ಉಡುಪಿ ನಗರಸಭೆ: ನೂತನ ಅಧ್ಯಕ್ಷರಾಗಿ ಬಿಜೆಪಿಯ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷರಾಗಿ ಲಕ್ಷ್ಮಿ ಮಂಜುನಾಥ್ ಕೊಳ ಆಯ್ಕೆ

ಉಡುಪಿ: ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪರ್ಕಳ ವಾರ್ಡ್ ನ ಬಿಜೆಪಿ ಸದಸ್ಯೆ ಸುಮಿತ್ರಾ ಆರ್. ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಮಲ್ಪೆ ಕೊಳ ವಾರ್ಡ್ ನ ಸದಸ್ಯೆ ಲಕ್ಷ್ಮೀ ಮಂಜುನಾಥ್ ಕೊಳ ಅವರು ಆಯ್ಕೆಯಾಗಿದ್ದಾರೆ. ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತಿಯಲ್ಲಿ ನಡೆದ ಪಕ್ಷದ ವರಿಷ್ಠರ ಸಮಿತಿ ಸಭೆಯಲ್ಲಿ ಇವರನ್ನು ನೇಮಕ ಮಾಡಲಾಗಿದೆ. ಸುಮಿತ್ರಾ ನಾಯಕ್ ಮೂರು ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಲಕ್ಷ್ಮೀ ಮಂಜುನಾಥ್ […]

ವಿಪ್ ಉಲ್ಲಂಘನೆ: ಕಾಪು ಪುರಸಭೆಯ ಕಾಂಗ್ರೆಸ್ ಸದಸ್ಯ ಅಮಾನತು

ಉಡುಪಿ: ಬುಧವಾರ ನಡೆದ ಕಾಪು ಪುರಸಭಾ ಅಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಪುರಸಭಾ ಸದಸ್ಯ ಸುರೇಶ್ ದೇವಾಡಿಗ ಅವರನ್ನು ಕಾಂಗ್ರೆಸ್ ಉಚ್ಚಾಟಿಸಿದೆ. ಸುರೇಶ್ ದೇವಾಡಿಗ ಚುನಾವಣಾ ಪ್ರಕ್ರಿಯೆಗೆ ಆಗಮಿಸದೆ ವಿಪ್ ಉಲ್ಲಂಘನೆ ಮಾಡಿದ್ದರು. ಹಾಗಾಗಿ ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ತಾಲೂಕಿನ ಫರಂಗಿಪೇಟೆಯ ಫೋಟೋಗ್ರಾಫರ್, ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಕೊಟ್ಟಿಂಜ ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಅಮ್ಮೆಮ್ಮಾರು ನಿವಾಸಿಗಳಾದ ಮಹಮ್ಮದ್ ಅರ್ಷದ್(19), ಅಬ್ದುಲ್ ರೆಹಮಾನ್ (22) ಮತ್ತು ಮಹಮ್ಮದ್ ಸೈಫುದ್ದೀನ್(22) ಬಂಧಿತ ಆರೋಪಿಗಳು. ಇನ್ನೊಬ್ಬ ಆರೋಪಿ ಸವಾದ್‌ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಫರಂಗಿಪೇಟೆಯಲ್ಲಿ ಫೋಟೋ ಸ್ಟುಡಿಯೋವೊಂದನ್ನು ನಡೆಸುತ್ತಿದ್ದ ದಿನೇಶ ಅವರ ಮೇಲೆ ಬುಧವಾರ ರಾತ್ರಿ ಏಕಾಏಕಿಯಾಗಿ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ […]

ಪೆರ್ಡೂರು: ದೊಡ್ಡಜಾತಿಯ ಬಸವನ ಹುಳ ಪತ್ತೆ

ಕಾರ್ಕಳ: ಬಸವನ ಹುಳವನ್ನು ಸಾಮಾನ್ಯವಾಗಿ ಎಲ್ಲರೂ ನೋಡಿರುತ್ತಾರೆ. ಮಳೆಗಾಲದಲ್ಲಿ ಹಾಗೂ ನೀರು ಹರಿಯುವ ಸ್ಥಳಗಳಲ್ಲಿ ಇವು ಕಂಡುಬರುವುದು ಸಾಮಾನ್ಯ. ಆದರೆ ಇಲ್ಲೊಂದು ದೊಡ್ಡ ಗಾತ್ರದ ಬಸವನಹುಳ ಪತ್ತೆಯಾಗಿದ್ದು, ಬಹಳಷ್ಟು ಅಚ್ಚರಿಗೆ ಕಾರಣವಾಗಿದೆ. ಪೆರ್ಡೂರು ಎಳ್ಳಾರೆ ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನದ ಬಳಿಯ ಶೇಖರ ನಾಯ್ಕ್ ಅವರ ಬಾಳೆ ಗಿಡದಲ್ಲಿ ದೊಡ್ಡ ಜಾತಿಯ ಬಸವನ ಹುಳ ಕಂಡುಬಂದಿದೆ. ಈ ದೊಡ್ಡಜಾತಿಯ ಬಸವನ ಹುಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್ ಕೂಡ ಆಗುತ್ತಿದೆ.

ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ

ಮಲ್ಪೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನೀಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ನಾಗರಿಕ ಸೇವಾ ಟ್ರಸ್ಟ್ ಉಡುಪಿ ಇದರ ವತಿಯಿಂದ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯಲು ಬಂದಿದ್ದ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, […]