ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು: ಶ್ಯಾಮಲ ಕುಂದರ್
ಉಡುಪಿ: ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಶಿಕ್ಷಣ ಕೊಡುವ ಕಾರ್ಯದ ಜತೆಗೆ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಕುಂದರ್ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳು ಪ್ರತಿಶತ 100 ರಷ್ಟು ಅನುಷ್ಠಾನವಾಗಬೇಕು ಎಂದು ತಿಳಿಸಿದರು. ದೌಜನ್ಯಕ್ಕೆ […]
ಬಂಟ್ವಾಳ: ಹಾಡುಹಗಲೇ ಯುವಕನ ಬರ್ಬರ ಹತ್ಯೆ
ಬಂಟ್ವಾಳ: ಇಲ್ಲಿನ ಮೆಲ್ಕಾರ್ ಸಮೀಪದ ಗುಡ್ಡೆಯಂಗಡಿಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಯುವಕನನ್ನು ಕಲ್ಕಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಇಂದು ಸಂಜೆ ಕಾರಲ್ಲಿ ಬಂದ ಹಂತಕರ ತಂಡವು ಲಾಂಗ್ ನಿಂದ ಫಾರೂಕ್ ಗೆ ಹಲ್ಲೆ ನಡೆಸಿದ್ದು, ಇದರಿಂದ ಫಾರೂಕ್ ತೀವ್ರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾನೆ. ಸ್ಥಳೀಯರು ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಫಾರೂಕ್ ಬದುಕುಳಿಯಲಿಲ್ಲ. ಈತನ ಕೂಡ ರೌಡಿಶೀಟರ್ ಆಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗಿದ್ದ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆ ಎಂದು […]
‘ಅಂಡರ್ ವರ್ಲ್ಡ್’ ಡಾನ್ ಪಟ್ಟಕ್ಕಾಗಿ ಕರಾವಳಿಯ ಪಾತಕಿಗಳಿಂದ ಕಸರತ್ತು: ರೇಸ್ ನಲ್ಲಿ ಡಾನ್ ವಿಕ್ಕಿ ಶೆಟ್ಟಿ
ಉಡುಪಿ: ದಶಕಗಳ ಕಾಲ ಭೂಗತ ಲೋಕದ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ನಿಧನದ ಬಳಿಕ ಡಾನ್ ಪಟ್ಟ ಖಾಲಿಯಾಗಿದೆ. ಇದೀಗ ಡಾನ್ ಪಟ್ಟದ ಮೇಲೆ ಹಲವು ಪಾತಕಿಗಳ ಕಣ್ಣು ನೆಟ್ಟಿದ್ದು, ಡಾನ್ ಗಳ ಮಧ್ಯೆ ಪೈಪೋಟಿ ಶುರುವಾಗಿದೆ. ಇದಕ್ಕೆ ಇತ್ತೀಚೆಗೆ ನಡೆದ ಸರಣಿ ಕೊಲೆಗಳೇ ಸಾಕ್ಷಿ. ಕರಾವಳಿ ಮೂಲದ ಪಾತಕಿಗಳು ಭೂಗತ ಲೋಕದ ಡಾನ್ ಪಟ್ಟಕ್ಕಾಗಿ ಕಸರತ್ತು ಮಾಡುತ್ತಿದ್ದಾರೆ. ಡಾನ್ ಪಟ್ಟಕ್ಕಾಗಿ ಪಾತಕಿಗಳ ನಡುವೆ ಬಿಗ್ ಪ್ಲ್ಯಾನ್ ನಡೆಯುತ್ತಿದೆ. ಭೂಗತ ಪಾತಕಿಗಳಾದ ವಿಕ್ಕಿ ಶೆಟ್ಟಿ, ರವಿ […]
ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ (61) ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗಾಗಿ ನವದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಪಿಲ್ ಅವರಿಗೆ ಶುಕ್ರವಾರ ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಆ್ಯಂಜಿಯೊಪ್ಲಾಸ್ಟಿ ಮಾಡಲಾಗುತ್ತಿದೆ. ಸದ್ಯ ಕಪಿಲ್ ದೇವ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 1983ರಲ್ಲಿ ಭಾರತ ಮೊದಲ ಬಾರಿಗೆ ಕಪಿಲ್ ದೇವ್ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದುಗೊಂಡಿತ್ತು. ಈ ವಿಶ್ವಕಪ್ ನಲ್ಲಿ ಅಲ್ […]
ನವೆಂಬರ್ 17ರಿಂದ ಪದವಿ ಕಾಲೇಜು ಆರಂಭ: ಡಿಸಿಎಂ ಅಶ್ವಥ್ ನಾರಾಯಣ
ಬೆಂಗಳೂರು: ರಾಜ್ಯ ಸರ್ಕಾರವು ನವೆಂಬರ್ 17ರಿಂದ ಇಂಜನಿಯರ್, ಡಿಪ್ಲೊಮಾ, ಪಿಜಿ, ಪದವಿ ಕಾಲೇಜುಗಳನ್ನು ಮತ್ತೆ ಆರಂಭಿಸಲು ನಿರ್ಧರಿಸಿದೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನವೆಂಬರ್ 17ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ತರಗತಿಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿಯೂ ಕಲಿಯಬಹುದು ಅಥವಾ ತರಗತಿಗಳಿಗೂ ಬರಬಹುದು. ತರಗತಿಗೆ ಬರುವ ಮೊದಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರಿಂದ ಅನುಮತಿ ಪತ್ರ ತರಬೇಕು ಎಂದು ಡಿಸಿಎಂ ಅಶ್ವಥನಾರಾಯಣ ತಿಳಿಸಿದರು. […]