ಉಡುಪಿ: ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆ

ಉಡುಪಿ: ಮಕ್ಕಳ ದಿನಾಚರಣೆ ಅಂಗವಾಗಿ 14 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮಕ್ಕಳ ಸಾಗಾಣಿಕೆ ವಿರುದ್ಧ, ಮಕ್ಕಳ ಭಿಕ್ಷಾಟನೆ ವಿರುದ್ಧ ಹಾಗೂ ಜಾಲತಾಣ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಸಲುವಾಗಿ ವಿವಿಧ ಆನ್‍ಲೈನ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ತಾವು ಸಿದ್ಧಪಡಿಸಿದ ಪ್ರಬಂಧ, ಚಿತ್ರಕಲೆ, ಭಿತ್ತಿಪತ್ರ ತಯಾರಿಸುವುದು, ಪದ್ಯಗಳ ಸಾಫ್ಟ್ ಪ್ರತಿಯನ್ನು ಇ-ಮೇಲ್ ([email protected]) ಗೆ ನವೆಂಬರ್ 4 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ( icps.karnataka.gov.in) ಸಂಪರ್ಕಿಸುವಂತೆ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಮಹಿಳಾ […]

ಉಡುಪಿ: ಉಚಿತ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನ

udupixpress

ಉಡುಪಿ: ಉಡುಪಿಯ ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಎಸ್ಸೆಸ್ಸೆಲ್ಸಿ ತೇರ್ಗಡೆಯಾಗಿರುವ ಅಭ್ಯರ್ಥಿಗಳಿಂದ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 2950 101, 98805 10585 ಸಂಪರ್ಕಿಸುವಂತೆ ಕೇಂದ್ರದ ಪ್ರಕಟಣೆ ತಿಳಿಸಿದೆ.

ಉಡುಪಿ: ಐಟಿಐ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಸರಕಾರಿ ಐ.ಟಿ.ಐ ಸಂಸ್ಥೆಯಲ್ಲಿ 1 ವರ್ಷ ಮತ್ತು 2 ವರ್ಷದ ಐ.ಟಿ.ಐ ಕೋರ್ಸ್‍ಗಳ ಪ್ರವೇಶಾತಿಗಾಗಿ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ದೂರವಾಣಿ ಸಂಖ್ಯೆ 0820 2986 145 ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಸ್ಟೆನೋಗ್ರಾಫರ್ ಗ್ರೇಡ್ ‘ಸಿ’, ‘ಡಿ’ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆನ್‍ಲೈನ್ ಸ್ಫರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ (www.ssckkr.kar.nic.in) ಅಥವಾ (http://ssc.nic.in) ಅಥವಾ ದೂರವಾಣಿ ಸಂಖ್ಯೆ 080 2550 2520, 94838 62020 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಸಾವು

ಉಡುಪಿ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯ ಪುತ್ತೂರು ಗ್ರಾಮದ ಆಶೀರ್ವಾದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುತ್ತೂರು ಗ್ರಾಮದ ರಾಮಚಂದ್ರ ರಾವ್ ಎಂದು ಗುರುತಿಸಲಾಗಿದೆ. ಇವರು ಇಂದು (ಅ. 23) ಬೆಳಿಗ್ಗೆ 10 ಗಂಟೆ ಸುಮಾರಿಗೆ ಆಶೀರ್ವಾದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ದಾಟಲು ನಿಂತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುವ ಕಾರೊಂದು ಡಿಕ್ಕಿ […]