ಗೋವು ಸಾಕಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಕಡ್ಡಾಯ ಆದೇಶ ಹಿಂಪಡೆಯಿರಿ: ಯಶ್‍ಪಾಲ್ ಸುವರ್ಣ ಆಗ್ರಹ
ಉಡುಪಿ: ರಾಜ್ಯದಲ್ಲಿ ಗೋಶಾಲೆ, ಡೇರಿ ಫಾರಂ ಹಾಗೂ ಹೈನುಗಾರಿಕಗೆ ದನಗಳನ್ನು ಸಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯುವಂತೆ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸಿ ರಾಜ್ಯ ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ದ.ಕ. ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಗೋ ಮಾತೆಯಾಗಿ ಶ್ರದ್ಧಾ ಭಕ್ತಿಯಿಂದ ಸಾಕುವ ಗೋವುಗಳಿಗೆ ಭಾರತದ ಸಂಸ್ಕೃತಿಯಲ್ಲಿ ಪ್ರಧಾನ ಪಾತ್ರವಿದೆ. ಗೋವುಗಳು ಕೃಷಿ ಪ್ರಧಾನವಾದ ನಮ್ಮ ದೇಶದ ಆರ್ಥಿಕತೆಗೆ ಪೂರಕವಾಗಿ ರೈತರ ಕೃಷಿ […]
ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜು ಕೈಗಾರಿಕಾ ಭೇಟಿ; ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆ
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟೇಶ್ವರದ ಸನ್‍ರೈಸ್ ಪೈಪ್ ಇಂಡಸ್ಟ್ರಿ ಮತ್ತು ರಾಜಾರಾಮ್ ಪೊಲಿಮರ್ಸ್ ಇಂಡಸ್ಟ್ರಿ ಕೋಟೇಶ್ವರ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸನ್‍ರೈಸ್ ಕೈಗಾರಿಕೆಯ ವ್ಯವಸ್ಥಾಪಕರಾದ ಕುಮಾರ್ ಹಾಗೂ ರಾಜರಾಮ್ ಪೊಲಿಮರ್ಸ್ ಇಂಡಸ್ಟ್ರಿಯ ಪಾಲುದಾರರಾದ ವಿಘ್ನೇಶ್ ಕಾಮತ್ ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆಯ ಕುರಿತು ಉಪನ್ಯಾಸ ನೀಡಿದರು. ಜೊತೆಗೆ ಯಂತ್ರಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಮಾರ್ಗದರ್ಶನ […]
ದುಷ್ಕರ್ಮಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ
ಮಂಗಳೂರು: ಮಂಗಳೂರಿನ ಫನ್ನೀರ್ ಎಂಎಫ್ ಸಿ ಹೋಟೆಲ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಇಂದು ಸಂಜೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಸಮೋಸ ಖರೀದಿಸಲು ಬಂದ ದುಷ್ಕರ್ಮಿಗಳು ಹೋಟೆಲ್ ಸಿಬ್ಬಂದಿಯ ಜತೆ ವಿನಾ ಕಾರಣ ಜಗಳ ತೆಗೆದಿದ್ದಾರೆ. ಈ ವೇಳೆ ಕೆಲ ಸಮಯ ಹೋಟೆಲ್ ಸಿಬ್ಬಂದಿ ಹಾಗೂ ಅಪರಿಚಿತರ ದುಷ್ಕರ್ಮಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಕಿಡಿಗೇಡಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಹೋಟೆಲ್ ನ ಇಬ್ಬರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ […]
ಮಲಬಾರ್ ಚಾರಿಟೇಬಲ್ ಟ್ರಸ್ಟ್ ನಿಂದ ಬಡ ಯುವತಿಯ ಮದುವೆಗೆ ಎರಡು ಪವನ್ ಚಿನ್ನ ವಿತರಣೆ
ಉಡುಪಿ: ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಹೆಣ್ಣುಮಕ್ಕಳ ಮದುವೆಗೆ ಚಿನ್ನ ಕೊಡುವ ‘ಗೋಲ್ಡನ್ ಹಾರ್ಟ್’ ಯೋಜನೆಯಡಿ ನಿಶ್ಮಿತಾ ಎಂಬ ಫಲಾನುಭವಿಗೆ ಎರಡು ಪವನ್ ಚಿನ್ನವನ್ನು ನೀಡಲಾಯಿತು. ಇದು ಮಲಬಾರ್ ಚಾರಿಟೇಬಲ್ ಟ್ರಸ್ಟ್ ನ ಉಡುಪಿಯಲ್ಲಿ 15ನೇ ಯೋಜನೆಯಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಅವರು ಫಲಾನುಭವಿಯನ್ನು ಆಯ್ಕೆ ಮಾಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಮಲಬಾರ್ ಗೋಲ್ಡ್ ಉಡುಪಿ ಬ್ರಾಂಚ್ ನ ಮುಖ್ಯಸ್ಥ ಹಫೀಜ್ ರೆಹಮಾನ್, ಮಾರ್ಕೆಟಿಂಗ್ […]
ಪೆರ್ಡೂರು: ಅನ್ಯಕೋಮಿನ ಯುವಕನಿಂದ 17 ವರ್ಷದ ಯುವತಿಯ ಅಪಹರಣ
ಹಿರಿಯಡಕ: 17 ವರ್ಷದ ಅಪ್ರಾಪ್ತ ಯುವತಿಯೊಬ್ಬಳನ್ನು ಅನ್ಯಕೋಮಿನ ಯುವಕ ಅಪಹರಿಸಿದ ಘಟನೆ ಹಿರಿಯಡಕ ಠಾಣಾ ವ್ಯಾಪ್ತಿಯ ಪೆರ್ಡೂರಿನಲ್ಲಿ ನಡೆದಿದೆ. ಅ. 28ರಿಂದ ಯುವತಿ ನಾಪತ್ತೆಯಾಗಿದ್ದಾಳೆ. ಅಂದು ಬೆಳಿಗ್ಗೆ ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸಲು ಕಾಲೇಜಿಗೆ ಹೋದವಳು ಮರಳಿ ಮನೆಗೆ ಬರಲಿಲ್ಲ ಎಂದು ಮನೆಯವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಪಹರಣದ ಶಂಕೆ: ಈಕೆಯನ್ನು ಪೆರ್ಡೂರಿನ ಇಮ್ತಿಯಾಜ್ ಎಂಬ ಯುವಕನು ಅಪರಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆತ ಈಕೆಯೊಂದಿಗೆ ಮೊಬೈಲ್ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನೇ ಈ ಬಾಲಕಿಯನ್ನು ಅಪಹರಿಸಿರಬಹುದು […]