹಿಂದೆ ಅಮಾಸೆಬೈಲು ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಂಗಡಿ ಎಂಬಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಕುಂದಾಪುರದ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಹೊಸಂಗಡಿಯ ನಿವಾಸಿ ಶಂಕರ್ ನಾಯ್ಕ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ 2016ರ ಸೆ.18ರಂದು ಹೊಸಂಗಡಿಯ 19 ವರ್ಷದ ಯುವತಿಯ ಮನೆಯೊಳಗೆ ನುಗ್ಗಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಈ […]
ಉಡುಪಿ: ಮೂರು ಲಕ್ಷ ಮೌಲ್ಯದ ಗಾಂಜಾ, ಅಕ್ರಮ ಮದ್ಯ ವಶ: ನಾಲ್ವರ ಬಂಧನ
ಉಡುಪಿ: ಅಬಕಾರಿ ಇಲಾಖೆಯು ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ 14ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 3 ಲಕ್ಷ ಮೌಲ್ಯದ 429 ಗ್ರಾಂ ಗಾಂಜಾ, 29.520 ಲೀ. ಅಕ್ರಮ ಮದ್ಯ ಹಾಗೂ 19.500 ಲೀ. ಗೋವಾ ಮದ್ಯ ವಶಪಡಿಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿಲಾಗಿದ್ದು, ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ತಿಳಿಸಿದ್ದಾರೆ.
ಆಹಾರ ಕಿಟ್ ಹಗರಣ: ಕಾರ್ಕಳ ಶಾಸಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು
ಕಾರ್ಕಳ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕರ್ನಾಟಕ ಕಟ್ಟಡ ಕಾರ್ಮಿಕ ಇಲಾಖೆಯು ಕಾರ್ಕಳಕ್ಕೆ 44,95,000 ಮೌಲ್ಯದ 5,000 ಆಹಾರ ಕಿಟ್ಟನ್ನು ಬಿಡುಗಡೆಗೊಳಿಸಿದ್ದು, ಈ ಆಹಾರ ಕಿಟ್ಟನ್ನು ಯಾರೊಬ್ಬರಿಗೂ ವಿತರಿಸಿದೆ ಬೋಗಸ್ ಪಟ್ಟಿಯನ್ನು ತಯಾರಿಸಿ ಭ್ರಷ್ಟಚಾರ ನಡೆಸಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯ ಲೋಕಾಯುಕ್ತರ ಕಚೇರಿಯಲ್ಲಿ ದೂರು ಸಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಪುರಸಭಾ ಸದಸ್ಯ ಶುಭದ್ ರಾವ್ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ ಅನುದಾನದಲ್ಲಿ ಕಾರ್ಕಳ […]
ರೈಲ್ವೆ ಯಾತ್ರಿ ಸಂಘದ ವಾರ್ಷಿಕ ಮಹಾಸಭೆ: ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಶ್ರದ್ಧಾಂಜಲಿ
ಉಡುಪಿ: ಉಡುಪಿ ರೈಲ್ವೆ ಯಾತ್ರಿ ಸಂಘದ 2020-21ನೇ ಸಾಲಿನ ಮಹಾಸಭೆಯು ಗುರುವಾರ ಉಡುಪಿ ಬಳಕೆದಾರರ ವೇದಿಕೆ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಆರ್.ಎಲ್. ಡಯಾಸ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಈಚೆಗೆ ನಿಧನರಾದ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಸಲ್ಲಿಸಲಾಯಿತು. ಇತ್ತೀಚೆಗೆ ಅಗಲಿದ ಸಂಘದ ನಿರ್ದೇಶಕ ಸುಂದರ ಕೋಟ್ಯಾನ್ ಅವರಿಗೂ ನುಡಿನಮನ ಸಲ್ಲಿಸಲಾಯಿತು. ಸಂಘದ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ರಾಮಚಂದ್ರ ಆಚಾರ್ಯ ರವರು ಲೆಕ್ಕಪತ್ರ ವರದಿಯನ್ನು ಮಂಡಿಸಿದರು. […]