ಕುಂದಾಪುರ: ವಿದ್ಯುತ್ ತಗುಲಿ ಹತ್ತನೇ ತರಗತಿಯ ವಿದ್ಯಾರ್ಥಿ ಮೃತ್ಯು
ಕುಂದಾಪುರ: ವಿದ್ಯುತ್ ತಗುಲಿ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕುಂದಾಪುರದ ಉಪ್ಪಿನಕುದ್ರು ಗ್ರಾಮದ ಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ ಶನಿವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಉಪ್ಪಿನಕುದ್ರು ಗ್ರಾಮದ ಗಂಗಾಧರ ಆಚಾರ್ ಅವರ ಮಗ ಧನುಷ್ (16) ಎಂದು ಗುರುತಿಸಲಾಗಿದೆ. ಈತ ಹತ್ತನೇ ತರಗತಿಯ ವಿದ್ಯಾರ್ಥಿ. ಧನುಷ್ ಅ .17ರ ಶನಿವಾರ 8 ಗಂಟೆಗೆ ಮನೆ ಸಮೀಪದ ಶ್ರೀ ಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ತೆರಳಿದ್ದನು. 9. 30ರ ಸುಮಾರಿಗೆ ದೇವಸ್ಥಾನದ ಕಂಪೌಂಡ್ ಗೆ […]
ಕಾಪು ಬೀಚ್ ನಲ್ಲಿ ಇಬ್ಬರು ಯುವಕರು ನೀರುಪಾಲು: ಓರ್ವನ ಮೃತದೇಹ ಪತ್ತೆ
ಕಾಪು: ಕಾಪು ಬೀಚ್ ನಲ್ಲಿ ಈಜಲು ಇಳಿದ ಇಬ್ಬರು ಯುವಕರು ನೀರುಪಾಲಾದ ಘಟನೆ ಇಂದು ಸಂಜೆ ಸಂಭವಿಸಿದೆ. ಬೆಂಗಳೂರಿನ ಕಾರ್ತಿಕ್ ಮತ್ತು ರೂಪೇಶ್ ನೀರುಪಾಲಾದ ಯುವಕರು. ಇವರಲ್ಲಿ ರೂಪೇಶ್ ಎಂಬಾತನ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದ 5 ಮಂದಿ ಯುವಕರ ತಂಡ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದು, ಇದೇ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸಮುದ್ರದ ನೀರಿನಲ್ಲಿ ಮುಳುಗಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಮೋದರ ಪುತ್ರನ್, ಚಂದ್ರಹಾಸ ಅವರು […]
ಕೊರೊನಾ: ಡಿಸಿಎಂ ಗೋವಿಂದ ಕಾರಜೋಳ ಪುತ್ರನ ಸ್ಥಿತಿ ಗಂಭೀರ
ಬೆಂಗಳೂರು: ಕೋವಿಡ್ನಿಂದ ಬಳಲುತ್ತಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರ ಡಾ. ಗೋಪಾಲ್ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಮಧ್ಯಾಹ್ನ ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೋವಿಡ್ ದೃಢಪಟ್ಟ ಕಾರಣ ಗೋಪಾಲ್ ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದ 24 ದಿನಗಳಿಂದ ವೆಂಟಿಲೇಟ್ರ್ನಲ್ಲಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ, ವೈದ್ಯರ ಸಲಹೆಯಂತೆ ಚೆನ್ನೈನ ಆಸ್ಪತ್ರೆಗೆ ಕರೆದೊಯ್ಯಲು ಮೊದಲು ತೀರ್ಮಾನಿಸಲಾಗಿತ್ತು. ಬಳಿಕ, ಹೈದರಾಬಾದ್ಗೆ ಕರೆದುಕೊಂಡು ಹೋಗಲು ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ. […]
ಕುಂದಾಪುರ: ನಕಲಿ ದಾಖಲೆ ಸೃಷ್ಟಿಸಿ ಕರ್ಣಾಟಕ ಬ್ಯಾಂಕ್ ಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ದಂಪತಿ
ಉಡುಪಿ: ಸಿದ್ದಾಪುರದ ಗೇರುಬೀಜ ಕಾರ್ಖಾನೆಯ ಮಾಲೀಕ ಹಾಗೂ ಆತನ ಪತ್ನಿ ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕರ್ಣಾಟಕ ಬ್ಯಾಂಕ್ ಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಘಟನೆ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಾಪುರ ಗಜಾನನಾ ಕ್ಯಾಶೂ ಇಂಡಸ್ಟ್ರೀಸ್ ಮಾಲೀಕ ರಾಘವೇಂದ್ರ ಹೆಮ್ಮಣ್ಣ ಮತ್ತು ಆತನ ಪತ್ನಿ ಆಶಾಕಿರಣ ಹೆಮ್ಮಣ್ಣ ಬ್ಯಾಂಕ್ ಗೆ ವಂಚನೆ ಮಾಡಿದ ದಂಪತಿ. ಇವರಿಬ್ಬರು ಹೆಮ್ಸ್ ಪುಡ್ಸ್ ಪ್ರೈ ಲಿಮಿಟೆಡ್ ಕಂಪೆನಿಯನ್ನು ತೆರೆದು ವಾರ್ಷಿಕ 10,90,60,855 ವಾಹಿವಾಟು ಆಗುತ್ತಿದೆಂದು ನಕಲಿ ಆಡಿಟ್ ಅನ್ನು […]
ಬಿಹಾರದಲ್ಲಿ ನಿತೀಶ್ ಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ: ಅಮಿತ್ ಶಾ
ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಹಾರದಲ್ಲಿ ಮತ್ತೊಮ್ಮೆ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗಲಿದೆ. ನಿತೀಶ್ ಕುಮಾರ್ ಅವರೇ ಬಿಹಾರದ ಮುಂದಿನ ಮುಖ್ಯಮಂತ್ರಿ. ಈ ಬಗ್ಗೆ ನಾವು ಸಾರ್ವಜನಿಕವಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದು, ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಶನಿವಾರ ಸುದ್ದಿ ವಾಹಿನಿಯೊಂದರಲ್ಲಿ ಸಂದರ್ಶನದಲ್ಲಿ ಬಿಜೆಪಿ ಬಿಹಾರದಲ್ಲಿ ಮುಖ್ಯಮಂತ್ರಿ […]