ಕೋವಿಡ್ -19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದ ಅಂಗಡಿ, ಹೋಟೆಲ್ ಗಳ ಪರವಾನಿಗೆ ರದ್ದುಪಡಿಸಲಾಗುವುದು: ಡಿಸಿ ಎಚ್ಚರಿಕೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಅಂಗಡಿ-ಮುಂಗಟ್ಟು, ಹೋಟೆಲ್‍ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು, ಮಾಲೀಕರು ಮತ್ತು ಸಿಬ್ಬಂದಿ ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸದೇ ಇರುವುದು ಕಂಡುಬಂದಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ತಾತ್ಕಾಲಿಕವಾಗಿ ಅಂಗಡಿ ಪರವಾನಗಿಯನ್ನು ರದ್ದುಪಡಿಸಿ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಜಿಪಂ ಕಚೇರಿಯಲ್ಲಿ ನಡೆದ ಕೋವಿಡ್ 19 ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ತಪ್ಪದೇ ಮಾಸ್ಕ್ ಗಳನ್ನು ಧರಿಸುವಂತೆ ಬಸ್ಸಿನ ನಿರ್ವಾಹಕರು ಎಚ್ಚರವಹಿಸಬೇಕು. ಹಾಗೆ […]

ಕೊರೊನಾ ತಡೆಗೆ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆ ಅಗತ್ಯ: ಡಿಸಿ ಜಗದೀಶ್

ಉಡುಪಿ: ಕೋವಿಡ್ ಸರಳ ಮಾರ್ಗಸೂಚಿಗಳಾದ ಮುಖಗವಸು ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು, ಕೈತೊಳೆಯುವುದು ಸೇರಿದಂತೆ ಶುಚಿತ್ವ ಕಾಪಾಡಿದಾಗ ಮಾತ್ರ ಕೊರೊನಾದಿಂದ ದೂರ ಉಳಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಕೋವಿಡ್-19 ರೋಗ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಂಬಂಧಿಸಿ ಕೋವಿಡ್-19 ತೀವ್ರ ಪ್ರಚಾರಾಂದೋಲನ ಕಾರ್ಯಕ್ರಮ ಅನುಷ್ಟಾನದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ರೋಗ ಬಂದು ಅದಕ್ಕೆ ಚಿಕಿತ್ಸೆ ಪಡೆಯುವ ಬದಲು ರೋಗ […]

ಮೂಡುಬಿದಿರೆ: ವಿದ್ಯಾಗಮ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕೊರೊನಾಗೆ ಬಲಿ

ಮೂಡಬಿದಿರೆ: ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿ ಪದ್ಮಾಕ್ಷಿ ಎನ್ ಅವರು ಇಂದು ಕೊರೊನಾ ಸೋಂಕಿನಿಂದ ನಿಧನ ಹೊಂದಿದರು. ಅವರಿಗೆ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುವಾಗ ಕೊರೊನಾ ಸೋಂಕು ತಗಲಿತ್ತು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಪದ್ಮಾಕ್ಷಿಯವರ ಪತಿಗೆ ಸಹ ಕೊರೋನಾ ಸೋಂಕು ತಗುಲಿದೆ. ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಆದರೆ ಚಿಕಿತ್ಸೆಯಿಂದ ಅವರೀಗ ಚೇತರಿಸಿಕೊಂಡಿದ್ದಾರೆ. […]

ಬೈಂದೂರು: ಓಮ್ನಿ ಕಾರನ್ನು ಬೆನ್ನಟ್ಟಲು ಹೋದ ಪೊಲೀಸ್ ಜೀಪ್ ಪಲ್ಟಿ

ಬೈಂದೂರು: ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಓಮ್ಮಿ ಕಾರನ್ನು ಬೆನ್ನಟ್ಟಲು ಹೋಗಿ ಪೊಲೀಸ್ ಜೀಪೊಂದು ಪಲ್ಟಿಯಾದ ಘಟನೆ ಬೈಂದೂರಿನ ಒತ್ತಿನೆಣೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಪೊಲೀಸ್ ಜೀಪ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವೃತ್ತ ನಿರೀಕ್ಷಕ ಹಾಗೂ ಜೀಪ್ ಚಾಲಕ ಗಾಯಗೊಂಡಿದ್ದಾರೆ. ಬೈಂದೂರಿನಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಮಾರುತಿ ಓಮ್ನಿ ಕಾರೊಂದು ಅನುಮಾನಾಸ್ಪದವಾಗಿ ಓಡಾಡುತ್ತಿತ್ತು. ಇದೇ ವೇಳೆ ಗಸ್ತಿನಲ್ಲಿದ್ದ ವೃತ್ತ ನಿರೀಕ್ಷಕ ಸುರೇಶ್ ನಾಯ್ಕ್ ಹಾಗೂ ಅವರ ಚಾಲಕ ಹೇಮರಾಜ್ ಅವರು ರೌಂಡ್ಸ್ ಗೆ ಬಂದಿದ್ದು, […]

ಹೊಳೆಗೆ ಬಿದ್ದ ಕಾರು: ನಾಲ್ವರ ದುರ್ಮರಣ

ಸಿದ್ದಾಪುರ: ಹೊಳೆಗೆ ಕಾರೊಂದು ಬಿದ್ದ ಪರಿಣಾಮ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಿದ್ದಾಪುರ ತಾಲ್ಲೂಕಿನ ಹೆಗ್ಗರಣಿ ಸಮೀಪದ ಕೋಡನಮನೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಹುಬ್ಬಳ್ಳಿಯ ನಿಶ್ಚಲ (20), ರೋಶನ್ (20), ಸುಷ್ಮಾ (20) ಮತ್ತು ಅಕ್ಷತಾ ಹಿರೇಮಠ (21) ಎಂದು ಗುರುತಿಸಲಾಗಿದೆ. ಸ್ನೇಹಿತ ಮನೆ ಬಂದು ಬುಧವಾರ ರಾತ್ರಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆಗೆ ಬಿದ್ದಿದೆ. ವಿಪರೀತ ಮಳೆಯಿಂದಾಗಿ ಹೊಳೆ ತುಂಬಿ ಹರಿಯುತ್ತಿದ್ದು, ನೀರು ಕಡಿಮೆಯಾದ […]